ಬ್ರೇಕಿಂಗ್ ನ್ಯೂಸ್
21-11-24 03:50 pm Mangalore Correspondent ಕರಾವಳಿ
ಮಂಗಳೂರು, ನ.21: ಲೋಕಾಯುಕ್ತ ಅಧಿಕಾರಿಗಳು ಮತ್ತೆ ಭ್ರಷ್ಟರ ಬೇಟೆ ಆರಂಭಿಸಿದ್ದು ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ದಾಳಿ ನಡೆಸಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಎಂಸಿ ಕೃಷ್ಣವೇಣಿ ಅವರ ಬೆಂಗಳೂರು, ಚಿಕ್ಕಬಳ್ಳಾಪುರದ ಮನೆಗಳು ಮತ್ತು ಮಂಗಳೂರಿನ ಮನೆ, ಕಚೇರಿಗೆ ದಾಳಿ ನಡೆಸಿದ್ದು ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ಎರಡು ತಿಂಗಳ ಹಿಂದಷ್ಟೇ ವರ್ಗಾವಣೆ ಆಗಿ ಮಂಗಳೂರಿಗೆ ಬಂದಿದ್ದರು. ಇವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಗಣಿ ಇಲಾಖೆ ಅಧಿಕಾರಿಯಾಗಿದ್ದರು. ಚಿಕ್ಕಬಳ್ಳಾಪುರದಲ್ಲಿ ಕೃಷ್ಣವೇಣಿ ವಿರುದ್ಧ ದೂರು ದಾಖಲಾದ ಹಿನ್ನೆಲೆ ಈ ದಾಳಿ ನಡೆದಿದೆ. ಮಂಗಳೂರು ಲೋಕಾಯುಕ್ತ ಎಸ್ಪಿ ನಟರಾಜ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಮಂಗಳೂರಿನ ವೆಲೆನ್ಸಿಯಾದ ಮನೆಗೆ ಹಾಗೂ ಮಲ್ಲಿಕಟ್ಟೆಯಲ್ಲಿರುವ ಗಣಿ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಕೃಷ್ಣವೇಣಿ ಅವರು ವೇಲೆನ್ಸಿಯಾದಲ್ಲಿ ಫ್ರೆಡ್ ರೋಸ್ ಎನ್ಕಲೇವ್ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಮೂರು ವಾಹನಗಳಲ್ಲಿ ಆಗಮಿಸಿದ್ದರು.
ಬೆಂಗಳೂರಿನಲ್ಲಿ ಬಿಬಿಎಂಪಿ ನಗರ ಯೋಜನಾ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಬಕಾರಿ ಇಲಾಖೆ ಎಸ್ಪಿ ಮೋಹನ್ ಮನೆ ಮೇಲೆಯೂ ರೇಡ್ ನಡೆದಿದೆ. ಕಾವೇರಿ ನೀರಾವರಿ ನಿಗಮ ಎಂಡಿ ಮಹೇಶ್, ಸಂಬಂಧಿಕರ ಮನೆ ಮೇಲೆ ದಾಳಿ ಮಾಡಲಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಹೇಶ್ ಮನೆ, ಸಂಬಂಧಿಕರ ಮನೆಗಳಿಗೆ ದಾಳಿ ನಡೆದಿದೆ.
A team of Lokayukta officers from the city and Chikkaballapur raided the residence and office of Krishnaveni, an officer in the mines and geology department, in the early hours of Thursday.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 10:58 pm
HK News Staffer
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm