ಬ್ರೇಕಿಂಗ್ ನ್ಯೂಸ್
04-12-24 09:10 pm Mangalore Correspondent ಕರಾವಳಿ
ಮಂಗಳೂರು, ಡಿ.4: ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುವ 30ನೇ ವರ್ಷದ ‘ಆಳ್ವಾಸ್ ವಿರಾಸತ್’ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವು ಈ ಬಾರಿ ವಿಶಿಷ್ಟ ಮೇಳಗಳ ಜೊತೆಗೆ ಡಿ.10ರಿಂದ 15ರ ವರೆಗೆ ಮೂಡುಬಿದಿರೆಯ ಪುತ್ತಿಗೆ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 30ನೇ ವರ್ಷದ ವಿರಾಸತ್ ಅಂಗವಾಗಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಸಾಂಘಿಕ ಪ್ರದರ್ಶನಗಳಿಗೆ ಒತ್ತು ನೀಡಲಾಗಿದ್ದು, ವಿವಿಧತೆಯಲ್ಲಿ ಏಕತೆಯ ಅಭಿವ್ಯಕ್ತಿಯಾಗಲಿದೆ. ಡಿ.10ರಿಂದ ಡಿ.14ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮೇಳಗಳಿದ್ದರೆ, ಡಿ.15 ರಂದು ಸಂಪೂರ್ಣವಾಗಿ ಮೇಳ ಹಾಗೂ ಪ್ರದರ್ಶನಗಳಿಗೆ ಮೀಸಲಿಡಲಾಗಿದ್ದು ಪ್ರವೇಶ ಸಂಪೂರ್ಣ ಉಚಿತವಾಗಿದೆ ಎಂದರು. ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥರಾದ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.
ಡಿ.10ರ ಮಂಗಳವಾರ ಸಂಜೆ 5.30ರಿಂದ 6.30ರ ವರೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸುವರು. ಉಡುಪಿಯ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಜಿ. ಶಂಕರ್ ಅಧ್ಯಕ್ಷತೆ ವಹಿಸುವರು. ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಕೋಟ್ಯಾನ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್, ಭಾರತ್ ಸ್ಕೌಟ್ಸ್ ಗೈಡ್ಸ್ ಕರ್ನಾಟಕ ರಾಜ್ಯ ಪ್ರಧಾನ ಆಯುಕ್ತ ಪಿ.ಜಿ.ಆರ್. ಸಿಂಧಿಯಾ, ಬಿಎಲ್ ಶಂಕರ್, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರಕುಮಾರ್, ಎಂ.ಜಿ.ಆರ್. ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ, ಮುಂಬಯಿ ಹೇರಂಭಾ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ ಮತ್ತಿತರರು ಇರಲಿದ್ದಾರೆ.
ಸಂಜೆ 06.35ರಿಂದ ರಾತ್ರಿ 8.30ರ ವರೆಗೆ 100ಕ್ಕಿಂತಲೂ ಅಧಿಕ ದೇಶೀಯ ಜಾನಪದ ಕಲಾ ತಂಡಗಳಿಂದ 3000ಕ್ಕೂ ಮಿಕ್ಕಿದ ಕಲಾವಿದರನ್ನು ಒಳಗೊಂಡ ಭವ್ಯ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ರಾತ್ರಿ 8.30ರಿಂದ 9.30ರ ವರೆಗೆ ವೇದಘೋಷಗಳು, ಭಜನೆಗಳು, ಪುಷ್ಪಪಲ್ಲಕ್ಕಿಗಳು, ಮಂಗಳವಾದ್ಯಗಳೊಂದಿಗೆ ವಿಘ್ನನಿವಾರಕ, ಸರಸ್ವತಿ, ಲಕ್ಷ್ಮೀ , ಹನುಮಂತ, ಶ್ರೀರಾಮ, ಶ್ರೀ ಕೃಷ್ಣಾದಿ ಆರೂಢ ದೇವರ ಮೆರವಣಿಗೆಯೊಂದಿಗೆ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ರಥ ಸಂಚಲನ ಮತ್ತು ರಥಾರತಿ ನಡೆಯಲಿದೆ.
ಡಿ.11ರಂದು ಸಂಜೆ 05.45ರಿಂದ 6.30ರ ವರೆಗೆ ಆಳ್ವಾಸ್ ವಿರಾಸತ್ 2024 ಪ್ರಶಸ್ತಿ ಪ್ರದಾನ ನಡೆಯಲಿದ್ದು, ಈ ಬಾರಿ ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತಗಾರ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ಪ್ರದಾನ ಮಾಡಲಾಗುವುದು. 6.35ರಿಂದ 7.30ರ ವರೆಗೆ ಅವರು ಹಿಂದೂಸ್ಥಾನಿ ಗಾಯನ ನಡೆಸಿಕೊಡುವರು. ಬಳಿಕ ರಾತ್ರಿ 7.45 ರಿಂದ 9 ರ ವರೆಗೆ ಗುಜರಾತ್‌ನ ರಂಗ್ ಮಲಹರ್ ದಿ ಫೋಕ್ ಆರ್ಟ್ಸ್ ತಂಡದಿಂದ ವೈವಿಧ್ಯಮಯ ಗುಜರಾತಿ ಜಾನಪದ ನೃತ್ಯ ಪ್ರದರ್ಶನ ಹಾಗೂ ೯ರಿಂದ ಆಳ್ವಾಸ್ ವೈವಿಧ್ಯಮಯ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ.
ಡಿ.12ರಂದು ಸಂಜೆ 5.45ಕ್ಕೆ ದೀಪ ಪ್ರಜ್ವಲನ ಹಾಗೂ 5.55ಕ್ಕೆ ಕಲಾವಿದರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಗುವುದು. ಸಂಜೆ 6ರಿಂದ 8ರ ವರೆಗೆ ಗುಜರಾತ್ ಒಸ್ಮಾನ್ ಮೀರ್ ಮತ್ತು ಬಳಗದಿಂದ ಸಂಗೀತ ಲಹರಿ ಹಾಗೂ ರಾತ್ರಿ ೮.೧೫ರಿಂದ ನೃತ್ಯ ವೈವಿಧ್ಯ ನಡೆಯಲಿದೆ. ಉಡುಪಿ ಕೊಡವೂರು ನೃತ್ಯ ನಿಕೇತನ, ಬೆಂಗಳೂರು ಚಿಗುರು ನೃತ್ಯಾಲಯ, ಮಂಗಳೂರು ಸನಾತನ ನಾಟ್ಯಾಲಯ, ಕುಂದಾಪುರ ನೃತ್ಯ ವಸಂತ ನಾಟ್ಯಾಲಯ, ಮಂಗಳೂರು ಗಾನ ನೃತ್ಯ ಅಕಾಡೆಮಿ. ಮಂಗಳೂರು ಅರೆಹೊಳೆ ಪ್ರತಿಷ್ಠಾನದ ಕಲಾವಿದರು ನೃತ್ಯ ವೈವಿಧ್ಯ ನಡೆಸಿಕೊಡುವರು. ರಾತ್ರಿ 9.15ರಿಂದ ಆಳ್ವಾಸ್ ಸಾಂಸ್ಕೃತಿಕ ವೈವಿಧ್ಯ ನಡೆಯಲಿದೆ.
ಸಂಜೆ 5045ಕ್ಕೆ ದೀಪ ಪ್ರಜ್ವಲನ ಹಾಗೂ 5.55ಕ್ಕೆ ಕಲಾವಿದರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಗುವುದು. ಸಂಜೆ 6ರಿಂದ 8 ಗಂಟೆಯವರೆಗೆ ನೀಲಾದ್ರಿ ಕುಮಾರ್ ಮತ್ತು ತಂಡದಿಂದ ‘ಸೌಂಡ್ ಆಫ್ ಇಂಡಿಯಾ’ ಹಾಗೂ 8.15ರಿಂದ 9ರ ವರೆಗೆ ಕೋಲ್ಕತ್ತಾದ ಆಶೀಮ್ ಬಂಧು ಭಟ್ಟಾಚಾರ್ಜಿ ಸಂಯೋಜನೆಯಲ್ಲಿ ಭರತನಾಟ್ಯ, ಒಡಿಸ್ಸಿ, ಕಥಕ್ ಸಂಗಮದ ತ್ರಿಪರ್ಣ ಪ್ರಸ್ತುತಗೊಳ್ಳಲಿದೆ. ರಾತ್ರಿ 9ರಿಂದ ಬೆಂಗಳೂರು ಕಾರ್ತೀಸ್ ಪರ್‌ಫಾರ್ಮಿಂಗ್ ಆರ್ಟ್ಸ್ ‘ನೃತ್ಯೋಲ್ಲಾಸ’ ಹಾಗೂ ಬೆಂಗಳೂರು ಶ್ರೀ ರಾಜರಾಜೇಶ್ವರಿ ಕಲಾನಿಕೇತನದಿಂದ ಕೂಚುಪುಡಿ ನೃತ್ಯ ಹಾಗೂ 9.15ರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಪ್ರದರ್ಶನಗೊಳ್ಳಲಿದೆ.
ಡಿ.14ರಂದು ಸಂಜೆ 5.45ಕ್ಕೆ ದೀಪ ಪ್ರಜ್ವಲನ ಹಾಗೂ 5.55ಕ್ಕೆ ಕಲಾವಿದರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಗುವುದು. ಸಂಜೆ 6ರಿಂದ 9ರ ವರೆಗೆ ಚೆನೈ ಸ್ಟೆಕೇಟೋದ ಖ್ಯಾತ 25 ಕಲಾವಿದರಿಂದ ಭರ್ಜರಿ ‘ಸಂಗೀತ ರಸದೌತಣ’ ಹಾಗೂ ರಾತ್ರಿ 9ಕ್ಕೆ ಸಾಂಸ್ಕೃತಿಕ ರಥ ಸ್ವಸ್ಥಾನ ಗಮನ ನಡೆಯಲಿದೆ.
ಕೊನೆಯ ದಿನ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ. ಆದರೆ, ಕೃಷಿ ಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ ಮೇಳ, ಚಿತ್ರಕಲಾ ಮೇಳ, ಕಲಾಕೃತಿ ಪ್ರದರ್ಶನ, ಛಾಯಾಚಿತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಮಹಾಮೇಳ ದಿನಪೂರ್ತಿ ತೆರೆದಿರುತ್ತದೆ.
The 30th annual Alva’s Virasat national cultural festival will be held between December 10 and December 15 at the Alvas College campus in Puttige of Moodbidri. There will be cultural programmes between December 10 and December 14, while Krishi mela, food mela, art mela, artecrafts mela, photographs exhibition, and fruits and vegetables exhibition will be held on December 15.
04-12-24 08:10 pm
HK News Desk
Online Game, Suicide, Bangalore; ಆನ್ಲೈನ್ ಗೇಮಿ...
04-12-24 04:05 pm
Karwar, Ballon Death: ಕಾರವಾರ ; ಗಂಟಲಲ್ಲಿ ಬಲೂನ್...
02-12-24 02:39 pm
Kannada actress Shobitha Shivanna, Suicide: ಕ...
02-12-24 01:55 pm
Yatnal, BJP Notice: ರೆಬಲ್ ನಾಯಕ ಯತ್ನಾಳ್ ಗೆ ಬಿಜ...
02-12-24 01:33 pm
04-12-24 01:29 pm
HK News Desk
'ಪ್ರಚಂಡ ಫೆಂಗಲ್' ಆರ್ಭಟಕ್ಕೆ ತಮಿಳುನಾಡು ತತ್ತರ ; ಮ...
03-12-24 01:46 pm
ಕೇರಳ ಸಾರಿಗೆ ಬಸ್ಗೆ ಕಾರು ಡಿಕ್ಕಿ ; ಐವರು MBBS ವಿ...
03-12-24 01:06 pm
ತಮಿಳುನಾಡಿನ 14 ಜಿಲ್ಲೆಗಳಲ್ಲಿ ಫೆಂಗಾಲ್ ಹಾವಳಿ ; ಉತ...
02-12-24 10:44 pm
Kasaragod, Muna Shamsuddin: ಲಂಡನ್ನಲ್ಲಿ ಚಾರ್ಲ...
01-12-24 03:54 pm
04-12-24 10:20 pm
Mangalore Correspondent
Mangalore, Alvas college Virasat: ಡಿ.10ರಿಂದ 1...
04-12-24 09:10 pm
Dr Krishna Nayak, Mangalore, Dentist: ಮಂಗಳೂರಿ...
04-12-24 02:32 pm
Mangalore, lucky Draw, Police: ಫ್ರಾಡ್ ಲಕ್ಕಿ ಸ...
03-12-24 11:05 pm
Actor Upendra in Mangalore, UI Kannada movie:...
03-12-24 10:51 pm
03-12-24 08:50 pm
Bangalore Correspondent
Kadaba Murder, Managalore Crime: ಸ್ನೇಹಿತನನ್ನೇ...
03-12-24 03:40 pm
ACP Dhanya Nayak, Drugs, Mangalore: ಮುಂದುವರಿದ...
30-11-24 03:03 pm
Bangalore crime, Murder, Assam, Arrest: ಲವ್ ಮ...
29-11-24 10:49 pm
Dharmasthala Robbery, Mangalore crime: ಧರ್ಮಸ್...
29-11-24 12:20 pm