ಬ್ರೇಕಿಂಗ್ ನ್ಯೂಸ್
05-12-24 11:52 am Mangalore Correspondent ಕರಾವಳಿ
ಮಂಗಳೂರು, ಡಿ.5: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಮತ್ತೆ ದಕ್ಷಿಣ ಕನ್ನಡ ಜಿಲ್ಲೆಗೆ ಎಂಟ್ರಿ ಕೊಟ್ಟಿದ್ದು ಪುತ್ತೂರು, ಬೆಳ್ತಂಗಡಿ, ಸುಳ್ಯದಲ್ಲಿ ತಲೆಮರೆಸಿಕೊಂಡಿರುವ ಮೂವರು ಆರೋಪಿಗಳ ಮನೆಗಳಿಗೆ ದಾಳಿ ನಡೆಸಿದ್ದಾರೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ನಾಪತ್ತೆಯಾಗಿರುವ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷಾದ್ (27), ಸುಳ್ಯ ತಾಲೂಕಿನ ಬೆಳ್ಳಾರೆಯ ಸಿದ್ದೀಕ್ ಮತ್ತು ಪುತ್ತೂರಿನ ಕೆಯ್ಯೂರು ನಿವಾಸಿ ಉಮ್ಮರ್ ಎನ್ನುವವರ ಮನೆಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಿಂದ ಬಂದಿರುವ ಎನ್.ಐ.ಎ ಅಧಿಕಾರಿಗಳು ಏಕಕಾಲದಲ್ಲಿ ಬೆಳ್ಳಂಬೆಳಗ್ಗೆ ದಾಳಿ ಕಾರ್ಯಾಚರಣೆ ನಡೆಸಿದ್ದಾರೆ.
ಇವರಿಗೆ, ಈ ಹಿಂದೆ ವಿಚಾರಣೆ ಹಾಜರಾಗುವಂತೆ ಎಸ್ಐಎ ನೋಟಿಸ್ ನೀಡಿತ್ತು. ಮೂರು ಮನೆಗಳಲ್ಲೂ ಪರಿಸೀಲನೆ ನಡಸಿದ್ದಾರೆ. ನೌಷದ್ ಪತ್ತೆಗಾಗಿ ಎನ್.ಐ.ಎ 2 ಲಕ್ಷ ರಿವಾರ್ಡ್ ಘೋಷಣೆ ಮಾಡಿತ್ತು. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಅಬೂಬಕ್ಕರ್ ಸಿದ್ಧೀಕ್ ಪತ್ನಿಯ ಸಹೋದರನಾಗಿರುವ ಉಮ್ಮರ್ ಶಿವಮೊಗ್ಗದ ಮಸೀದಿಯೊಂದರಲ್ಲಿ ಧರ್ಮಗುರುವಾಗಿದ್ದು ಪ್ರಕರಣದಲ್ಲಿ ಶಾಮೀಲಾತಿ ಇರುವ ಕಾರಣಕ್ಕೆ ನೋಟಿಸ್ ನೀಡಿದ್ದಾರೆ. ಸಿದ್ದೀಕ್ ಪತ್ತೆಗೂ ಎರಡು ಲಕ್ಷ ಬಹುಮಾನ ಘೋಷಿಸಲಾಗಿತ್ತು.
ಹಲವು ಬಾರಿ ಸಿದ್ದಿಕ್ ಮನೆಗೆ ನೋಟೀಸ್ ಕೊಟ್ಟಿದ್ದ ಅಧಿಕಾರಿಗಳು ಇದೀಗ ಮತ್ತೆ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. 2022ರ ಜುಲೈ 26ರಂದು ಸುಳ್ಯದ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು.
NIA conducts raids at various locations in India, three houses searched at sullia, puttur and Belthangady in Mangalore. National Investigating Agency (NIA) on Wednesday conducted raids at 16 different locations across karnataka, including Bengaluru, Kodagu, Chennai, and Ernakulam, in connection with the 2022 murder of BJP Youth Wing leader Praveen Nettaru in Dakshina Kannada.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am