ಬ್ರೇಕಿಂಗ್ ನ್ಯೂಸ್
16-12-24 11:55 am Mangalore Correspondent ಕರಾವಳಿ
ಉಳ್ಳಾಲ, ಡಿ.16: ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಂಡು ಸಮುದ್ರ ಸ್ನಾನಕ್ಕಿಳಿದಿದ್ದ ಮಹಿಳೆಯೊಬ್ಬರು ಸಮುದ್ರ ಪಾಲಾಗಿ ಸಾವನ್ನಪ್ಪಿದ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ದೇರೆಬೈಲ್ ನ ದಿವಂಗತ ಜಗದೀಶ್ ಭಂಡಾರಿ ಅವರ ಪತ್ನಿ ಉಷಾ (72) ಮೃತ ಮಹಿಳೆ. ಉಷಾ ಅವರ ತಂಗಿ ನಿಶಾ ಭಂಡಾರಿ ಅವರ ಗಂಡ ಕರುಣಾಕರ ಭಂಡಾರಿ ಇತ್ತೀಚಿಗೆ ನಿಧನರಾಗಿದ್ದು ಇಂದು ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಸಂಬಂಧಿಕರ ಜೊತೆಗೆ ಸೋಮೇಶ್ವರಕ್ಕೆ ಆಗಮಿಸಿದ್ದರು. ಪುರೋಹಿತರು ಸಮುದ್ರ ತೀರದಲ್ಲಿ ಪಿಂಡಪ್ರದಾನ ನೆರವೇರಿಸಿದ ಬಳಿಕ ಉಷಾ ಅವರು ಸಮುದ್ರ ಸ್ನಾನ ಮಾಡಲು ತೆರಳಿದ್ದು ಕಾಲು ಜಾರಿ ಸಂಬಂಧಿಗಳು ನೋಡುತ್ತಿದ್ದಂತೆಯೇ ಸಮುದ್ರ ಪಾಲಾಗಿದ್ದಾರೆ.
ಸ್ಥಳೀಯರು ಮತ್ತು ನಾಡದೋಣಿಗರು ಸಮುದ್ರಕ್ಕೆ ಧುಮುಕಿ ಉಷಾ ಅವರನ್ನ ತೀರಕ್ಕೆ ಎಳೆದಿದ್ದು,ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದಾರೆ. ಮೃತದೇಹವನ್ನು
ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ರವಾನಿಸಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಾಸಿದ್ದಾರೆ.
ಉಷಾ ಅವರು ಎನ್ಎಮ್ ಪಿಟಿಯಲ್ಲಿ ನಲ್ವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿ ಅಸಿಸ್ಟೆಂಟ್ ಸೆಕ್ರೆಟರಿ ಆಗಿ ನಿವೃತ್ತರಾಗಿದ್ದರು. ಅವರು ಪುತ್ರಿಯನ್ನ ಅಗಲಿದ್ದಾರೆ.
ಶಾಶ್ವತ ಜೀವರಕ್ಷಕ ಸಿಬ್ಬಂದಿಗಳಿಲ್ಲ ;
ಸೋಮೇಶ್ವರ ಕಡಲ ತೀರಕ್ಕೆ ನಿತ್ಯವೂ ಪ್ರವಾಸಿಗರು ಭೇಟಿ ಕೊಡುತ್ತಾರೆ. ಹಾಗಿದ್ದರೂ ಪ್ರವಾಸೋದ್ಯಮ ಇಲಾಖೆಯು ಇಲ್ಲಿ ಶಾಶ್ವತ ಜೀವರಕ್ಷಕ ಸಿಬ್ಬಂದಿಯನ್ನ ನಿಯೋಜಿಸಿಲ್ಲ. ಕರಾವಳಿ ಕಾವಲು ಪಡೆಯ ಅರೆಕಾಲಿಕ ಜೀವರಕ್ಷಕ ಸಿಬ್ಬಂದಿಗಳು ಸೋಮೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಅನೇಕರ ಪ್ರಾಣ ರಕ್ಷಿಸಿದ್ದಾರೆ. ಶಾಶ್ವತವಾಗಿ ಇಲ್ಲಿ ಜೀವರಕ್ಷಕ ಸಿಬ್ಬಂದಿಗಳನ್ನ ನೇಮಿಸಿದಲ್ಲಿ ಸಮದ್ರ ತೀರದಲ್ಲಿ ನಡೆಯುವ ಪ್ರಾಣಹಾನಿಗಳನ್ನ ತಪ್ಪಿಸಬಹುದಾಗಿದೆ.
Mangalore Someshwara 72 year old women drowned in sea while performing Pinda pradana. The deceased has been identified as Usha from Derebail.
22-07-25 03:02 pm
HK News Desk
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 01:27 pm
Mangalore Correspondent
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
High Drama in Dharmasthala, Fake Godman Remar...
21-07-25 06:42 pm
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
22-07-25 12:38 pm
HK News Desk
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm