ಬ್ರೇಕಿಂಗ್ ನ್ಯೂಸ್
16-11-24 08:41 pm Mangalore Correspondent ಕರಾವಳಿ
ಮಂಗಳೂರು, ನ.16: ಸಹಕಾರಿ ಕ್ಷೇತ್ರ ಜಾತಿ, ಪಕ್ಷಗಳ ಆಧಾರದಲ್ಲಿ ಕಾರ್ಯ ನಿರ್ವಹಿಸಬಾರದು. ಹಳ್ಳಿಯ ಮುಗ್ಧ ವ್ಯಕ್ತಿ ಕೂಡ ಸಹಕಾರಿ ಬ್ಯಾಂಕ್ ಪ್ರಯೋಜನ ಪಡೆಯುವಂತಾಗಬೇಕು. ಆಗಲೇ ಸಹಕಾರಿ ಸಪ್ತಾಹದ ಆಚರಣೆ ಸಾರ್ಥಕವಾಗುತ್ತದೆ ಎಂದು ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಶನಿವಾರ ಕರಾವಳಿ ಉತ್ಸವ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಸಚಿವ ರಾಜಣ್ಣ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಬ್ರಿಟಿಷರಿಂದ ನಾವು ಸ್ವಾತಂತ್ರ್ಯ ಪಡೆದಾಗ ದೇಶದಲ್ಲಿ ಇದ್ದಿದ್ದು ಬರೀ 33 ಕೋಟಿ ಜನರು. ಆಗ ಊಟಕ್ಕೆ ಪರದಾಡುವ ಸನ್ನಿವೇಶ ಇಲ್ಲಿತ್ತು. ಆದರೆ ಈಗ 140 ಕೋಟಿ ಜನರ ಮೂರು ಹೊತ್ತಿನ ಊಟಕ್ಕೆ ಯಾವುದೇ ತೊಂದರೆ ಎದುರಾಗಿಲ್ಲ. ಇದಕ್ಕೆ ಕಾರಣ ಪಂಡಿತ್ ನೆಹರೂ ಅವರ ಹಸಿರು ಕ್ರಾಂತಿ ಮತ್ತು ಕ್ಷೀರ ಕ್ರಾಂತಿಯಾಗಿದೆ ಎಂದು ಸ್ಮರಿಸಿದರು. ಕಳೆದ 71 ವರ್ಷಗಳಲ್ಲಿ ಸಹಕಾರಿ ಕ್ಷೇತ್ರ ಬಹಳಷ್ಟು ಅಭಿವೃದ್ಧಿ ಕಂಡಿದೆ. ನ.14ರಿಂದ ರಾಜ್ಯದ ಉದ್ದಗಲಕ್ಕೂ ಒಂದು ವಾರಗಳ ಕಾಲ ಸಹಕಾರಿ ಸಪ್ತಾಹ ನಡೆಸಲಾಗುತ್ತದೆ. ಇದಕ್ಕೆ ಕಾರಣ ನಮ್ಮ ದೇಶದ ಪ್ರಥಮ ಪ್ರಧಾನಿ ಜವಾಹರ ಲಾಲ್ ನೆಹರು ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದರು.
ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ”ಸಹಕಾರಿ ಕ್ಷೇತ್ರ ಮಹಿಳೆಯರ ಅಭೂತಪೂರ್ವ ಬೆಂಬಲ ಹಾಗೂ ಸಹಕಾರದಿಂದ ನಡೆಯುತ್ತಿದೆ. ಹಳ್ಳಿ ಹಳ್ಳಿಗಳಲ್ಲೂ ಮಹಿಳೆಯರು ಸ್ವಾವಲಂಬಿ ಜೀವನ ಸಾಗಿಸುತ್ತಿದ್ದಾರೆ. ಇವರೆಲ್ಲರ ಶ್ರಮದಿಂದ ಸಹಕಾರಿ ಕ್ಷೇತ್ರ ಶ್ರೀಮಂತವಾಗಿದೆ. ಮುಂದೆ ಇನ್ನಷ್ಟು ಸಂಭ್ರಮ ಸಡಗರದಿಂದ ಸಪ್ತಾಹ ಆಚರಣೆಯಾಗಬೇಕು“ ಎಂದರು.
ಆರೋಗ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, “ಸ್ವಾತಂತ್ರ್ಯದ ಬಳಿಕ ಪಂಚವಾರ್ಷಿಕ ಯೋಜನೆಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ಬಲವನ್ನು ತುಂಬುವ ಕೆಲಸ ಪ್ರಾರಂಭವಾಯಿತು. ಅಂದಿನಿಂದ ಇಂದಿನವರೆಗೂ ಸಹಕಾರಿ ಕ್ಷೇತ್ರದಲ್ಲಿ ಬಹಳಷ್ಟು ಕ್ರಾಂತಿಕಾರಿ ಬದಲಾವಣೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಸಾಮಾನ್ಯರು ವ್ಯವಸ್ಥಿತವಾಗಿ ಸಹಕಾರಿ ಕ್ಷೇತ್ರವನ್ನು ಕಟ್ಟಿಕೊಂಡು ಯಶಸ್ವಿಯಾಗಿ ನಿರ್ವಹಣೆ ಮಾಡುತ್ತಿದ್ದಾರೆ“ ಎಂದರು.
ವೇದಿಕೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ
ಡಾ.ಭರತ್ ಶೆಟ್ಟಿ ವೈ., ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಕೆ.ಎಸ್. ನವೀನ್, ಗುರುಸ್ವಾಮಿ, ರಮೇಶ್, ಪ್ರಸಾದ್ ರೆಡ್ಡಿ, ಜಯಕರ ಶೆಟ್ಟಿ ಇಂದ್ರಾಳಿ, ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ಪ್ರಸಾದ್ ಕೌಶಲ್ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್., ಎಸ್ ಸಿಡಿಸಿಸಿ ಬ್ಯಾಂಕ್ ಸಿಇಒ ಗೋಪಾಲಕೃಷ್ಣ ಭಟ್, ನಿರ್ದೇಶಕ ವಿನಯ್ ಕುಮಾರ್ ಸೂರಿಂಜೆ ಮತ್ತಿತರರು ಉಪಸ್ಥಿತರಿದ್ದರು. ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ ಪ್ರಾಸ್ತಾವಿಕ ಮಾತನ್ನಾಡಿದರು.
ಇದೇ ಸಂದರ್ಭ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸಿ ”ಸಹಕಾರ ಮಾಣಿಕ್ಯ“ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಜೊತೆಗೆ 5 ಗ್ರಾಂ. ಚಿನ್ನದ ಪದಕ, 10000 ರೂ. ನಗದು ಹಾಗೂ ಪಾರಿತೋಷಕ ನೀಡಲಾಯಿತು. ಪತ್ರಿಕಾ ರಂಗದ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರಿಗೆ ಉತ್ತಮ ಸಹಕಾರಿ ಪ್ರಶಸ್ತಿಯನ್ನು ನೀಡಲಾಯಿತು.
Youths should become members of cooperative societies, minister K N Rajanna in Mangalore he said during the 71st All India Cooperative Week organised by Karnataka Rajya Sahakara Mahamandala, Karnataka Rajya Sahakara Marata Mahamandala, SCDCC Bank in Mangaluru on Saturday.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm