ಬ್ರೇಕಿಂಗ್ ನ್ಯೂಸ್
24-11-24 03:21 pm Mangalore Correspondent ಕರಾವಳಿ
ಉಡುಪಿ, ನ.23: ಪಶ್ಚಿಮ ಘಟ್ಟದ ಕಾಡಿನಲ್ಲಿಯೇ ಸುತ್ತಾಡುವ ನಕ್ಸಲರು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೊಲೀಸರ ಕಣ್ತಪ್ಪಿಸಲು ರೈಲಿನಲ್ಲಿ ಪ್ರಯಾಣಿಸಿದ್ದರು ಎಂಬ ಮಾಹಿತಿ ಲಭಿಸಿದೆ. ಎನ್‌ಕೌಂಟರ್‌ಗೆ ಬಲಿಯಾದ ನಕ್ಸಲ್ ವಿಕ್ರಂ ಗೌಡ ಮತ್ತು ತಂಡ ಸುಬ್ರಹ್ಮಣ್ಯದ ನೆಟ್ಟಣ ರೈಲು ನಿಲ್ದಾಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಹೋಗಿ ಆನಂತರ ಕಾಡಿಗೆ ತೆರಳಿದ್ದರು ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಎಲ್ಲ ಕಡೆ ಹೆಚ್ಚುವರಿ ಭದ್ರತೆ ಇದ್ದುದರಿಂದ ದಕ್ಷಿಣ ಕನ್ನಡ, ಕೊಡಗು ಗಡಿಭಾಗ ಕೂಜುಮಲೆ, ಕಡಮಕಲ್ಲು , ಸುಬ್ರಹ್ಮಣ್ಯ, ಬಿಳಿನೆಲೆ ಭಾಗದಲ್ಲಿ ಹೆಚ್ಚಿನ ದಿನಗಳನ್ನು ನಕ್ಸಲರು ಕಳೆದಿದ್ದರು. ಈ ವೇಳೆ ಇಲ್ಲಿನ ಅರಣ್ಯದಂಚಿನ ಮನೆಗಳಿಗೆ ಭೇಟಿ ನೀಡಿ ದಿನಸಿ ಹಾಗೂ ಇನ್ನಿತರ ಸಾಮಗ್ರಿಗಳನ್ನು ಕೊಂಡೊಯ್ದಿದ್ದು ವರದಿಯಾಗಿತ್ತು. ಅದೇ ಸಮಯದಲ್ಲಿ ಸುಬ್ರಹ್ಮಣ್ಯ ನೆಟ್ಟಣ ರೈಲು ನಿಲ್ದಾಣ ಮೂಲಕ ರೈಲಿನಲ್ಲಿ ಮುರ್ಡೇಶ್ವರ ಕಡೆಗೆ ಪ್ರಯಾಣಿಸಿದ್ದರು.

ಮುರ್ಡೇಶ್ವರ ರೈಲು ನಿಲ್ದಾಣದಲ್ಲಿ ಇಳಿದು ಕಾಡು ಹತ್ತಿದ್ದ ಅವರು ಒಂದು ಬಾರಿ ಕೊಲ್ಲೂರು ಭಾಗದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲಿಂದ ಅವರು ಕಾಡು ದಾರಿಯಾಗಿ ಕಾರ್ಕಳ, ಹೆಬ್ರಿ ಭಾಗಕ್ಕೆ ಬಂದಿದ್ದರು. ಪೀತ ಬೈಲಿನಲ್ಲಿ ಎನ್‌ಕೌಂಟರ್ ಆಗುವ ಕೆಲವು ದಿನಗಳ ಹಿಂದೆಯಷ್ಟೆ ನಕ್ಸಲರು ಈದುವಿನಲ್ಲಿ ಕಾಣಿಸಿಕೊಂಡಿದ್ದರು. ನಕ್ಸಲರು ರೈಲಿನಲ್ಲಿ ಪ್ರಯಾಣಿಸುವಾಗ ಶಸ್ತ್ರಾಸ್ತ್ರಗಳನ್ನು ಬಚ್ಚಿಟ್ಟು ಯಾರಿಗೂ ತಿಳಿಯದಂತೆ ಗೌಪ್ಯತೆ ಕಾಪಾಡಿಕೊಂಡಿದ್ದರು ಎಂದು ತನಿಖೆ ವೇಳೆ ಮಾಹಿತಿ ಸಿಕ್ಕಿದ್ದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಕೇರಳ ಅರಣ್ಯದಲ್ಲಿದ್ದಾಗ ವಿಕ್ರಂ ಹಾಗೂ ಏಳು ಮಂದಿ ನಕ್ಸಲರ ತಂಡ ಸಕ್ರಿಯವಾಗಿತ್ತು. ಹತ್ತು ವರ್ಷಗಳಿಂದ ಅಲ್ಲಿಯೇ ಇದ್ದ ಈ ತಂಡದೊಳಗೆ ವೈಮನಸ್ಸು ಉಂಟಾಗಿತ್ತು. ಕೇರಳದ ನಕ್ಸಲ್ ನಾಯಕ ಸಂಯೋಯ್ ದೀಪಕ್, ಮೊಹಿಯುದ್ದೀನ್ ಅವರ ತಂಡಗಳೊಂದಿಗೆ ಭಿನ್ನಾಭಿಪ್ರಾಯ ಬೆಳೆದಿತ್ತು. ಸಂಘಟನೆ, ಹಣಕಾಸಿನ ವಿಚಾರದಲ್ಲಿ ಜಗಳವೂ ನಡೆದಿತ್ತು. ವಿಕ್ರಂ ಗೌಡ ಮತ್ತವರ ತಂಡ ಸಂಯೋಯ್ ತಂಡದಿಂದ 1 ಲಕ್ಷ ರೂ. ಪಡೆದಿತ್ತು. ಇದೇ ವಿಷಯದಲ್ಲಿ ತಕರಾರು ನಡೆದು ವಿಕ್ರಂ ಗೌಡ ಮತ್ತು ಜೊತೆಗಾರರ ತಂಡ ಕರ್ನಾಟಕದ ಕಡೆಗೆ ಎಂಟ್ರಿ ಕೊಟ್ಟಿದ್ದರು. ಹೆಚ್ಚಾಗಿ ಕಾಡಿನೊಳಗೇ ಇರುತ್ತಿದ್ದ ನಕ್ಸಲರು ಕೆಲವೊಮ್ಮೆ ಇತರೇ ಸಾರ್ವಜನಿಕರ ರೀತಿ ನಾಡಿಗೆ ಬಂದು ಹೋಗುತ್ತಿದ್ದರೇ ಎನ್ನುವ ಪ್ರಶ್ನೆ ಎದುರಾಗಿದೆ.
Police sources have revealed that the slain Naxal leader Vikram Gowda and his team had some time back travelled by train from Subrahmanya to Murdeshwar and then had proceeded on the forest path. Investigations have revealed that around Lok Sabha election time, the Naxals had spent most of the time in Koojumale, Kadamakallu, Subrahmanya and Bilinele region and had even visited some houses.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm