Mangalore rain, Fengal, School college holiday: ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಯಲ್ಲಿ ಮಳೆ ಆರ್ಭಟಕ್ಕೆ ನಲುಗಿದ ಜನ ; ಡಿ.3ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ 

02-12-24 06:21 pm       Mangalore Correspondent   ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಡಿ.2ರಿಂದ 3ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆ ಡಿ.3ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

ಮಂಗಳೂರು, ಡಿ.2: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಡಿ.2ರಿಂದ 3ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆ ಡಿ.3ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

ಅಂಗನವಾಡಿ ಸೇರಿದಂತೆ ಎಲ್ಲ ರೀತಿಯ ಖಾಸಗಿ, ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪಿಯುಸಿ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಲ್ಲದೆ, ಜನರು ನದಿ, ಸಮುದ್ರ ದಡಗಳಿಗೆ ತೆರಳದಂತೆ ಸೂಚಿಸಲಾಗಿದೆ. 

ಆರೆಂಜ್ ಅಲರ್ಟ್ ನೀಡಿದ್ದು ಜಿಲ್ಲೆಯಾದ್ಯಂತ ಅಲ್ಲಲ್ಲಿ ಜೋರಾದ ಮಳೆಯಾಗುವ ಸಾಧ್ಯತೆಯಿದೆ. ಸಿಡಿಲಿನ ಆರ್ಭಟವೂ ಹೆಚ್ಚಿದ್ದು ಕಾರ್ಮೋಡ ಕವಿದಿದೆ. ಹೀಗಾಗಿ ಜಿಲ್ಲಾ ವಿಪತ್ತು ಪ್ರಾಧಿಕಾರವು ಅಲರ್ಟ್ ಆಗಿದ್ದು ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಜಾಗ್ರತೆ ಇರುವಂತೆ ಸೂಚಿಸಲಾಗಿದೆ. 

ಕಾಸರಗೋಡು ಜಿಲ್ಲೆಯಲ್ಲೂ ಶಾಲೆ, ಕಾಲೇಜುಗಳಿಗೆ ಡಿ.3ರಂದು ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಮಧ್ಯಾಹ್ನದಿಂದಲೇ ಭಾರೀ ಮಳೆಯಾಗುತ್ತಿದೆ. ನಿರಂತರವಾಗಿ ಎರಗಿದ ಸಿಡಿಲು, ಮಳೆಯ ಆರ್ಭಟಕ್ಕೆ ಜನರು ತತ್ತರಿಸಿದ್ದಾರೆ. ಕುಂಬಳೆ, ಮಂಜೇಶ್ವರ, ಉಪ್ಪಳ ಆಸುಪಾಸಿನಲ್ಲಿ ಮಳೆನೀರು ಮನೆ, ಕೃಷಿ ಜಮೀನುಗಳಿಗೆ ನುಗ್ಗಿದ್ದು ಪ್ರವಾಹದ ಸ್ಥಿತಿ ಸೃಷ್ಟಿಸಿದೆ.‌

Fenagl cyclone, school and colleges declared holiday in Mangalore due to heavy rains. Bengaluru and several other parts of Karnataka are bracing for continued rainfall over the next two days, owing to the impact of Cyclone Fengal, which has now weakened.