ಬ್ರೇಕಿಂಗ್ ನ್ಯೂಸ್
09-11-24 05:10 pm Mangalore Correspondent ಕರಾವಳಿ
ಮಂಗಳೂರು, ನ.10 : ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದ ವರೆಗೆ ಅಭಿವೃದ್ದಿಯಾಗಲಿದೆ. ಆ ಮೂಲಕ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ. ಈ ಹೆದ್ದಾರಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ ಎಂದು ಸಂಸದರು ತಿಳಿಸಿದ್ದಾರೆ.
ರಾಜ್ಯದ ಪ್ರಮುಖ ಹೆದ್ದಾರಿಯಾದ ಚಾರ್ಮಾಡಿ ಘಾಟ್‌ನ್ನು ಮೇಲ್ದರ್ಜೆಗೇರಿಸುವುದರಿಂದ ಕರಾವಳಿ ಭಾಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಜತೆಗೆ ಸುಗಮ ಸರಕು ಸಾಗಾಣೆಯೊಂದಿಗೆ ಈ ಭಾಗದ ವ್ಯಾಪಾರ-ವಹಿವಾಟು ವೃದ್ಧಿಸಲಿದೆ. ಆ ಮೂಲಕ, ಕರ್ನಾಟಕದ ವಾಣಿಜ್ಯ ಹೆಬ್ಬಾಗಿಲು ಎಂದು ಗುರುತಿಸಿಕೊಂಡಿರುವ ಕರಾವಳಿ ಮತ್ತಷ್ಟು ಪ್ರಗತಿ ಪಥದಲ್ಲಿ ಮುನ್ನಡೆಯಲಿದೆ. ಹೀಗಾಗಿ, ಚಾರ್ಮಾಡಿ ಘಾಟ್ ಹೆದ್ದಾರಿ ದ್ವಿಪಥಗೊಳಿಸಲು 343.74 ಕೋಟಿ ರೂ. ಬಿಡುಗಡೆಗೊಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಇಲಾಖೆ ಅಧಿಕಾರಿಗಳಿಗೆ ಜಿಲ್ಲೆಯ ಜನತೆ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಸಂಸದ ಚೌಟ ಹೇಳಿದ್ದಾರೆ.
Dakshina Kannada MP Capt Brijesh Chowta said that the centra govt released Rs 343.74 crore to convert the Charmadi Ghat will benefit travellers in the coastal region, the MP stated adding that the work will commence soon.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am