ಬ್ರೇಕಿಂಗ್ ನ್ಯೂಸ್
07-11-24 11:06 pm Mangalore Correspondent ಕರಾವಳಿ
ಮಂಗಳೂರು, ನ.7 : ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮತ್ತು ಮುಂಬೈ ಬಂಟರ ಸಂಘದ ಸಹಯೋಗದಲ್ಲಿ ಮುಂಬೈಯ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಮಟ್ಟದ "ವಿಶ್ವ ಬಂಟರ ಸಮಾಗಮ" ಬೃಹತ್ ಕಾರ್ಯಕ್ರಮ ಡಿಸೆಂಬರ್ 7 ರಂದು ನಡೆಯಲಿದೆ.
ಕಳೆದ ವರ್ಷ ಉಡುಪಿಯಲ್ಲಿ ಎರಡು ದಿನಗಳ ವಿಶ್ವ ಮಟ್ಟದ ಬಂಟ ಸಮ್ಮಿಲನವನ್ನು ಆಯೋಜಿಸಿದ್ದು ಸುಮಾರು 75 ಸಾವಿರಕ್ಕೂ ಮಿಕ್ಕಿ ಸಮಾಜ ಬಾಂಧವರು ಪಾಲ್ಗೊಂಡು ಯಶಸ್ವಿಯಾಗಿ ನಡೆದಿದೆ. ಮಂಬೈ ನಗರದಲ್ಲಿ 3 ವರ್ಷಗಳ ಹಿಂದೆ ಒಕ್ಕೂಟದ ಬಂಟ ಸಮ್ಮಿಲನ ಯಶಸ್ವಿಯಾಗಿ ನಡೆದಿತ್ತು. ಈ ವರ್ಷ ಮುಂಬೈ ಮಹಾನಗರದಲ್ಲಿ ಜಾಗತಿಕ ಮಟ್ಟದ ಬಂಟ ಸಮಾಜದ ಬಂಧುಗಳನ್ನು ಒಟ್ಟು ಸೇರಿಸುವ ಮಹಾನ್ ಉದ್ದೇಶದೊಂದಿಗೆ ಡಿಸೆಂಬರ್ 7ರಂದು ಶನಿವಾರ ಕುರ್ಲಾ ಪೂರ್ವದ ಬಂಟರ ಭವನದಲ್ಲಿ "ವಿಶ್ವ ಬಂಟರ ಸಮಾಗಮ" ಜಾಗತಿಕ ಮಟ್ಟದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದರಲ್ಲಿ ಜಗತ್ತಿನ ಎಲ್ಲೆಡೆಯ ಸೀಮಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಬೃಹತ್ ಕಾರ್ಯಕ್ರಮವನ್ನು ಮುಂಬೈ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಒಕ್ಕೂಟದ ವಿಶೇಷ ಮಹಾ ನಿರ್ದೇಶಕ ಆರ್ಗಾನಿಕ್ ಗ್ರೂಪ್ ಆಫ್ ಇಂಡಸ್ಟ್ರೀಸ್ ನ ಸಿಎಂಡಿ ತೋನ್ಸೆ ಆನಂದ ಎಮ್. ಶೆಟ್ಟಿ, ಮುಂಬೈ ಹೇರಂಭ ಇಂಡಸ್ಟ್ರೀಸ್ ಅಧ್ಯಕ್ಷ, ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ ಪಾಲ್ಗೊಳ್ಳಲಿದ್ದು ಹಾಗೂ ಪ್ರತಿಷ್ಠಿತ ಉದ್ಯಮಿಗಳು, ಸಮಾಜ ಸೇವಕರು, ಜಗತ್ತಿನ ವಿವಿಧ ಬಂಟ ಸಂಘಗಳ ಅಧ್ಯಕ್ಷರು ಸೇರಿಕೊಳ್ಳಲಿದ್ದಾರೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಅಂದು ಸಂಜೆ ನಡೆಯಲಿರುವ ಸಮಾರೋಪ ಕಾರ್ಯಕ್ರಮವನ್ನು ಒಕ್ಕೂಟದ ಮಹಾದಾನಿ ಹೇರಂಬ ಇಂಡಸ್ಟ್ರೀಸ್‍ನ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಎಮ್ ಆರ್ ಜಿ ಗ್ರೂಪ್ ಆಡಳಿತ ನಿರ್ದೇಶಕ ಡಾ.ಕೆ. ಪ್ರಕಾಶ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ. ವಿಶ್ವದ ಬಂಟರ ಸಂಘಗಳ ನೂತನ ಅಧ್ಯಕ್ಷರುಗಳಿಗೆ ಸನ್ಮಾನ ನಡೆಯಲಿದೆ ಎಂದು ಐಕಳ ಹರೀಶ್ ಶೆಟ್ಟಿ ತಿಳಿಸಿದರು.
ಮುಂಬೈ ಮಹಾನಗರದ ಬಂಟರ ಸಂಘಗಳಿಗೆ ನೃತ್ಯ ಸ್ಪರ್ಧೆ ನಡೆಯಲಿದೆ. ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ವಿಶ್ವದಾದ್ಯಂತ ಇರುವ ಬಂಟರ ಸಂಘಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಗುವುದು. ಸಿನಿಮಾ ತಾರೆಯರು, ಧಾರ್ಮಿಕ ಮುಖಂಡರು, ಉದ್ಯಮಿಗಳು, ರಾಜಕೀಯ ಮುಖಂಡರು, ಕೈಗಾರಿಕೋದ್ಯಮಿಗಳು, ಭಾಗವಹಿಸಲಿದ್ದಾರೆ.
ನೃತ್ಯ ಸ್ಪರ್ಧೆಯ ಜೊತೆಗೆ ಆದರ್ಶ ದಂಪತಿ, ಮಿಸ್ಟರ್ ಬಂಟ್, ಮಿಸ್ ಬಂಟ್ ಕಾರ್ಯಕ್ರಮವೂ ಇದೆ. ಕಾರ್ಯಕ್ರಮದಲ್ಲಿ ಸುಮಾರು 5 ಸಾವಿರಕ್ಕೂ ಮಿಕ್ಕಿದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಅಂದು ಬೆಳಗ್ಗೆ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪೂಜೆ ನಡೆದು ಬಳಿಕ ಮೆರವಣಿಗೆ ಮೂಲಕ ಗಣ್ಯರನ್ನು ಸಮಾರಂಭಕ್ಕೆ ಕರೆದೊಯ್ಯಲಾಗುವುದು ಎಂದರು.
ತುಳು ಭಾಷೆಯ ಕುರಿತ ಪ್ರಶ್ನೆಗೆ, ನಾವು ಬಂಟ, ಬಿಲ್ಲವರು ಮುಂಬೈನಲ್ಲಿ ಯಾವುದೇ ಕಾರ್ಯಕ್ರಮ ನಡೆಸುವುದಿದ್ದರೂ ತುಳು ಭಾಷೆಯಲ್ಲೇ ಮಾಡುತ್ತೇವೆ. ಇಲ್ಲಿ ಮಾತ್ರ ಕನ್ನಡದಲ್ಲಿ ಮಾತಾಡುವುದು. ತುಳು ಭಾಷೆಯನ್ನು ರಾಜ್ಯದಲ್ಲಿ ದ್ವಿತೀಯ ಭಾಷೆ ಮಾಡಬೇಕು, ಸಂವಿಧಾನಕ್ಕೆ ಸೇರ್ಪಡೆ ಮಾಡಬೇಕು ಎಂಬ ಮನದಾಸೆ ಇದೆ. ಇದಕ್ಕೆ ಎಲ್ಲರು ಸೇರಿ ಒತ್ತಡ ಹೇರಬೇಕು ಎಂದು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಕರ್ನಿರೆ ವಿಶ್ವನಾಥ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ, ಉಳ್ತೂರು ಮೋಹನದಾಸ್ ಶೆಟ್ಟಿ, ಚಂದ್ರಹಾಸ ಡಿ.ಶೆಟ್ಟಿ ಇದ್ದರು.
Global event "Vishva Bantar Samagam" will be held on 7th December at Bantara Bhawan, Kurla East, Mumbai in collaboration with the Federation of Global Bantar Sanghas and Mumbai Bantar Sangh.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm