ಬ್ರೇಕಿಂಗ್ ನ್ಯೂಸ್
31-10-24 07:03 pm Mangalore Correspondent ಕರಾವಳಿ
ಮಂಗಳೂರು, ಅ.31: ಕನ್ನಡ ಭಾಷೆಯಲ್ಲಿ ಲಭ್ಯವಾದ ಮೊಟ್ಟಮೊದಲ ಶಿಲಾ ಶಾಸನ ಎನಿಸಿರುವ “ಹಲ್ಮಿಡಿ ಶಾಸನ’ದ ಕಲ್ಲಿನ ಪ್ರತಿಕೃತಿಯನ್ನು ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. 'ಕರ್ನಾಟಕ ಸಂಭ್ರಮ-50’ರ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಹಲ್ಮಿಡಿ ಶಾಸನದ ಸವಿನೆನಪನ್ನು ಶಾಶ್ವತವಾಗಿಸುವುದು ಮತ್ತು ರಾಜ್ಯಾದ್ಯಂತ ಪ್ರಚಾರ ಪಡಿಸುವುದು ಯೋಜನೆಯ ಉದ್ದೇಶ.
ಇದಕ್ಕಾಗಿ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ವತಿಯಿಂದ ಹಲ್ಮಿಡಿ ಶಾಸನದ ಕಲ್ಲಿನ ಪ್ರತಿಕೃತಿ ರಚಿಸಲಾಗಿದೆ. ಎಲ್ಲ ಜಿಲ್ಲೆಗಳ ಜಿಲ್ಲಾಡಳಿತದ ವತಿಯಿಂದ ಶಿಲಾಶಾಸನವನ್ನು ಪ್ರತಿಷ್ಠಾಪಿಸಿ ನ.1ರಂದು ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಂದ ಅನಾವರಣಗೊಳಿಸಲು ಉದ್ದೇಶಿಸಲಾಗಿದೆ. ಎಚ್‌ಡಿ ಕೋಟೆಯಿಂದ ತರಿಸಿದ ಕಲ್ಲನ್ನು ಬಳಸಿ ಹಲ್ಮಿಡಿ ಶಿಲಾಶಾಸನದ ಪ್ರತಿಕೃತಿಯನ್ನು ಚಿಕ್ಕಮಗಳೂರಿನಲ್ಲಿ ಶಿಲ್ಪಕಾರರು ಸಿದ್ದಪಡಿಸಿದ್ದಾರೆ. ಅಲ್ಲಿಂದ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಈಗಾಗಲೇ ಕಲ್ಲಿನ ಪ್ರತಿಮೆಯನ್ನು ಕಳುಹಿಸಲಾಗಿದೆ. ಪ್ರತಿಷ್ಠಾಪನೆ ನಡೆಸಬೇಕಾದ ಜಿಲ್ಲಾ ಕೇಂದ್ರಗಳಲ್ಲಿ ಕಲ್ಲಿನ ಪ್ರತಿಕೃತಿ ತಂದು ನಿಲ್ಲಿಸಲಾಗಿದೆ.
ಪ್ರತಿಷ್ಠಾಪನೆ ನಡೆಸುವ ಕೆಳಭಾಗದಲ್ಲಿ ಕಾಂಕ್ರಿಟ್ ಫೌಂಡೇಶನ್, ಮಧ್ಯೆ ಗ್ರಾನೈಟ್ ಶಿಲೆ ಬಳಸಲಾಗಿದೆ. ಮಂಗಳೂರಿನ ಪುರಭವನ ಮುಂಭಾಗದ ರಾಜಾಜಿ ಪಾರ್ಕ್‌ನಲ್ಲಿ ಹಾಗೂ ಉಡುಪಿಯ ಭುಜಂಗ ಪಾರ್ಕ್‌ನಲ್ಲಿ ಈ ಶಿಲಾಶಾಸನ ಪ್ರತಿಷ್ಠಾಪನೆ ನಡೆಯಲಿದೆ.
ಕನ್ನಡದ ಮೊದಲ ಶಿಲಾ ಶಾಸನ
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಲ್ಮಿಡಿಯಲ್ಲಿ 1936ರಲ್ಲಿ ಪತ್ತೆಯಾದ ಶಾಸನವನ್ನು ಕನ್ನಡ ಲಿಪಿಯಲ್ಲಿ ಲಭ್ಯವಾದ ಮೊಟ್ಟಮೊದಲ ಶಾಸನವೆಂದು ಪರಿಗಣಿಸಲಾಗಿದೆ. 16 ಸಾಲುಗಳ ಕನ್ನಡ ಬರಹ ಇದರಲ್ಲಿದ್ದು ಇದು ಕ್ರಿಸ್ತ ಶಕ 450ರ ಸುಮಾರಿನದ್ದು ಎಂದು ಅಂದಾಜಿಸಲಾಗಿದೆ. ಹೀಗಾಗಿ ಈ ಶಿಲಾ ಶಾಸನದ ಮಹತ್ವವನ್ನು ಶಾಶ್ವತವಾಗಿ ಜನರ ನೆನಪಿನಲ್ಲಿ ಉಳಿಯುವಂತೆ ಮಾಡುವ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಕೇಂದ್ರದಲ್ಲಿ ಪ್ರತಿಕೃತಿ ರೂಪದಲ್ಲಿ ಇರಿಸಲು ಸರಕಾರ ಉದ್ದೇಶಿಸಿದೆ. ಶಾಸನದ ಪ್ರತಿಕೃತಿ ನಾಲ್ಕೂವರೆ ಅಡಿ ಎತ್ತರ, 2 ಅಡಿ ಅಗಲ, 6 ಇಂಚು ದಪ್ಪ, 450 ರಿಂದ 500 ಕಿಲೋ ತೂಕ ಹೊಂದಿದೆ.
The state government has decided to install a stone replica of the "Halmidi inscription" which is said to be the first stone inscription available in Kannada language in all the district centers across the state.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am