MLA Vedavyas Kamath, Mangalore Pune flight: ಮಂಗಳೂರು- ಪುಣೆ ನೇರ ವಿಮಾನ ಪುನರ್ ಆರಂಭಿಸುವಂತೆ ಕೇಂದ್ರ ವಿಮಾನ ಯಾನ ರಾಜ್ಯ ಸಚಿವರಿಗೆ ಶಾಸಕ ಕಾಮತ್ ಮನವಿ 

08-11-24 07:21 pm       Mangalore Correspondent   ಕರಾವಳಿ

ಮಹಾರಾಷ್ಟ್ರ ಚುನಾವಣಾ ನಿಮಿತ್ತ ಸದ್ಯ ಪುಣೆಯಲ್ಲಿರುವ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತ್ ಅವರು ಕೇಂದ್ರ ನಾಗರಿಕ ವಿಮಾನ ಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರನ್ನು ಭೇಟಿಯಾಗಿ ಸ್ಥಗಿತಗೊಂಡಿರುವ ಮಂಗಳೂರು-ಪುಣೆ ಮಧ್ಯೆ ನೇರ ವಿಮಾನ ಯಾನ ಪುನರ್ ಆರಂಭಿಸುವಂತೆ ಮನವಿ ಮಾಡಿದರು.

ಮಂಗಳೂರು, ನ.8: ಮಹಾರಾಷ್ಟ್ರ ಚುನಾವಣಾ ನಿಮಿತ್ತ ಸದ್ಯ ಪುಣೆಯಲ್ಲಿರುವ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತ್ ಅವರು ಕೇಂದ್ರ ನಾಗರಿಕ ವಿಮಾನ ಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರನ್ನು ಭೇಟಿಯಾಗಿ ಸ್ಥಗಿತಗೊಂಡಿರುವ ಮಂಗಳೂರು-ಪುಣೆ ಮಧ್ಯೆ ನೇರ ವಿಮಾನ ಯಾನ ಪುನರ್ ಆರಂಭಿಸುವಂತೆ ಮನವಿ ಮಾಡಿದರು.

ಮಂಗಳೂರು- ಪುಣೆ ನಗರಗಳ ನಡುವೆ ಅನೇಕ ರೀತಿಯಲ್ಲಿ ನೇರ ಸಂಬಂಧಗಳಿದ್ದು ದಿನ ನಿತ್ಯ, ಸಾರ್ವಜನಿಕರು, ಉದ್ಯಮಿಗಳು, ಉದ್ಯೋಗಿಗಳು ಸೇರಿದಂತೆ ಅನೇಕ ಜನರ ಓಡಾಟವಿದೆ. ಹಾಗಾಗಿ ಈ ಹಿಂದೆ ಇದ್ದ ನೇರ ವಿಮಾನ ಸೇವೆಯಿಂದ ಅನೇಕ ಪ್ರಯಾಣಿಕರಿಗೆ ಸಹಾಯವಾಗುತ್ತಿದ್ದು ಪ್ರಸ್ತುತ ಈ ಸೇವೆ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಗೆ ತೀವ್ರ ಅನಾನುಕೂಲತೆ ಉಂಟಾಗಿದೆ. ಈ ಬಗ್ಗೆ ಈ ಹಿಂದೆ ಪುಣೆ ಹಾಗೂ ಮಂಗಳೂರಿನ ಉದ್ಯಮಿಗಳು ಮನವಿ ಸಲ್ಲಿಸಿದ್ದು ಅದರಂತೆ ವಿಶೇಷ ಆದ್ಯತೆಯ ಮೇರೆಗೆ ಮನವಿಯನ್ನು ಪರಿಗಣಿಸಿ ವಿಮಾನ ಯಾನವನ್ನು ಪುನರ್ ಆರಂಭಿಸುವಂತೆ ಶಾಸಕರು ಮನವಿ ಮಾಡಿದ್ದಾರೆ, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹೋಟೆಲ್ ಉದ್ಯಮಿಗಳ ಸಂಘದ ಸಂತೋಷ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

MLA Vedavyas kamath appeals for direct flight between Mangalore and Pune by meeting the central aviation minister.