ಬ್ರೇಕಿಂಗ್ ನ್ಯೂಸ್
07-12-24 04:00 pm Mangalore Correspondent ಕರಾವಳಿ
ಮಂಗಳೂರು, ಡಿ.6: ರಾಜ್ಯದ ನಗರ ಪ್ರದೇಶಗಳಲ್ಲಿ ವಾಸಿಸುವ ಬಡವರು, ಆಶ್ರಯ ರಹಿತರಿಗೆ ವಸತಿ ವ್ಯವಸ್ಥೆ ಕಲ್ಪಿಸುವ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ- ನಗರ(ಪಿಎಂಎವೈ-ಯು) 2.0 ಸ್ಕೀಮ್ ಅನುಷ್ಠಾನಕ್ಕೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಇಲ್ಲಿವರೆಗೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ. ಆ ಮೂಲಕ ನಗರ ಪ್ರದೇಶದ ಬಡವರಿಗೆ ಸ್ವಂತ ಸೂರು ಅಥವಾ ಮನೆ ಸೌಲಭ್ಯ ಒದಗಿಸುವ ಈ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಿರಾಸಕ್ತಿ ವಹಿಸಿರುವುದು ಪತ್ತೆಯಾಗಿದೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಕೇಂದ್ರ ವಸತಿ ಸಚಿವ ತೋಖಾನ್ ಸಾಹು ನೀಡಿರುವ ಉತ್ತರದಲ್ಲಿ ಈ ವಿಚಾರ ಬಯಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶವ್ಯಾಪಿಯಾಗಿ ನಗರ ಪ್ರದೇಶದಲ್ಲಿ ನೆಲೆಸಿರುವ ವಸತಿ ರಹಿತರು, ಕಡು ಬಡವರು, ಮಧ್ಯಮ ವರ್ಗದ ಬಡ ಕುಟುಂಬಗಳಿಗೆ ಯೋಗ್ಯ ವಸತಿ ಒದಗಿಸುವ ಉದ್ದೇಶದಿಂದ ಕಳೆದ ಸೆಪ್ಟಂಬರ್ 1ರಿಂದ ಪಿಎಂಎವೈ-ಯು 2.0 ಯೋಜನೆ ಅನುಷ್ಠಾನಕ್ಕೆ ತಂದಿದೆ. ಈ ಪಿಎಂಎವೈ-ಯು 2.0 ಯೋಜನೆ ಜಾರಿ ಮಾರ್ಗಸೂಚಿ, ನಿಯಮಾವಳಿ ಪ್ರಕಾರ ಇಲ್ಲಿವರೆಗೆ ಕೇಂದ್ರಾಡಳಿತ ಪ್ರದೇಶ ಒಳಗೊಂಡಂತೆ 29 ರಾಜ್ಯಗಳು ಕೇಂದ್ರದ ಜತೆಗೆ ಒಪ್ಪಂದ ಮಾಡಿಕೊಂಡಿದೆ. ಆದರೆ, ಸಿದ್ದರಾಮಯ್ಯ ಸರ್ಕಾರ ಮಾತ್ರ ಇಲ್ಲಿವರೆಗೂ ನಗರ ಪ್ರದೇಶದ ಬಡವರಿಗೆ ವಸತಿ ಒದಗಿಸುವ ಈ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನಕ್ಕೆ ಒಪ್ಪಂದ ಮಾಡಿಕೊಂಡಿಲ್ಲ ಎಂದು ಕೇಂದ್ರ ವಸತಿ ಸಚಿವ ತೋಖಾನ್ ಸಾಹು ತಿಳಿಸಿದ್ದಾರೆ.
ಪಿಎಂಎವೈ-ಯು 2.0 ಯೋಜನೆಯಡಿ ನಗರ ಪ್ರದೇಶದಲ್ಲಿನ ಅರ್ಹ ಫಲಾನುಭವಿಗಳು ಕೈಗೆಟಕುವ ದರದಲ್ಲಿ ಮನೆ ನಿರ್ಮಾಣ, ಖರೀದಿ ಅಥವಾ ಬಾಡಿಗೆ ಪಡೆದುಕೊಳ್ಳುವ ವ್ಯವಸ್ಥೆಯಿದೆ. ಫಲಾನುಭವಿಗಳಿಂದ ಮನೆ ನಿರ್ಮಾಣ(ಬಿಎಲ್ಸಿ), ಕೈಗೆಟಕುವ ಮನೆಗಳ ಪಾಲುದಾರಿಕೆ ವ್ಯವಸ್ಥೆ(ಎಎಚ್ಪಿ), ಕೈಗೆಟಕುವ ದರದ ಬಾಡಿಗೆ ಮನೆ ವ್ಯವಸ್ಥೆ(ಎಆರ್ಎಚ್), ಬಡ್ಡಿ ಸಬ್ಸಿಡಿ ಸ್ಕೀಮ್(ಐಎಸ್ಎಸ್) ವ್ಯವಸ್ಥೆ ಎಂಬ ನಾಲ್ಕು ವಿಭಾಗದಡಿ ಈ ಪಿಎಂಎವೈ-ಯು 2.0 ಯೋಜನೆ ಪ್ರಯೋಜನ ಪಡೆದುಕೊಳ್ಳಬಹುದೆಂದು ವಸತಿ ಸಚಿವರು ವಿವರಿಸಿದ್ದಾರೆ.
ಪಿಎಂಎವೈ-ಯು 2.0 ಯೋಜನೆ ಅಂದರೆ ಏನು?
ಪ್ರಧಾನಮಂತ್ರಿ ಆವಾಸ್ ಯೋಜನೆ- ನಗರ 2.0 ಯೋಜನೆಯ ಮೂಲಕ ಕೇಂದ್ರ ಸರ್ಕಾರವು ಮುಂದಿನ 5 ವರ್ಷಗಳಲ್ಲಿ ನಗರ ಪ್ರದೇಶದಲ್ಲಿ ಒಂದು ಕೋಟಿ ಮನೆಗಳನ್ನು ನಿರ್ಮಿಸುವ ಗುರಿ ಹೊಂದಿದೆ. ನಗರದ ಬಡ ಮತ್ತು ಮಧ್ಯಮ ವರ್ಗದ ಬಡ ಕುಟುಂಬಗಳಿಗೆ ಮನೆಯನ್ನು ನಿರ್ಮಿಸಲು, ಖರೀದಿಸಲು ಆರ್ಥಿಕ ನೆರವು ನೀಡಲಾಗುತ್ತದೆ.
ಪಿಎಂಎವೈ-ಯು 2.0 ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?
ಮನೆ ಇಲ್ಲದ ಆರ್ಥಿಕವಾಗಿ ದುರ್ಬಲ ವಿಭಾಗ (EWS)(ವಾರ್ಷಿಕ ಆದಾಯ 3 ಲಕ್ಷ ರೂ.), ಕಡಿಮೆ ಆದಾಯದ ಗುಂಪು (LIG) ( 3 ಲಕ್ಷದಿಂದ 6 ಲಕ್ಷ ರೂ. ವರೆಗೆ ವಾರ್ಷಿಕ ಆದಾಯ) ಅಥವಾ ಮಧ್ಯಮ ಆದಾಯ ಗುಂಪು (MIG)(ವಾರ್ಷಿಕ ಆದಾಯ 6 ಲಕ್ಷದಿಂದ 9 ಲಕ್ಷ ರೂ.) ವಿಭಾಗಗಳಿಗೆ ಸೇರಿದ ಕುಟುಂಬಗಳು ಮನೆ ಖರೀದಿಸಲು ಅಥವಾ ನಿರ್ಮಿಸಲು ಅರ್ಹರಾಗಿರುತ್ತಾರೆ.
ವಿಧವೆಯರು, ಒಂಟಿ ಮಹಿಳೆಯರು, ದಿವ್ಯಾಂಗರು, ಹಿರಿಯ ನಾಗರಿಕರು, ಟ್ರಾನ್ಸ್ಜೆಂಡರ್ಗಳು, SC/ST, ಅಲ್ಪಸಂಖ್ಯಾತರು ಮತ್ತು ಸಮಾಜದಲ್ಲಿ ಹಿಂದುಳಿದ ಮತ್ತು ದುರ್ಬಲ ವರ್ಗಗಳಿಗೆ ಆದ್ಯತೆ ನೀಡಲಾಗುತ್ತದೆ. ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ ಗುರುತಿಸಲಾದ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ವಿವಿಧ ಕುಶಲಕರ್ಮಿಗಳು, ಸ್ವಚ್ಛತಾ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು , ಕೊಳಗೇರಿ ನಿವಾಸಿಗಳಿಗೆ ಪ್ರಾಮುಖ್ಯತೆ ನೀಡಲಾಗುವುದು ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.
The PMAY schemes have been neglected, as Siddaramaiah criticizes MP Brijesh Chowta in Mangalore. In response, Union Minister of State for Housing and Urban Affairs, Government of India, Tokhan Sahu has addressed the issue in a letter.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am