ಬ್ರೇಕಿಂಗ್ ನ್ಯೂಸ್
09-11-24 10:54 pm Mangalore Correspondent ಕರಾವಳಿ
ಉಳ್ಳಾಲ, ನ.9: ಹದಗೆಟ್ಟ ರಸ್ತೆಯ ಗುಂಡಿಗೆ ಬಿದ್ದ ಸ್ಕೂಟರ್ ನಿಂದ ಮಹಿಳೆಯೊಬ್ಬರು ರಸ್ತೆಗೆಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ತೊಕ್ಕೊಟ್ಟು ಚೆಂಬುಗುಡ್ಡೆಯಲ್ಲಿ ಸ್ಥಳೀಯರು ಆಕ್ರೋಶಕ್ಕೀಡಾಗಿ ಶನಿವಾರ ಸಂಜೆ ವೇಳೆ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರು. ರಾತ್ರಿ ಮತ್ತೆ ಅದೇ ಸ್ಥಳದಲ್ಲಿ ಡಿವೈಎಫ್ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಈ ನಡುವೆ ಅದೇ ರಸ್ತೆಯಲ್ಲಿ ಕೇಂದ್ರ ಸಚಿವರ ಕಾರು ಬಂದಿದ್ದು, ಕಾರಿನ ಮುಂದೆ ಪೊಲೀಸ್ ಎಸ್ಕಾರ್ಟ್ ವಾಹನ ಕಂಡು ಸ್ಪೀಕರ್ ಖಾದರ್ ಬಂದರೆಂದು ತಪ್ಪುಗ್ರಹಿಸಿ ಮುತ್ತಿಗೆ ಹಾಕಿದ ಘಟನೆ ನಡೆಯಿತು.
ತಕ್ಷಣ ಪೊಲೀಸರು ಮಧ್ಯ ಪ್ರವೇಶಿಸಿ ಪ್ರತಿಭಟನಾಕಾರರನ್ನ ಚದುರಿಸಿ ಕೇಂದ್ರ ಸಚಿವರನ್ನು ತೆರಳಲು ಅನುವು ಮಾಡಿಕೊಟ್ಟಿದ್ದಾರೆ. ಪತಿಯ ಜತೆ ಸ್ಕೂಟರಿನಲ್ಲಿ ತೆರಳುತ್ತಿದ್ದ ಮೂಲತಃ ಸುರತ್ಕಲ್ ಕುಳಾಯಿ ನಿವಾಸಿ, ಸದ್ರಿ ದೇರಳಕಟ್ಟೆಯಲ್ಲಿ ನೆಲೆಸಿರುವ ರೆಹಮತ್ (47) ಅವರು ಸ್ಕೂಟರ್ ರಸ್ತೆ ಗುಂಡಿಗೆ ಬಿದ್ದ ಪರಿಣಾಮ ಹೊರಕ್ಕೆಸೆಯಲ್ಪಟ್ಟು ಹಿಂದಿನಿಂದ ಬರುತ್ತಿದ್ದ ಕಂಟೇನರ್ ಅಡಿಗೆ ಬಿದ್ದು ದಾರುಣ ಸಾವನ್ನಪ್ಪಿದ್ದರು. ಘಟನೆಯನ್ನ ಖಂಡಿಸಿ ಉದ್ರಿಕ್ತ ಸ್ಥಳೀಯರು ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರು.
ಇದೇ ವೇಳೆ, ಕೇಂದ್ರದ ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ಅವರು ಶನಿವಾರ ಸಂಜೆ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿಯ ಬೆಳ್ಳಿಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಚಿವರು ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ಹಿಂತಿರುಗುತ್ತಿದ್ದ ವೇಳೆ ಅಪಘಾತ ನಡೆದಿದ್ದ ಚೆಂಬುಗುಡ್ಡೆ ಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಡಿವೈಎಫ್ ಐ ಕಾರ್ಯಕರ್ತರು ಎದುರಾಗಿದ್ದಾರೆ. ಸ್ಪೀಕರ್ ಖಾದರೆಂದು ತಪ್ಪಾಗಿ ಗ್ರಹಿಸಿ ಕೇಂದ್ರ ಸಚಿವರ ಕಾರಿಗೆ ಮುತ್ತಿಗೆ ಹಾಕಿ ಎಡವಟ್ಟು ಮಾಡಿದ್ದಾರೆ. ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ಮಧ್ಯ ಪ್ರವೇಶಿಸಿ ಪ್ರತಿಭಟನಾಕಾರರನ್ನ ಚದುರಿಸಿ ಸಚಿವರ ಕಾರು ತೆರಳಲು ಅನುವು ಮಾಡಿಕೊಟ್ಟಿದ್ದಾರೆ.
ಬಳಿಕ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐಎಂ ಉಳ್ಳಾಲ ವಲಯ ಕಾರ್ಯದರ್ಶಿ ಸುನಿಲ್ ಬಜಾಲ್, ಬಹಳ ಸಮಯದಿಂದ ಮಂಗಳೂರು ವಿವಿ ರಸ್ತೆಯು ಕೆಟ್ಟು ಹೋಗಿದೆ. ರಸ್ತೆಯನ್ನ ಸರಿಪಡಿಸುವಂತೆ ಅನೇಕ ಬಾರಿ ಸ್ಥಳೀಯ ಶಾಸಕರಾದ ಯು.ಟಿ ಖಾದರ್ ಮತ್ತು ಅಧಿಕಾರಿಗಳಿಗೆ ಮನವಿ ಮಾಡಿದ್ದೆವು. ಆಸ್ಪತ್ರೆ, ಕಾಲೇಜು, ವಿಶ್ವವಿದ್ಯಾನಿಲಯ ಇದ್ದರೂ ರಸ್ತೆಯಲ್ಲಿ ವಾಹನಗಳು ಚಲಿಸಲು ಅಸಾಧ್ಯ ಎನ್ನುವಂತಿದೆ. ಈ ರಸ್ತೆಯಲ್ಲಿ ಬೆಳಗ್ಗಿನಿಂದ ರಾತ್ರಿ ವರೆಗೂ ಟ್ರಾಫಿಕ್ ಜಾಮ್ ಇರುತ್ತದೆ. ಇದಕ್ಕೆಲ್ಲ ಸ್ಪೀಕರ್ ಖಾದರ್ ಅವರೇ ನೇರ ಕಾರಣರಾಗಿದ್ದಾರೆ. ಮಾತೆತ್ತಿದರೆ ಅಭಿವೃದ್ಧಿ, ಅಭಿವೃದ್ಧಿಯ ಸರದಾರ ಅಂತ ಹೇಳ್ತಾರೆ. ಸುಸಜ್ಜಿತ ಒಂದು ರಸ್ತೆ ಮಾಡಲಾಗದ ಸ್ಪೀಕರ್ ಅವರ ಅಭಿವೃದ್ಧಿ ಕಾರ್ಯಗಳು ಯಾವುದೆಂದು ಪ್ರಶ್ನಿಸಿದ್ದಾರೆ.
ಮಕ್ಕಳು, ಮಹಿಳೆಯರು, ವೃದ್ಧರಿಗೆ ಹದಗೆಟ್ಟ ಅವೈಜ್ಞಾನಿಕ ರಸ್ತೆ ದಾಟುವುದಕ್ಕೂ ಸಾಧ್ಯವಾಗುತ್ತಿಲ್ಲ. ಶಾಸಕ ಖಾದರ್ ಮಾತ್ರ ದೇಶ ವಿದೇಶಗಳನ್ನ ಸುತ್ತುವುದರಲ್ಲೇ ಇದ್ದಾರೆ. ನರೇಂದ್ರ ಮೋದಿಯವರನ್ನ ಬಿಟ್ಟರೆ ದೇಶ ಸುತ್ತೋದರಲ್ಲಿ ಎರಡನೇಯವರಾಗಿ ಯು.ಟಿ ಖಾದರ್ ಅವರು ಖ್ಯಾತಿ ಪಡೆದಿದ್ದಾರೆ. ಆದಷ್ಟು ಶೀಘ್ರ ಹದಗೆಟ್ಟ ರಸ್ತೆ ಸರಿಪಡಿಸದಿದ್ದಲ್ಲಿ ಯು.ಟಿ.ಖಾದರ್ ಅವರು ಭಾಗವಹಿಸುವ ಎಲ್ಲಾ ಕಾರ್ಯಕ್ರಮಗಳಿಗೂ ಕಪ್ಪು ಬಾವುಟ ಪ್ರದರ್ಶಿಸುತ್ತೇವೆಂದು ಸುನಿಲ್ ಕುಮಾರ್ ಬಜಾಲ್ ಎಚ್ಚರಿಕೆ ನೀಡಿದ್ದಾರೆ.
Accident in Thokottu, DYFI members gherao speaker Khader car for not taking any action to close pot holes in highway after the death of woman who dies of pot hole accident.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm