ಬ್ರೇಕಿಂಗ್ ನ್ಯೂಸ್
05-11-24 10:35 pm Mangaluru Correspondent ಕರಾವಳಿ
ಮಂಗಳೂರು, ನ.5: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ ಈ ಬಾರಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 28ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡುಕರೆಯಲ್ಲಿ ನಡೆಯಲಿದ್ದು, ಕಂಬಳದ ಪೂರ್ವಭಾವಿ ಸಭೆ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ನಡೆಯಿತು.
ಸಭೆಯನ್ನು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷರು, ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕಳೆದ 7 ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಮಂಗಳೂರು ಕಂಬಳಕ್ಕೆ ಉತ್ತಮ ಜನಮನ್ನಣೆ ಸಿಗುತ್ತಿದ್ದು ಇದು ಕರಾವಳಿಯ ಪ್ರವಾಸೋದ್ಯಮಕ್ಕೆ ಮೈಲುಗಲ್ಲಾಗಲಿದೆ. ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗುವಂತೆ ಹಾಗೂ ಕಂಬಳಕ್ಕೆ ಮೆರುಗನ್ನು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಕಂಬಳ ಈ ಮಣ್ಣಿನ ಅಸ್ಮಿತೆ, ಅದನ್ನು ಮುಂದುವರಿಸಿಕೊಂಡು ಹೋಗಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಮಂಗಳೂರು ಕಂಬಳ ಮೇಲ್ಪಂಕ್ತಿಯಾಗಿದೆ ಎಂದರು. ಜಿಲ್ಲಾ ಕಂಬಳ ಸಮಿತಿಯ ವಿಜಯಕುಮಾರ್ ಕಂಗಿನಮನೆ ಮಾತನಾಡಿ ಮಂಗಳೂರು ನಗರದಲ್ಲಿ ನಡೆಯುವ ಕಂಬಳ ಜನ ಆಕರ್ಷಣೆಯ ಕೇಂದ್ರವಾಗುತ್ತಿದ್ದು, ಕಂಬಳಕ್ಕೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಜಿಲ್ಲಾ ಕಂಬಳ ಸಮಿತಿ ವತಿಯಿಂದ ಸರ್ವ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಪಿ.ಆರ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗರೋಡಿ, ಮಂಗಳೂರು ಕಂಬಳ ಸಮಿತಿ ಉಪಾಧ್ಯಕ್ಷ ಕಿರಣ್ ಕುಮಾರ್, ಅನಿಲ್ ಕುಮಾರ್, ಮಂಗಳೂರು ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಕಂಬಳ ಸಮಿತಿ ಕೋಶಾಧಿಕಾರಿ ಪ್ರೀತಮ್ ರೈ ಉಪಸ್ಥಿತರಿದ್ದರು. ಸಂಚಾಲಕ ಸಚಿನ್ ಶೆಟ್ಟಿ ಸಾಂತ್ಯ ಸ್ವಾಗತಿಸಿ, ಉಪಾಧ್ಯಕ್ಷ ಪ್ರಕಾಶ್ ಪೂಜಾರಿ ಗರೋಡಿ ವಂದಿಸಿದರು. ಕಾರ್ಯದರ್ಶಿ ಮನ್ಮಥ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
8th Annual Kambala Festival Set to Thrill Gold Finch City in Mangalore on December 28th says MP Brijesh Chowta
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 04:38 pm
Mangalore Correspondent
India’s Largest Job Fair ‘Alva’s Pragati 2025...
26-07-25 11:37 am
Congress, Mangalore: ಸಿದ್ದರಾಮಯ್ಯ ಆಡಳಿತದಲ್ಲೇ ದ...
26-07-25 10:44 am
Dharmasthala Case, SIT Meeting, Anucheth, Jit...
25-07-25 08:25 pm
DIG Anucheth Mangalore, SIT Dharmasthala: ಎಸ್...
25-07-25 06:05 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am