ಬ್ರೇಕಿಂಗ್ ನ್ಯೂಸ್
12-12-24 02:00 pm Mangalore Correspondent ಕರಾವಳಿ
ಮಂಗಳೂರು, ಡಿ.12: ಮಂಗಳೂರು ನಗರ ಭಾಗದಲ್ಲಿ ಕಾರ್ಯ ನಿರ್ವಹಿಸುವ ರೈಲ್ವೇ ಲೈನ್‌ಗಳು ಪ್ರಸ್ತುತ ದಕ್ಷಿಣ ರೈಲ್ವೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಇದರ ಬದಲಿಗೆ ಈ ರೈಲ್ವೆ ಲೈನ್‌ಗಳನ್ನು ನೈರುತ್ಯ ರೈಲ್ವೆ ಅಡಿಯಲ್ಲಿ ಬರುವಂತೆ ಮಾಡಿ ಈ ಭಾಗದ ರೈಲ್ವೇ ಅಭಿವೃದ್ಧಿಗೆ ಆದ್ಯತೆ ನೀಡಬೇಕೆಂಬ ಪ್ರಸ್ತಾವನೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂಸತ್ತಿನಲ್ಲಿ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಮುಂದಿಟ್ಟಿದ್ದಾರೆ.
ಸಂಸತ್‌ನ ಚಳಿಗಾಲದ ಅಧಿವೇಶದಲ್ಲಿ ಬುಧವಾರ ಪ್ರಶ್ನೋತ್ತರ ವೇಳೆಯಲ್ಲಿ ಕ್ಯಾ. ಚೌಟ ಅವರು, ಕರಾವಳಿ ಸೇರಿದಂತೆ ಮಂಗಳೂರು -ಬೆಂಗಳೂರು ರೈಲ್ವೇ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ದಕ್ಷಿಣ ರೈಲ್ವೆ ವಿಭಾಗದಲ್ಲಿರುವ ಮಂಗಳೂರು ನಗರ ಭಾಗದ ರೈಲ್ವೇ ಲೈನ್‌ಗಳನ್ನು ನೈಋತ್ಯ ರೈಲ್ವೆ ವ್ಯಾಪ್ತಿಗೆ ತರುವ ಪ್ರಸ್ತಾಪ ರೈಲ್ವೆ ಇಲಾಖೆ ಬಳಿ ಇದೆಯೇ? ಇದಕ್ಕೆ ಯಾವ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಸಚಿವರ ಗಮನಕ್ಕೆ ತಂದಿದ್ದೇನೆ ಎಂದು ಸಂಸತ್ತಿನಲ್ಲಿ ರೈಲ್ವೇ ಸಚಿವರ ಗಮನಸೆಳೆದಿದ್ದಾರೆ.
ಮಂಗಳೂರು -ಬೆಂಗಳೂರು ಅತ್ಯಂತ ಪ್ರಮುಖ ರೈಲ್ವೇ ಸಂಪರ್ಕವಾಗಿದ್ದು, ಶಿರಾಡಿ ಘಾಟಿಯಲ್ಲಿ ಹಳಿ ವಿಸ್ತರಣೆಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಅಧ್ಯಯನ ವರದಿ ಯಾವ ಹಂತದಲ್ಲಿದೆ. ಶಿರಾಡಿ ಘಾಟಿಯಲ್ಲಿ ಹೊಸ ಹಳಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಧ್ಯಯನ ವರದಿ ಪ್ರಗತಿ ಯಾವ ಹಂತ ತಲುಪಿದೆ. ಜತೆಗೆ ಮಂಗಳೂರು ಸೆಂಟ್ರಲ್ ಹಾಗೂ ಮಂಗಳೂರು ಜಂಕ್ಷನ್ ವ್ಯಾಪ್ತಿಯು ದಕ್ಷಿಣ ರೈಲ್ವೆಗೆ ಸೇರಿದ್ದು, ಉಳಿದ ಬಹುತೇಕ ಮಂಗಳೂರು- ಬೆಂಗಳೂರು ರೈಲ್ವೇ ವ್ಯಾಪ್ತಿ ನೈಋತ್ಯ ವಲಯ ವ್ಯಾಪ್ತಿಯಲ್ಲಿದೆ. ಆದರೆ, ಕರಾವಳಿಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಈ ಮಾರ್ಗ ಒಂದೇ ವಲಯದ ವ್ಯಾಪ್ತಿಗೆ ಬಂದರೆ ಅಭಿವೃದ್ಧಿ ದೃಷ್ಟಿಯಿಂದ ಹಾಗೂ ಆಡಳಿತಾತ್ಮಕವಾಗಿ ಹೆಚ್ಚಿನ ಅನುಕೂಲವಾಗಲಿದೆ. ಹೀಗಾಗಿ, ಮಂಗಳೂರು ನಗರ ಭಾಗದ ರೈಲ್ವೆ ಲೈನ್‌ಗಳನ್ನು ನೈಋತ್ಯ ವಲಯಕ್ಕೆ ಸೇರಿಸುವಲ್ಲಿ ಸಚಿವಾಲಯ ಕ್ರಮ ಕೈಗೊಂಡಿದೆಯೇ ಎಂದು ಸಂಸದ ಚೌಟ ಸದನದಲ್ಲಿ ಪ್ರಸ್ತಾಪಿಸಿದ್ದಾರೆ.
ಇದಕ್ಕೆ ಉತ್ತರಿಸಿರುವ ರೈಲ್ವೇ ಸಚಿವ ಅಶ್ವಿನ್ ವೈಷ್ಣವ್, ಮಂಗಳೂರು- ಬೆಂಗಳೂರು ರೈಲ್ವೇ ಮಾರ್ಗದ ನಿರ್ಮಾಣವನ್ನು ರಾಜ್ಯ ಸರ್ಕಾರ ಹಾಗೂ ರೈಲ್ವೇ ಸಚಿವಾಲಯದ ಜಂಟಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಆದರೆ, ಈ ಸಹಭಾಗಿತ್ವದಲ್ಲಿ ರಾಜ್ಯ ಸರ್ಕಾರದ ಪಾಲು ಬರಬೇಕಿದೆ. ಹೀಗಿರುವಾಗ, ರಾಜ್ಯ ಸರ್ಕಾರದ ಅನುದಾನದ ಪಾಲು ಬಂದರೆ ಈ ಮಾರ್ಗದ ಮುಂದಿನ ಹಂತದ ಅಭಿವೃದ್ಧಿ ಕಾಮಗಾರಿಗಳನ್ನು ಮುಂದುವರಿಸುವುದಕ್ಕೆ ಸಾಧ್ಯವಾಗಲಿದೆ. ಆದರೆ, ಇಂದಿನ ಪ್ರಶ್ನೋತ್ತರ ಕಲಾಪ ಮುಕ್ತಾಯಗೊಂಡಿರುವ ಕಾರಣ ಸಂಸದರು ಪ್ರಸ್ತಾಪಿಸಿರುವ ಮಂಗಳೂರನ್ನು ನೈಋತ್ಯ ವಲಯಕ್ಕೆ ಸೇರಿಸುವುದು ಸೇರಿದಂತೆ ಉಳಿದ ವಿಚಾರಗಳ ಬಗ್ಗೆ ವಿವರವಾದ ಉತ್ತರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ 01.04.2024ರ ವರೆಗಿನ ಮಾಹಿತಿಯಂತೆ, ಒಟ್ಟು 3,840 ಕಿಮೀ ಉದ್ದದ 31 ಯೋಜನೆಗಳು (21 ಹೊಸ ಮಾರ್ಗಗಳು ಮತ್ತು 10 ದ್ವಿಗುಣಗೊಳಿಸುವಿಕೆ ಸೇರಿ ₹ 47,016 ಕೋಟಿ ವೆಚ್ಚ) ರಾಜ್ಯದಲ್ಲಿ ವಿವಿಧ ಕಡೆ ಅನುಷ್ಠಾನದ ಹಂತದಲ್ಲಿದೆ. ಅದರಲ್ಲಿ 1,302 ಕಿಮೀ ಉದ್ದವನ್ನು ಕಾರ್ಯಾರಂಭ ಮಾಡಲಾಗಿದೆ ಮತ್ತು ಮಾರ್ಚ್ 2024 ರವರೆಗೆ ₹ 17,383 ಕೋಟಿ ವೆಚ್ಚ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಜತೆಗೆ ಕ್ಯಾ. ಚೌಟ ಅವರು ಮಂಗಳೂರು- ಬೆಂಗಳೂರು ಮಾರ್ಗದ ರೈಲು ಸಂಪರ್ಕ ಹೆಚ್ಚಿಸುವ ನಿಟ್ಟಿನಲ್ಲಿ ಏನೆಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಬಗ್ಗೆ ವಿಸ್ತೃತವಾದ ಪ್ರಶ್ನೆಯನ್ನು ಕೂಡ ಕೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ರೈಲ್ವೆ ಸಚಿವರು, ಮಂಗಳೂರು- ಬೆಂಗಳೂರು ರೈಲು ಮಾರ್ಗವು ಮಂಗಳೂರಿನ ಬಂದರಿಗೆ ಸಂಪರ್ಕಿಸುವಲ್ಲಿ ಹಾಗೂ ಕರಾವಳಿಯ ಪ್ರವಾಸೋದ್ಯಮದ ಅಭಿವೃದ್ಧಿ ದೃಷ್ಟಿಯಿಂದ ಅತ್ಯಂತ ಮಹತ್ವದ ರೈಲು ಮಾರ್ಗವಾಗಿದೆ. ಆದರೆ, ಎಸ್‌ವಿಪಿ ಆರ್ಥಿಕ ದುಸ್ಥಿತಿಯಿಂದಾಗಿ ಈ ಮಾರ್ಗವನ್ನು ಸಾಧ್ಯವಾದಷ್ಟು ಸ್ವಾಧೀನಪಡಿಸಿಕೊಳ್ಳಲು ರೈಲ್ವೇ ಇಲಾಖೆ ಮುಂದಾಗಿದೆ. ಆ ಮೂಲಕ ರೈಲ್ವೆ ಹಳಿ ದ್ವಿಗುಣೀಕರಣ, ವಿದ್ಯುದ್ದೀಕರಣ ಮುಂತಾದ ಬಲವರ್ಧನೆ ಕಾರ್ಯಗಳನ್ನು ಕೈಗೆತ್ತಿಕೊಳ್ಳಬಹುದು.
ಬೆಂಗಳೂರು- ಮಂಗಳೂರು ಹಳಿ ದ್ವಿಗುಣೀಕರಣಕ್ಕೆ ಮಂಜೂರಾತಿ
ಇದಲ್ಲದೆ, ಬೆಂಗಳೂರು ಮತ್ತು ತುಮಕೂರು ನಡುವಿನ 3 ಮತ್ತು 4ನೇ ಹಳಿಯ ಸಮೀಕ್ಷೆ ಕೂಡ ಮಂಜೂರಾಗಿದೆ. ಆದರೆ, ರಾಜ್ಯ ಸರ್ಕಾರದ ಪಾಲು ಬರದ ಕಾರಣ ಈ ಮಾರ್ಗದ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆಯಾಗಿದೆ ಎಂದು ರೈಲ್ವೆ ಸಚಿವರು ತಿಳಿಸಿದ್ದಾರೆ. ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಬದಲಾವಣೆ ತರಬಲ್ಲ ಈ ಪ್ರಮುಖವಾದ ಯೋಜನೆಯನ್ನು ಜಾರಿಗೆ ತರಲು ರಾಜ್ಯ ಸರಕಾರದ ಜೊತೆ ಚರ್ಚೆಗಳನ್ನು ನಡೆಸಲಾಗುವುದು ಎಂದು ಕ್ಯಾ. ಚೌಟ ಟ್ವೀಟ್ ಮಾಡಿದ್ದಾರೆ.
“ನಾನು ಕ್ಯಾಪ್ಟನ್ ಬ್ರಿಜೇಶ್ ಚೌಟ ಲೋಕಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ದೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದೂ, ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದೂ ಮತ್ತು ನಾನು ಈಗ ವಹಿಸಿಕೊಳ್ಳಲಿರುವ ಕರ್ತವ್ಯವನ್ನು… pic.twitter.com/cpKuuuvOvs
— Captain Brijesh Chowta ಕ್ಯಾಪ್ಟನ್ ಬ್ರಿಜೇಶ್ ಚೌಟ (@CaptBrijesh) June 24, 2024
Dakshina Kannada MP Captain Brijesh Chowta has raised the issue of bringing Mangaluru Central and Mangaluru Junction railway stations under the South Western Railway (SWR) zone for better administration during the question hour in Parliament on Wednesday.
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
05-02-25 07:32 pm
Mangalore Correspondent
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
U T Khader, Mangalore: ವಿಧಾನಸೌಧಕ್ಕೆ ನಾಯಿ ಕಾಟ...
03-02-25 07:38 pm
Mangalore coast Gaurd, NMPT: ತಿಳಿನೀಲ ಸಮುದ್ರದಲ...
02-02-25 09:49 pm
05-02-25 04:29 pm
Bangalore Correspondent
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am