ಬ್ರೇಕಿಂಗ್ ನ್ಯೂಸ್
26-10-24 10:07 pm Mangalore Correspondent ಕರಾವಳಿ
ಮಂಗಳೂರು, ಅ.26: ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಫೋಟೊ ಬಳಸಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿರುವುದು ಪತ್ತೆಯಾಗಿದ್ದು, ಮಂಗಳೂರು ಸೈಬರ್ ಪೊಲೀಸರು ಸುಮೊಟೋ ಕೇಸು ದಾಖಲಿಸಿಕೊಂಡಿದ್ದಾರೆ.
ಶನಿವಾರ ಬೆಳಗ್ಗೆ ಪೊಲೀಸ್ ಕಮಿಷನರ್ ಫೋಟೋಗಳಿದ್ದ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿರುವುದನ್ನು ಗಮನಿಸಿ ಮಾಧ್ಯಮದವರು ಕಮಿಷನರ್ ಗಮನಕ್ಕೆ ತಂದಿದ್ದರು. ಕೂಡಲೇ ಅದು ತನ್ನದಲ್ಲ, ನಕಲಿ ಫೇಸ್ಬುಕ್ ಖಾತೆ. ದೂರು ದಾಖಲಿಸುತ್ತೇವೆ ಎಂದು ಹೇಳಿದ್ದರು. ಅಲ್ಲದೆ, ಯಾರು ಕೂಡ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಬೇಡಿ ಎಂದು ಹೇಳಿದ್ದರು.
ನಕಲಿ ಖಾತೆಗೆ ಸಂಬಂಧಿಸಿ ಮಂಗಳೂರಿನ ಉರ್ವಾದ ಸೈಬರ್ ಠಾಣೆಯಲ್ಲಿ ಸುಮೊಟೋ ಕೇಸು ದಾಖಲಿಸಿದ್ದಾರೆ. ಯಾರು ನಕಲಿ ಖಾತೆಯನ್ನು ಮಾಡಿದ್ದಾರೆ, ಯಾರು ಇದರ ಹಿಂದಿದ್ದಾರೆ ಎನ್ನುವುದರ ಬಗ್ಗೆ ತಿಳಿಯಲು ಫೇಸ್ಬುಕ್ ಕಂಪನಿಗೆ ಬರೆಯಲಾಗಿದೆ. ಇಪಿ ವಿಳಾಸವನ್ನು ಪತ್ತೆ ಮಾಡಿ ಕಂಪನಿಯವರು ಕೊಟ್ಟಲ್ಲಿ ಮುಂದಿನ ತನಿಖೆ ನಡೆಸಲು ಸಾಧ್ಯ ಎಂದು ಸೈಬರ್ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಶಶಿಕುಮಾರ್ ಇದ್ದಾಗಲೂ ಇದೇ ರೀತಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿತ್ತು. ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಸೇರಿದಂತೆ ಹೆಸರಾಂತ ವ್ಯಕ್ತಿಗಳ ಫೋಟೋ ಬಳಸಿ ವಾಟ್ಸಪ್ ನಂಬರ್, ಫೇಸ್ಬುಕ್ ಕ್ರಿಯೇಟ್ ಮಾಡುವುದು, ಆಮೂಲಕ ಹಣ ಪಡೆಯಲು ಯತ್ನಿಸುವುದು ಈ ಹಿಂದೆಯೂ ಆಗಿತ್ತು. ಅದರ ಬಗ್ಗೆ ತನಿಖೆ ಸರಿಯಾಗಿ ನಡೆದಿರಲಿಲ್ಲ.
Fake Facebook page of Mangalore police commissioner Anupam Agarwal created, case filed. Police commissioner has filed a Sumoto case against fraudsters who have created it.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm