ಬ್ರೇಕಿಂಗ್ ನ್ಯೂಸ್
07-11-24 07:46 pm Mangalore Correspondent ಕರಾವಳಿ
ಮಂಗಳೂರು, ನ.7: ಮಂಗಳೂರು ರನ್ನರ್ ಕ್ಲಬ್ ವತಿಯಿಂದ ನ.10ರಂದು ಮಂಗಳೂರಿನಲ್ಲಿ “ನೀವಿಯಸ್ ಮಂಗಳೂರು ಮ್ಯಾರಥಾನ್-2024′ ನಡೆಯಲಿದ್ದು ಆ ಪ್ರಯುಕ್ತ ಅಂದು ಬೆಳಗ್ಗೆ 4 ರಿಂದ ಬೆಳಗ್ಗೆ 10 ಗಂಟೆಯ ವರೆಗೆ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.
ಮ್ಯಾರಥಾನ್ ಓಟದಲ್ಲಿ 5,000 ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದು ನಗರದ ಲಾಲ್ ಬಾಗ್ ಮಂಗಳಾ ಕ್ರೀಡಾಂಗಣದಿಂದ ಹೊರಟು ನಾರಾಯಣ ಗುರು ವೃತ್ತ (ಲೇಡಿಹಿಲ್), ಚಿಲಿಂಬಿ, ಉರ್ವ ಸ್ಟೋರ್, ಕೊಟ್ಟಾರ ಚೌಕಿ, ಕೋಡಿಕಲ್ ಕ್ರಾಸ್, ಕೂಳೂರು, ಕೆಐಒಸಿಎಲ್ ಜಂಕ್ಷನ್ ಮುಖಾಂತರ ಎನ್‌ಎಂಪಿಎ ಸರ್ವಿಸ್ ರಸ್ತೆಯಲ್ಲಿ ಸಾಗಿ ಡಿಕ್ಸಿ ಕ್ರಾಸ್ ನಲ್ಲಿ ಪಣಂಬೂರು ಬೀಚ್ ರಸ್ತೆಗೆ ತಿರುಗಿ ವಾಪಾಸ್ಸು ಡಿಕ್ಸಿ ಕ್ರಾಸ್, ಕೆಐಒಸಿಎಲ್ ಜಂಕ್ಷನ್‌ಗೆ ಬಂದು ತಣ್ಣೀರು ಬಾವಿ ಬೀಚ್ ವರೆಗೆ ಹೋಗಿ ವಾಪಾಸ್ಸು ಕೊಟ್ಟಾರಚೌಕಿ, ಲೇಡಿಹಿಲ್ ಮುಖಾಂತರ ಮಂಗಳಾ ಕ್ರೀಡಾಂಗಣದಲ್ಲಿ ಕೊನೆಗೊಳ್ಳಲಿದೆ.
ಹೀಗಾಗಿ ಓಟ ಸಾಗುವ ಸಮಯದಲ್ಲಿ ಮಣ್ಣಗುಡ್ಡೆ ಕಡೆಯಿಂದ ನಾರಾಯಣ ಗುರು ವೃತ್ತದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ಹಾಗೂ ನಿಲುಗಡೆಯನ್ನು ನಿಷೇಧಿಸಿದೆ.
ಉರ್ವ ಮಾರ್ಕೆಟ್‌ನಿಂದ ನಾರಾಯಣ ಗುರು ವೃತ್ತದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ಹಾಗೂ ನಿಲುಗಡೆಯನ್ನು ನಿಷೇಧಿಸಿದೆ. ಕೆ.ಎಸ್.ಆರ್.ಟಿ.ಸಿ ಯಿಂದ ಲಾಲ್‌ಬಾಗ್ ಮುಖಾಂತರ ನಾರಾಯಣ ಗುರು ವೃತ್ತದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇಧಿಸಿದೆ.
ನಾರಾಯಣ ಗುರು ವೃತ್ತದಿಂದ ಕೊಟ್ಟಾರಚೌಕಿವರೆಗಿನ ರಸ್ತೆಯಲ್ಲಿ ವಾಹನ ಸಂಚಾರ ಹಾಗೂ ನಿಲುಗಡೆಯನ್ನು ನಿಷೇಧಿಸಿದೆ.
ಕೊಟ್ಟಾರ ಚೌಕಿಯಿಂದ ಕೋಡಿಕಲ್ ಕ್ರಾಸ್ ಕಡೆಗೆ ಸಾಗುವ ಸರ್ವಿಸ್ ರಸ್ತೆಯಲ್ಲಿ ಎಲ್ಲಾ ತರಹದ ವಾಹನ ಸಂಚಾರವನ್ನು ಹಾಗೂ ನಿಲುಗಡೆಯನ್ನು ನಿಷೇಧಿಸಿದೆ. ಕೋಡಿಕಲ್ ಕ್ರಾಸ್ ನಿಂದ ಕೂಳೂರು ಹೊಸ ಸೇತುವೆವರೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ಹಾಗೂ ನಿಲುಗಡೆಯನ್ನು ನಿಷೇಧಿಸಿದೆ.
ತಣ್ಣೀರುಬಾವಿ ಬಾವಿ ಬೀಚ್ ರಸ್ತೆಯಲ್ಲಿ ತಣ್ಣೀರು ಬಾವಿ ಬೀಚ್‌ವರೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ಹಾಗೂ ನಿಲುಗಡೆಯನ್ನು ನಿಷೇಧಿಸಿದೆ. ಓಟ ಸಾಗುವ ಮಾರ್ಗದಲ್ಲಿನ ಎಡ ಭಾಗದಲ್ಲಿರುವ ಎಲ್ಲಾ ಅಡ್ಡ ರಸ್ತೆಗಳಿಂದ ವಾಹನಗಳು ಮ್ಯಾರಥಾನ್ ಓಟ ಸಾಗುವ ಮುಖ್ಯ ರಸ್ತೆಗೆ ಬರುವುದನ್ನು ನಿಷೇಧಿಸಿದೆ.
ಬದಲಿ ಮಾರ್ಗಗಳು;
ಪಿ.ವಿ.ಎಸ್ ಕಡೆಯಿಂದ ನಾರಾಯಣ ಗುರುವೃತ್ತ ಕಡೆಗೆ ಸಂಚರಿಸುವ ವಾಹನಗಳು ಲಾಲ್‌ಬಾಗ್ - ಕೆ.ಎಸ್.ಆರ್.ಟಿ.ಸಿ ಮೂಲಕ ಸಂಚರಿಸಬೇಕು.
ಕುದ್ರೋಳಿ ಮಣ್ಣಗುಡ್ಡೆ ಮತ್ತು ಉರ್ವ ಮಾರ್ಕೆಟ್ ನಿಂದ ನಾರಾಯಣ ಗುರು ವೃತ್ತ ಕಡೆಗೆ ಸಂಚರಿಸುವ ವಾಹನಗಳು ಮಣ್ಣಗುಡ್ಡೆ – ಬಲ್ಲಾಳ್ ಬಾಗ್ / ನೆಹರೂ ಅವಿನ್ಯೂ ರಸ್ತೆ – ಲಾಲ್ ಬಾಗ್ – ಕೆ.ಎಸ್.ಆರ್.ಟಿ.ಸಿ ಮೂಲಕ ಸಂಚರಿಸಬೇಕು.
ಕೆ.ಎಸ್.ಆರ್.ಟಿ.ಸಿ ಕಡೆಯಿಂದ ಉಡುಪಿ ಕಡೆಗೆ ಸಂಚರಿಸುವ ವಾಹನಗಳು ಬಿಜೈ ಕಾಪಿಕಾಡ್ ಕಡೆಯಿಂದ ಕುಂಟಿಕಾನ ಮುಖೇನ ಸಂಚರಿಸಬೇಕು.
ಕೆ.ಪಿ.ಟಿ/ ಕುಂಟಿಕಾನ ಕಡೆಯಿಂದ ಉಡುಪಿ ಕಡೆಗೆ ಸಾಗುವ ವಾಹನಗಳು ಕೋಡಿಕಲ್ ಕ್ರಾಸ್ ಫ್ಲೈ ಓವರ್ ಬಳಿ ಬಲಕ್ಕೆ ತಿರುಗಿ ಕೂಳೂರು ಕೊಟ್ಟಾರ ಕ್ರಾಸ್ ಏಕಮುಖ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ಕೂಳೂರು ಹಳೇ ಸೇತುವೆ ಬಳಿಯ ಫ್ಲೈವರ್ ನ ಮುಕ್ತಾಯದಲ್ಲಿ ಎಡಕ್ಕೆ ತಿರುಗಿ ಕೂಳೂರು ಹೊಸ ಸೇತುವೆ ಮುಖೇನ ಕೆ.ಐ.ಓ.ಸಿ.ಎಲ್ ಮುಖಾಂತರ ಸಂಚರಿಸಬೇಕು.
ಕಾವೂರು-ಪಂಜಿಮೊಗರು ಕಡೆಯಿಂದ ಬರುವ ಎಲ್ಲಾ ವಾಹನಗಳು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಸರ್ವಿàಸ್ ರಸ್ತೆಯ ಮುಖಾಂತರ ಉಡುಪಿ ಕಡೆಗೆ ಸಂಚರಿಸಬೇಕು. ಅಶೋಕ ನಗರ, ಶೇಡಿಗುರಿ, ದಂಬೇಲ್, ಸುಲ್ತಾನ್ ಬತ್ತೇರಿ ಕಡೆಯಿಂದ ಬರುವ ವಾಹನಗಳು ಉರ್ವ ಮಾರ್ಕೆಟ್, ಮಣ್ಣಗುಡ್ಡೆ ಮುಖಾಂತರ ಸಂಚರಿಸಬೇಕು.
There will be a bar on vehicular movement and parking of vehicles between Mannagudde and Narayana Guru (Lady Hill) Circle and between Narayana Guru Circle and Lalbagh Circle on Sunday between 4 a.m. and 10 a.m., in the light of Mangalore Marathon. Police Commissioner Anupam Agrawal said in the same period there will also be a bar on the movement of vehicles and vehicle parking on stretch of Urwa Market – Narayana Guru Circle, Narayana Guru-Kottara Chowki, Kottara Chowki-Kodikal Cross, Kodikal Cross- Kuloor New Bridge road stretches, and till Tannirbhavi Second beach on Tannirbhavi Beach Road. There will be bar on entry of vehicles from the side roads to the route of the marathon.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm