ಬ್ರೇಕಿಂಗ್ ನ್ಯೂಸ್
21-11-24 09:22 pm Mangalore Correspondent ಕರಾವಳಿ
ಬೆಳ್ತಂಗಡಿ, ನ.21: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆಯೊಂದು ಬೈಕ್ ಮೇಲೆ ದಾಳಿ ನಡೆಸಿರುವ ಆತಂಕಕಾರಿ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ಎಂಬವರು ಗುರುವಾರ ಬೆಳಗ್ಗೆ ತನ್ನ ಮಕ್ಕಳಾದ ಲಾವ್ಯಾ ಹಾಗೂ ಅದ್ವಿತ್ರನ್ನು ಶಿಬಾಜೆ ಗ್ರಾಮದ ಪೆರ್ಲ ಶಾಲೆಗೆ ಕರೆದೊಯ್ಯುತ್ತಿದ್ದರು. ಬೆಳಗ್ಗೆ 8:30ರ ಸುಮಾರಿಗೆ ವಸಂತ ಗೌಡ ಬೈಕಿನಲ್ಲಿ ಮಕ್ಕಳನ್ನು ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ರಸ್ತೆಯ ತಿರುವಿನಲ್ಲಿ ರಸ್ತೆಯ ನಡುವೆಯೇ ಒಂಟಿ ಸಲಗ ಕಾಣಿಸಿಕೊಂಡಿದೆ. ಭಯದಿಂದ ಅವರು ತನ್ನ ಬೈಕ್ ಏಕಾಏಕಿ ಬ್ರೇಕ್ ಹಾಕಿ ನಿಲ್ಲಿಸಿದ್ದರಿಂದ ರಸ್ತೆಗೆ ಬಿದ್ದ ವಸಂತ ಗೌಡ ಮತ್ತು ಮಕ್ಕಳಿಬ್ಬರಿಬ್ಬರ ಕೈಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾಡಾನೆ ಹತ್ತಿರ ಬರುತ್ತಿದ್ದಂತೆ ಅವರು ಅಲ್ಲಿಂದ ತಪ್ಪಿಸಿಕೊಂಡಿದ್ದಾರೆ.
ಓಡುತ್ತಿದ್ದಂತೆಯೇ ಬೈಕ್ ಕಡೆಗೆ ಆಗಮಿಸಿದ ಒಂಟಿ ಸಲಗ ಬೈಕ್ ಅನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ನಜ್ಜುಗುಜ್ಜುಗೊಳಿಸಿದೆ ಎಂದು ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಕಾಡಾನೆಯ ಉಪಟಳ ಮೀರಿದ್ದು, ಕೂಡಲೇ ಅರಣ್ಯ ಇಲಾಖೆಯವರು ಅವುಗಳನ್ನ ಓಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
Wild elephant attacks two wheeler at Belthangady in Mangalore. Two Children were travelling with their father to school in the bike during which the wild elephant was standing in the middle of the road at Kallaji village.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm