ಆ.11ರವರೆಗೂ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧ

08-08-20 12:16 pm       Mangalore Reporter   ಕರಾವಳಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಚಾರ್ಮಾಡಿ ಘಾಟ್ ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸುತ್ತಿದೆ. ಹೀಗಾಗಿ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಬೆಳ್ತಂಗಡಿ, ಆ. 07: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಚಾರ್ಮಾಡಿ ಘಾಟ್ ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸುತ್ತಿದೆ. ಹೀಗಾಗಿ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಎರಡು ದಿನಗಳ ಹಿಂದೆ ಘಾಟ್ ನ ಆರನೇ ತಿರುವಿನಲ್ಲಿ ಗುಡ್ಡ ಕುಸಿದಿತ್ತು. ವಿಲ್ಲುಪುರಂ ಮಂಗಳೂರು ಹೆದ್ದಾರಿ ಬಂದ್ ಆಗಿತ್ತು. ಇದೀಗ ಮತ್ತೆ ಗುಡ್ಡ ಜರುಗಿದೆ. ಇಂದು ಬೃಹತ್ ಬಂಡೆಗಳು ರಸ್ತೆ ಮೇಲೆ ಉರುಳಿದ್ದು, ರಸ್ತೆಯಲ್ಲೂ ಬಿರುಕು ಕಾಣಿಸಿಕೊಂಡಿದೆ. ಹೀಗಾಗಿ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆಯಾಗುತ್ತಿದ್ದು, ಅವಘಡಗಳನ್ನು ತಡೆಯುವ ಮುಂಜಾಗ್ರತಾ ಕ್ರಮವಾಗಿ ವಾಹನಗಳಿಗೆ ನಿಷೇಧ ಹೇರಲಾಗಿದೆ. ತಕ್ಷಣದಿಂದ ಆದೇಶ ಜಾರಿಗೆ ಬರುವಂತೆ ಆಗಸ್ಟ್‌ 11ರ ಮಧ್ಯ ರಾತ್ರಿವರೆಗೂ ಎಲ್ಲಾ ರೀತಿಯ ಸಂಚಾರವನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇದಕ್ಕೆ ಬದಲಿಯಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಶಿರಾಡಿ ಘಾಟ್ ಗುಂಡ್ಯಾ ಮೂಲಕ ಸಂಚರಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.