ಬ್ರೇಕಿಂಗ್ ನ್ಯೂಸ್
26-11-24 10:50 pm Mangalore Correspondent ಕರಾವಳಿ
ಮಂಗಳೂರು, ನ.26: ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹೆರಿಗೆಯಾದ ಮಹಿಳೆಯೊಬ್ಬರ ಮಗುವನ್ನು ಸಿಬಂದಿ ಮಾರಾಟ ಮಾಡಿದ್ದಾರೆ ಎಂದು ಬರೆದ ಪತ್ರವೊಂದು ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಸ್ಪಷ್ಟನೆ ನೀಡಿದ್ದು, ಅಂತಹ ಆರೋಪ ನಿರಾಧಾರವಾದದ್ದು ಎಂದು ತಿಳಿಸಿದ್ದಾರೆ.
ಎಡಪದವು ನಿವಾಸಿ ಭವ್ಯ ಎನ್ನುವ ಮಹಿಳೆ ಬರೆದ ಪತ್ರದಲ್ಲಿ ಆಗಸ್ಟ್ 18ರಂದು ತಾನು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆದರೆ ತನ್ನ ಮಗುವನ್ನು ಸಿಬಂದಿ ಬೇರೆ ಯಾರಿಗೋ ಮಾರಾಟ ಮಾಡಿದ್ದಾರೆ. ತಾನು 9 ತಿಂಗಳು ಕಷ್ಟಪಟ್ಟು ಸಲಹಿದ್ದು ಈಗ ಮಗು ಇಲ್ಲದ ನೋವನ್ನು ಅನುಭವಿಸುತ್ತಿದ್ದೇನೆ, ನನಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಕೋರಲಾಗಿತ್ತು. ವಾಟ್ಸಪ್ ಜಾಲತಾಣದಲ್ಲಿ ಬರೆದು ಹಾಕಿದ್ದ ಪತ್ರವು ಕಳೆದ ಕೆಲವು ದಿನಗಳಿಂದ ಭಾರೀ ವೈರಲ್ ಆಗಿದ್ದು, ಮಾಧ್ಯಮದ ವಾಟ್ಸಪ್ ಗ್ರೂಪ್ ಗಳಲ್ಲಿಯೂ ಬಂದಿತ್ತು.

ಈ ಬಗ್ಗೆ ಲೇಡಿಗೋಷನ್ ಆಸ್ಪತ್ರೆಯ ವೈದ್ಯಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಆಗಸ್ಟ್ 18ರಂದು ಭವ್ಯ ಎನ್ನುವ ಮಹಿಳೆಗೆ ಹೆರಿಗೆಯಾಗಿದ್ದು, ಮಗುವಿನ ಒಂದು ಕಣ್ಣಿನಲ್ಲಿ ಕಣ್ಣ ಗುಡ್ಡೆ ಇಲ್ಲದಿರುವುದನ್ನು ತಜ್ಞರು ಆಕೆಯ ಗಮನಕ್ಕೆ ತಂದಾಗ ಅದು ಮಗು ತನ್ನದಲ್ಲ ಎಂದು ನಿರಾಕರಿಸಿದ್ದಾರೆ. ಆಸ್ಪತ್ರೆಯ ಸಿಬಂದಿಯೇ ಅದಲು ಬದಲು ಮಾಡಿದ್ದಾರೆ ಎಂದು ಪೊಲೀಸರಿಗೂ ದೂರು ನೀಡಿದ್ದರು. ಆನಂತರ, ಪೊಲೀಸ್ ತನಿಖೆ ನಡೆದು ತಾಯಿ ಮತ್ತು ಮಗುವಿನ ಡಿಎನ್ಎ ಟೆಸ್ಟ್ ವರದಿಯನ್ನು ಸಂಬಂಧಿತರು ನ್ಯಾಯಾಧೀಶರಿಗೆ ಸಲ್ಲಿಸಿದ್ದಾರೆ.
ಸದ್ಯ ಮಹಿಳೆಯ ಮಗುವು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸುಪರ್ದಿಯಲ್ಲಿದೆ. ಆದರೆ ಇತ್ತೀಚಿನ ಎರಡು ದಿನಗಳಲ್ಲಿ ಸದ್ರಿ ಮಹಿಳೆಯು ತನ್ನ ಶಿಶುವನ್ನು ಆಸ್ಪತ್ರೆಯ ಸಿಬಂದಿ ಮಾರಾಟ ಮಾಡಿದ್ದಾರೆಂದು ಮಾನಹಾನಿಕರ ರೀತಿಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಬಿತ್ತರಿಸಿ ಸಮಾಜದಲ್ಲಿ ಗೊಂದಲ ಸೃಷ್ಟಿಸಿದ್ದಾರೆ. ಹೆರಿಗೆ ಮತ್ತು ಸ್ತ್ರೀರೋಗ ವಿಚಾರದಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸಿರುವ ಆಸ್ಪತ್ರೆಯ ಬಗ್ಗೆ ಕಳಂಕ ತಂದಿದ್ದಾರೆ. ಸದ್ರಿ ಪ್ರಕರಣ ನ್ಯಾಯಾಲಯದಲ್ಲಿದ್ದು ತೀರ್ಪನ್ನು ಗೌರವಪೂರ್ವಕವಾಗಿ ನಿರೀಕ್ಷಿಸುತ್ತಿದ್ದೇವೆ. ಈ ನಡುವೆ ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ಬಗ್ಗೆ ಮಾಡಿರುವ ಆರೋಪವು ನಿರಾಧಾರವಾಗಿರುತ್ತದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mangalore Baby missing in Lady goschen Hospital letter goes viral, hospital issues clarification stating that no such incident has occured.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm