ಬ್ರೇಕಿಂಗ್ ನ್ಯೂಸ್
05-11-24 10:40 pm Mangaluru Correspondent ಕರಾವಳಿ
ಮಂಗಳೂರು, ನ.5: ಹದಗೆಟ್ಟಿರುವ ನಂತೂರು - ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಕುರಿತು ಚರ್ಚಿಸಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್ ಇದರ ವತಿಯಿಂದ ಕುಳಾಯಿ ಮಹಿಳಾ ಮಂಡಲದ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಯಿತು.
ಕಳೆದ ಐದಾರು ವರ್ಷಗಳಿಂದ ಡಾಮರೀಕರಣ, ನಿರ್ವಹಣೆ ಇಲ್ಲದೆ ಪೂರ್ತಿ ಹದಗೆಟ್ಟಿರುವ ಹೆದ್ದಾರಿಯ ಹಲವು ಸಮಸ್ಯೆಗಳ ಕುರಿತು ಸಭೆಯಲ್ಲಿ ಪಾಲ್ಗೊಂಡ ಹಲವರು ತಮ್ಮ ಅನಿಸಿಕೆ ಹೇಳಿಕೊಂಡರು. ಸಮಸ್ಯೆ ಬಗೆಹರಿಸಲು ಸ್ಥಳೀಯ ಜನಪ್ರತಿನಿಧಿಗಳ ನಿರಾಸಕ್ತಿಯ ಕುರಿತು ಆಕ್ಷೇಪಗಳು ವ್ಯಕ್ತವಾದವು. ಹೆದ್ದಾರಿಯ ದುಸ್ಥಿತಿಯಿಂದ ಅಪಘಾತಗಳು ಸರಣಿಯಾಗಿ ನಡೆಯುತ್ತಿದ್ದು, ಸವಾರರು ಪ್ರಾಣ ಕಳೆದುಕೊಳ್ಳುತ್ತಿದ್ದರೂ ಸಂಬಂಧಪಟ್ಟವರು ಗಮನ ಹರಿಸದಿರುವ ಬಗ್ಗೆ ಆಕ್ರೋಶ ವ್ಯಕ್ತವಾಯಿತು.
ಚರ್ಚೆ, ಅಭಿಪ್ರಾಯಗಳ ತರುವಾಯ ಹೆದ್ದಾರಿಯ ಪ್ರಮುಖ ಸಮಸ್ಯೆಗಳನ್ನು ಗುರುತಿಸಿ ಪ್ರಧಾನವಾಗಿ, ಹದಗೆಟ್ಟಿರುವ ಸುರತ್ಕಲ್ - ನಂತೂರು ಹೆದ್ದಾರಿಯನ್ನು ಪೂರ್ಣ ಪ್ರಮಾಣದಲ್ಲಿ ದುರಸ್ತಿ ಪಡಿಸಬೇಕು, ಕೂಳೂರು ಹೊಸ ಸೇತುವೆ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಬೇಕು, ನಂತೂರು ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಕಾಲಮಿತಿ ನಿಗದಿಪಡಿಸಬೇಕು, ಸರ್ವಿಸ್ ರಸ್ತೆಗಳನ್ನು ಹೆದ್ದಾರಿ ಉದ್ದಕ್ಕೂ ನಿರ್ಮಿಸಬೇಕು, ಬೀದಿ ದೀಪಗಳ ಅಳವಡಿಕೆ, ನಿರ್ವಹಣೆ ಸರಿಪಡಿಸಬೇಕು, ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ನಿರ್ಮಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಹೋರಾಟ ನಡೆಸಲು ತೀರ್ಮಾನಿಸಲಾಯಿತು. ಪ್ರಥಮ ಹಂತದಲ್ಲಿ ನವಂಬರ್ 26ರಂದು ಕೂಳೂರು ಸೇತುವೆ ಬಳಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸಾಮೂಹಿಕ ಧರಣಿ ನಡೆಸಲು ನಿರ್ಧರಿಸಲಾಯಿತು.

ಸಮಾಲೋಚನಾ ಸಭೆಯ ಅಧ್ಯಕ್ಷತೆಯನ್ನು ಹಿರಿಯ ಮುಂದಾಳು ಎಂ.ಜಿ. ಹೆಗ್ಡೆ ವಹಿಸಿದ್ದರು. ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ವಿಷಯ ಮಂಡಿಸಿದರು. ಶ್ರೀನಾಥ್ ಕುಲಾಲ್ ಸ್ವಾಗತಿಸಿದರು. ಮಾಜಿ ಉಪ ಮೇಯರ್ ಗಳಾದ ಮುಹಮ್ಮದ್ ಕುಂಜತ್ತಬೈಲ್, ಪುರುಷೋತ್ತಮ ಚಿತ್ರಾಪುರ, ದಲಿತ ನಾಯಕರಾದ ಎಂ. ದೇವದಾಸ್, ಹೋರಾಟ ಸಮಿತಿ ಸಹ ಸಂಚಾಲಕ ವೈ. ರಾಘವೇಂದ್ರ ರಾವ್, ಬಿ.ಕೆ ಇಮ್ತಿಯಾಜ್, ಮೂಸಬ್ಬ ಪಕ್ಷಿಕೆರೆ, ರಮೇಶ್ ಟಿ.ಎನ್, ಸದಾಶಿವ ಶೆಟ್ಟಿ, ರಾಜೇಶ್ ಕುಳಾಯಿ, ಸುಧಾಕರ ಪಡುಬಿದ್ರೆ, ರಘು ಎಕ್ಕಾರು, ಕೃಷ್ಣ ತಣ್ಣೀರುಬಾವಿ, ಮುಸ್ಲಿಂ ಐಕ್ಯತಾ ವೇದಿಕೆಯ ಆಶ್ರಫ್ ಬದ್ರಿಯ, ಅದ್ದು ಕೃಷ್ಣಾಪುರ, ಮಾಜಿ ಕಾರ್ಪೊರೇಟರ್ ಅಯಾಝ್ ಕೃಷ್ಣಾಪುರ, ಡಿವೈಎಫ್ಐ ನ ಮಕ್ಸೂದ್ ಬಿ ಕೆ, ಪ್ರಮೀಳಾ ಕೆ, ಮಹಿಳಾ ಕಾಂಗ್ರೆಸ್ ನ ಶಶಿಕಲಾ, ಹೋರಾಟ ಸಮಿತಿಯ ಪ್ರಮುಖರಾದ ಆನಂದ ಅಮೀನ್, ಹರೀಶ್ ಪೇಜಾವರ, ಅಬೂಬಕ್ಕರ್ ಬಾವ, ಆಶಾ ಬೋಳೂರು, ಗಂಗಾಧರ ಬಂಜನ್, ಶಮೀರ್ ಕಾಟಿಪಳ್ಳ, ಸಲೀಂ ಶ್ಯಾಡೋ ಸೇರಿದಂತೆ ಹಲವು ಸಂಘಟನೆಗಳ ಪ್ರಮುಖರು ಹಾಜರಿದ್ದರು.
Mass Protest Planned on November 26th Against Poor Road Conditions on Mangalore Nanthoor Surathkal Highway
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm