ಬ್ರೇಕಿಂಗ್ ನ್ಯೂಸ್
09-11-24 06:52 pm Mangalore Correspondent ಕರಾವಳಿ
ಉಳ್ಳಾಲ, ನ.9: ಕೆಟ್ಟು ಕೆರ ಹಿಡಿದ ರಸ್ತೆ ಗುಂಡಿಗೆ ಸ್ಕೂಟರ್ ಬಿದ್ದ ಪರಿಣಾಮ ಹಿಂಬದಿ ಸವಾರೆ ಮಹಿಳೆ ರಸ್ತೆಗೆಸೆಯಲ್ಪಟ್ಟಿದ್ದು ಕಂಟೇನರ್ ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಚೆಂಬುಗುಡ್ಡೆಯ ಸೇವಾ ಸೌಧದ ಬಳಿ ಶನಿವಾರ ಸಂಜೆ ನಡೆದಿದ್ದು, ಶವ ಸಾಗಿಸಲು ಒಪ್ಪದ 108 ಅಂಬ್ಯುಲೆನ್ಸ್ ಮತ್ತು ರಸ್ತೆ ದುರವಸ್ಥೆಯ ವಿರುದ್ಧ ರೊಚ್ಚಿಗೆದ್ದ ನಾಗರಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಸುರತ್ಕಲ್ ಕುಳಾಯಿ ನಿವಾಸಿ ರೆಹಮತ್ (45) ಮೃತಪಟ್ಟ ಮಹಿಳೆ ಎಂದು ತಿಳಿದು ಬಂದಿದೆ. ರೆಹಮತ್ ಅವರ ಪತಿ ರಶೀದ್ ಅವರು ಯೆನೆಪೋಯ ಆಸ್ಪತ್ರೆಯಲ್ಲಿ ಇಲೆಕ್ಟ್ರಿಕಲ್ ಮೆಂಟೆನೆನ್ಸ್ ಸಿಬ್ಬಂದಿಯಾಗಿದ್ದು ಶನಿವಾರ ಸಂಜೆ ವೇಳೆ ಆಕ್ಟಿವಾ ಸ್ಕೂಟರಲ್ಲಿ ಪತ್ನಿಯನ್ನ ಕುಳ್ಳಿರಿಸಿ ದೇರಳಕಟ್ಟೆಯಿಂದ ತೊಕ್ಕೊಟ್ಟು ಕಡೆ ಬರುತ್ತಿದ್ದ ವೇಳೆ ಚೆಂಬುಗುಡ್ಡೆ ಎಂಬಲ್ಲಿ ಸ್ಕೂಟರ್ ಹದಗೆಟ್ಟ ರಸ್ತೆ ಗುಂಡಿಗೆ ಬಿದ್ದಿದೆ. ಪರಿಣಾಮ ಸ್ಕೂಟರ್ ಸಹ ಸವಾರೆ ರಶೀದ್ ಅವರ ಪತ್ನಿ ರೆಹಮತ್ ರಸ್ತೆಗೆಸೆಯಲ್ಪಟ್ಟಿದ್ದು ಆಕೆಯ ಮೇಲೆ ಹಿಂದಿನಿಂದ ಬರುತ್ತಿದ್ದ ಮೆಡಿಕಲ್ ಸರಕಿನ ಕಂಟೇನರ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಹಿಳೆಯ ಶವ ಅರ್ಧ ಗಂಟೆಗೂ ಹೆಚ್ಚಿನ ಕಾಲ ರಸ್ತೆಯಲ್ಲೇ ಇದ್ದು, ಶವ ಸಾಗಿಸಲು ತಾಂತ್ರಿಕ ಕಾರಣ ನೀಡಿದ 108 ತುರ್ತು ಆಂಬುಲೆನ್ಸ್ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೊಕ್ಕೊಟ್ಟು-ಚೆಂಬುಗುಡ್ಡೆ ಸಂಪರ್ಕದ ಮಂಗಳೂರು ವಿವಿ ರಸ್ತೆಯು ಹೊಂಡ ಗುಂಡಿಗಳಿಂದ ಹದಗೆಟ್ಟಿದ್ದು ಇದನ್ನ ಸರಿಪಡಿಸದ ಲೋಕೋಪಯೋಗಿ ಅಧಿಕಾರಿಗಳು ಮತ್ತು ಇಂತಹ ಹದಗೆಟ್ಟ ರಸ್ತೆ ಮಧ್ಯದಲ್ಲೇ ನಿಂತು ಜನರಿಂದ ದಂಡ ಪೀಕಿಸುವ ಟ್ರಾಫಿಕ್ ಪೊಲೀಸರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿ ಸುಮಾರು ಒಂದೂವರೆ ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಸ್ಥಳಕ್ಕೆ ಡಿಸಿಪಿ ದಿನೇಶ್ ಕುಮಾರ್, ಸಂಚಾರಿ ವಿಭಾಗದ ಎಸಿಪಿ ನಜ್ಮ ಫಾರೂಕಿ ,ಎಸಿಪಿ ಧನ್ಯನಾಯಕ್ ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ. ದಿಢೀರ್ ಪ್ರತಿಭಟನೆಯಿಂದಾಗಿ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು ಕೊಣಾಜೆ, ಮುಡಿಪುವಿಗೆ ತೆರಳುವ ವಾಹನ ಸವಾರರು ಪರದಾಡುವಂತಾಗಿದೆ.
Mangalore Thokottu accident, 45 year old woman dies on spot after tanker truck rams two wheeler after which the deceased woman was thrown in the air. public hold protest over roads filled with potholes
26-12-24 05:11 pm
HK News Desk
Bangalore Case, Advocate Dhahina Bhanu, Fraud...
26-12-24 04:45 pm
MLA Munirathna Egg Attack: ಶಾಸಕ ಮುನಿರತ್ನ ಮೇಲೆ...
25-12-24 10:50 pm
Ct Ravi, Inspector Suspended: ಸಿಟಿ ರವಿ ಬಂಧನ ಪ...
25-12-24 10:10 pm
Kashmir Accident, karnataka soldiers killed:...
25-12-24 12:46 pm
25-12-24 04:21 pm
HK News Desk
Mohan Bhagwat: ಮೋಹನ್ ಭಾಗವತ್ ಸಂಘವನ್ನು ನಡೆಸುತ್ತ...
24-12-24 09:17 pm
ಕಾಸರಗೋಡಿನಲ್ಲಿ ಅಲ್ ಖೈದಾ ಉಗ್ರರ ಸ್ಲೀಪರ್ ಸೆಲ್ ರಚಿ...
23-12-24 05:23 pm
ರಾಮ ಮಂದಿರದಂತಹ ವಿವಾದಗಳನ್ನು ಎಲ್ಲೆಂದರಲ್ಲಿ ಹುಟ್ಟು...
20-12-24 05:01 pm
ಅಂಬೇಡ್ಕರ್ ಘೋಷಣೆ ಫ್ಯಾಶನ್ ಆಗಿಬಿಟ್ಟಿದೆ ಎಂದ ಅಮಿತ್...
19-12-24 05:40 pm
26-12-24 07:07 pm
Udupi Correspondent
Mangalore, Martyr Anoop Poojary, Mp Brijesh C...
26-12-24 11:57 am
DJ artist Sajanka, Mangalore, New Year Party:...
25-12-24 10:55 pm
MP Brijesh Chowta, Mangalore, Railway: ಕೊಂಕಣ...
25-12-24 05:24 pm
Mangalore Rohan Estate Mukka, Riverside Layou...
24-12-24 02:35 pm
25-12-24 02:41 pm
Mangalore Correspondent
ಸೈಬರ್ ವಂಚಕರ ನಕಲಿ ಷೇರು ಮಾರುಕಟ್ಟೆ ಜಾಲ ; ಕೇರಳದಲ್...
24-12-24 11:05 pm
Bangalore cyber fraud, Crime: ಬೆಂಗಳೂರಿನ ಸಾಫ್ಟ...
22-12-24 07:23 pm
Mangalore Police, Cyber Fraud: ಕಮಿಷನ್ ಆಸೆಗೆ ಬ...
22-12-24 04:44 pm
Puttur, Gold Robbery, Mangalore Crime: ಪುತ್ತೂ...
21-12-24 07:45 pm