ಬ್ರೇಕಿಂಗ್ ನ್ಯೂಸ್
20-12-24 04:06 pm Mangalore Correspondent ಕರಾವಳಿ
ಮಂಗಳೂರು, ಡಿ.20 : ಮೂಲಗೇಣಿ ಆಸ್ತಿ ಲೀಸಿಗೆ ಪಡೆದ ಭೂಮಿಯನ್ನು ಯಾರೂ ತಮ್ಮ ಸ್ವಂತಕ್ಕೆ ಮಾಡಲು ಅವಕಾಶ ಇರುವುದಿಲ್ಲ. ಶಾಶ್ವತ ರೂಪದಲ್ಲಿ ನೀಡಲ್ಪಡುವ ಗುತ್ತಿಗೆ ಎಂದಾಗಿರುತ್ತದೆ. ಆದರೆ ಮಂಗಳೂರು ಬಂದರಿನ ಕಸಬಾ ಬಜಾರ್ ಸರ್ವೆ ನಂಬರ್ 1448-439/11-8 ಮತ್ತು 1449440/11-8 ಯಲ್ಲಿರುವ ಶ್ರೀ ಮಹಾಲಸಾ ನಾರಾಯಣೀ ಲಕ್ಷ್ಮೀ ವೆಂಕಟೇಶ ದೇವರಿಗೆ ಸೇರಿದ ಆಸ್ತಿಯನ್ನು ಖಾಸಗಿ ವ್ಯಕ್ತಿಗಳು ಪೋರ್ಜರಿ ದಾಖಲೆ ಸೃಷ್ಟಿಸಿ ಸ್ವಾಹಾ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಾಮೋದರ್ ಶೆಣೈ ಪಡುಬಿದ್ರಿ ಪತ್ರಿಕಾಗೋಷ್ಟಿಯಲ್ಲಿ ಆರೋಪಿಸಿದರು.
ಮಂಗಳೂರು ನಗರದ ಹೃದಯಭಾಗದಲ್ಲಿರುವ ಎಂಟು ಸೆಂಟ್ಸ್ ಆಸ್ತಿಯು ಕೋಟಿಗಟ್ಟಲೆ ಬೆಲೆಬಾಳುವಂಥದ್ದು. ಈ ಭೂಮಿಯನ್ನು 1932ರಲ್ಲಿ ಮಾರೂರು ಗಣಪತಿ ಅನಂತ ಪೈ ಅವರು ಮ್ಯಾನೇಜಿಂಗ್ ಟ್ರಸ್ಟಿಯಾಗಿರುವ ಶ್ರೀ ಮಹಾಲಸಾ ನಾರಾಯಣೀ ಲಕ್ಷ್ಮೀ ವೆಂಕಟೇಶ ದೇವರ ಭಂಡಾರಕ್ಕೆ ಶಾಶ್ವತ ಲೀಸಿಗೆ ಕೊಡಲಾಗಿತ್ತು. ಗಣಪತಿ ಪೈ ಅವರ ಕಾಲಾನಂತರ ಹಿರಿಯ ಮಗ ರಾಮದಾಸ ಪೈ ಅವರಿಗೆ ಭೂಮಿ ಸ್ವಾಧೀನಕ್ಕೆ ಬಂದಿತ್ತು. ಅನಂತರ, ಅವರ ಪುತ್ರ ಮಾರೂರು ಗಣಪತಿ ಪೈ(2)ಯವರಿಗೆ ಹಕ್ಕು ಬಂದಿತ್ತು. ಆದರೆ ಗಣಪತಿ ಪೈ(2)ಯವರ ಬಳಿಕ ಪತ್ನಿ ಗೀತಾ ಪೈ ಅಥವಾ ಮಕ್ಕಳಿಗೆ ನೀಡಲ್ಪಡುವ ಬದಲು ಅದನ್ನು ಮಂಗಳೂರಿನ ಹಿರಿಯ ವಕೀಲ ಕೆ.ಪಿ ವಾಸುದೇವ ರಾವ್ ಮತ್ತು ಕುಟುಂಬಕ್ಕೆ ಸೇರದ ಕೆಲವು ವ್ಯಕ್ತಿಗಳು ಸೇರಿಕೊಂಡು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ.
ಇದರಲ್ಲಿ ಕೋಟ್ಯಂತರ ರೂಪಾಯಿ ಕೈಬದಲಾಗಿದ್ದು, ಪೋರ್ಜರಿ ದಾಖಲೆಗಳನ್ನು ಸೃಷ್ಟಿಸಲಾಗಿದೆ. ದೇವರಿಗೆ ಸೇರಿದ ಆಸ್ತಿಯನ್ನು ವಕೀಲರ ನೇತೃತ್ವದಲ್ಲಿ
ಸ್ವಂತಕ್ಕೆ ಮಾಡಿಕೊಂಡಿದ್ದಾರೆ. ಸದ್ರಿ ಜಾಗದ ಆರ್ ಟಿಸಿ ದಾಖಲೆಯನ್ನು ಭೂಮಿ ತಂತ್ರಾಂಶದಲ್ಲಿ ಪರಿಶೀಲಿಸಿದ ಸಂದರ್ಭದಲ್ಲಿ ಶ್ರೀ ಮಹಾಲಸಾ ನಾರಾಯಣೀ ಲಕ್ಷ್ಮೀ ವೆಂಕಟೇಶ ದೇವರಿಗೆ ಸೇರಿದ ಎಂಬುದಾಗಿದ್ದ ಉಲ್ಲೇಖವನ್ನು ತೆಗೆದು ಹಾಕಿರುವುದು ಪತ್ತೆಯಾಗಿದೆ. ಆ ಜಾಗದಲ್ಲಿ ಕಮಲಾ ಪಡಿಯಾರ್, ವಿಮಲಾ ಶೆಣೈ, ಮಂಗಲ್ಪಾಡಿ ಸಂಧ್ಯಾ ಶೆಣೈ ಮತ್ತು ಮಂಗಲ್ಪಾಡಿ ವರದರಾಯ ಶೆಣೈ (ಉಪೇಂದ್ರ ಟ್ರೇಡಿಂಗ್ ಕಂಪೆನಿ, ಪೋರ್ಟ್ ರೋಡ್ ಮಂಗಳೂರು) ಎಂಬವರ ಹೆಸರನ್ನು ಅಕ್ರಮವಾಗಿ ಸೇರ್ಪಡೆ ಮಾಡಲಾಗಿದೆ.
ಇದೇ ದಾಖಲೆಯನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಕ್ಕೆ ನೀಡಲಾಗಿದೆ. ದೇವರ ಹೆಸರಿನಲ್ಲಿದ್ದ ಆಸ್ತಿಯನ್ನು ಖಾಸಗಿಯವರು ಅಕ್ರಮವಾಗಿ ಪರಭಾರೆ ಮಾಡಿಕೊಂಡಿರುವ ಬಗ್ಗೆ ಮಂಗಳೂರು ಲೋಕಾಯುಕ್ತಕ್ಕೆ ದೂರು ನೀಡಿದ್ದೇನೆ. ಮೊನ್ನೆ ಉಪ ಲೋಕಾಯುಕ್ತ ಜಸ್ಟಿಸ್ ವೀರಪ್ಪ ಅವರಲ್ಲೂ ದೂರು ನೀಡಿದ್ದು, ಪೊಲೀಸರಿಗೆ ದೂರು ನೀಡಲು ಸೂಚಿಸಿದ್ದರು. ಅದರಂತೆ, ಡಿ.1ರಂದು ಬಂದರು ಠಾಣೆಗೆ ದಾಖಲೆ ಸಹಿತ ದೂರು ನೀಡಿದ್ದರೂ, ಆರೋಪಿತರ ವಿರುದ್ಧ ಇಷ್ಟರ ವರೆಗೆ ಎಫ್‌ಐಆರ್ ದಾಖಲು ಮಾಡಿಲ್ಲ. ದೇವರ ಆಸ್ತಿಯನ್ನು ನುಂಗಿ ಹಾಕಿದವರ ಮೇಲೆ ಕ್ರಮ ಜರುಗಿಸಬೇಕೆಂದು ಈ ಮೂಲಕ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಒತ್ತಾಯಿಸುತ್ತಿದ್ದೇನೆ ಎಂದು ದಾಮೋದರ ಶೆಣೈ ಹೇಳಿದರು.
ಮಾರೂರು ಗಣಪತಿ ಪೈ(2) ಅವರ ಪತ್ನಿ ಗೀತಾ ಜಿ. ಪೈಯವರು ಇಳಿ ವಯಸ್ಸಿನಲ್ಲಿದ್ದು(72 ವರ್ಷ) ಬೆಂಗಳೂರಿನಲ್ಲಿ ವಾಸವಿದ್ದಾರೆ.ಈ ಜಾಗದ ಬಗ್ಗೆ ದಾವೆ ಹೂಡುವುದು ಸೇರಿದಂತೆ ಸಂಬಂಧಪಟ್ಟ ವ್ಯವಹಾರ ನೋಡಿಕೊಳ್ಳಲು ನನಗೆ ಪವರ್ ಆಫ್ ಅಟಾರ್ನಿ ಕೊಟ್ಟಿದ್ದಾರೆ. ಹಾಗಾಗಿ, ಪೊಲೀಸರಿಗೆ ದೂರು ಕೊಟ್ಟಿದ್ದು, ಪೋರ್ಜರಿ ದಾಖಲೆ ಸೃಷ್ಟಿಸಿ ದೇವರ ಆಸ್ತಿಯನ್ನು ಅಕ್ರಮವಾಗಿ ಸ್ವಂತಕ್ಕೆ ಮಾಡಿಕೊಂಡಿರುವ ಬಗ್ಗೆ ಕ್ರಮ ಜರುಗಿಸಲು ಒತ್ತಾಯಿಸುತ್ತೇನೆ ಎಂದರು. ಅಲ್ಲದೆ, ಮಂಗಳೂರಿನಲ್ಲಿ ಕೆಲವು ವಕೀಲರು ಮತ್ತು ಪ್ರಭಾವಿಗಳು ಸೇರಿ ಹಲವಾರು ಕಡೆ ಅಕ್ರಮವಾಗಿ ಆಸ್ತಿಗಳನ್ನು ಕಬಳಿಸಿದ್ದಾರೆ. ಇದರ ಬಗ್ಗೆ ಪ್ರಶ್ನೆ ಮಾಡಿದರೂ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಕಳೆದ ವರ್ಷ ಬೇಕಾದಷ್ಟು ಆಸ್ತಿಯಿದ್ದ ಮುಂಡ್ಕೂರು ರಾಮದಾಸ ಕಾಮತ್ ಸಾವು ಹೇಗಾಯ್ತು. ಅದರ ಹಿಂದೆ ಏನೆಲ್ಲಾ ನಡೆದಿದೆ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆಯೇ.. ಅವರು ಕೇಸ್ ಕ್ಲೋಸ್ ಮಾಡಿಲ್ಲವೇ ಎಂದು ಪ್ರಶ್ನಿಸಿದರು. ಮಾರೂರು ಗಣಪತಿ ಪೈ ಆಸ್ತಿ ವಿಚಾರದಲ್ಲಿ ಸಂಬಂಧಿತರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಹಾಗಾಗಿ, ಸಂಬಂಧಪಟ್ಟವರು ದೂರ ನಿಲ್ಲುವಂತಾಗಿದೆ ಎಂದರು.
"RTI activist Dhamodhar Shenoy alleges that 8 cents of Temple property documents were forged, leading to the looting of crores of rupees, during a press meet with media persons here in Mangalore."
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am