Praveen Nettaru Murder, NIA Arrest: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿ ದೆಹಲಿ ಏರ್ಪೋರ್ಟ್ ನಲ್ಲಿ ಅರೆಸ್ಟ್

21-12-24 11:30 am       Mangalore Correspondent   ಕರಾವಳಿ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ನಿಷೇಧಿತ PFI ಸಂಘಟನೆಯ ರಾಜ್ಯ ಕಾರ್ಯಕಾರಿ ಸದಸ್ಯನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ.

ಮಂಗಳೂರು, ಡಿ.21: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ನಿಷೇಧಿತ PFI ಸಂಘಟನೆಯ ರಾಜ್ಯ ಕಾರ್ಯಕಾರಿ ಸದಸ್ಯನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ.

ಬಂಧಿತನನ್ನು ಬಂಟ್ವಾಳ ತಾಲೂಕಿನ ಕೊಡಾಜೆ ನಿವಾಸಿ ಮೊಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಈತನ ಬಂಧನಕ್ಕಾಗಿ ಲುಕೌಟ್ ನೋಟಿಸ್ ಹೊರಡಿಸಲಾಗಿತ್ತು. ಬಹ್ರೇನ್ ನಿಂದ ಬಂದಿಳಿದಾಗ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Banned outfit PFI leader arrested in BJP activist Praveen Nettaru murder  case

ಬಿಜೆಪಿ ಯುವಮೋರ್ಚಾ ಮುಖಂಡನಾಗಿದ್ದ ಪ್ರವೀಣ್ ನೆಟ್ಟಾರು ಅವರನ್ನು ಜುಲೈ 22, 2022 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ PFI ಸಂಘಟನೆಯ ಸದಸ್ಯರು ಹತ್ಯೆ ಮಾಡಿದ್ದರು. ಆಗಸ್ಟ್ 4, 2022 ರಂದು ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದ್ದ ರಾಷ್ಟ್ರೀಯ ತನಿಖಾ ದಳ ಇಲ್ಲಿಯ ವರೆಗೂ 20 ಮಂದಿಯನ್ನು ಬಂಧಿಸಿದೆ. ತಲೆಮರೆಸಿಕೊಂಡಿರುವ ಮೂವರು ಸೇರಿದಂತೆ 23 ಆರೋಪಿಗಳನ್ನು ಜಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ. 

ಬಂಧಿತ ಮೊಹಮ್ಮದ್ ಶರೀಫ್ ಕೂಡ PFI ಸಂಘಟನೆಯ ಸದಸ್ಯರಾಗಿದ್ದು, ಮಿತ್ತೂರಿನ ಪ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ ತಂಡದ ಸದಸ್ಯರಿಗೆ ಶಸಾಸ್ತ್ರ ತರಬೇತಿಯಲ್ಲಿ ಸಹ ಆರೋಪಿಗಳೊಂದಿಗೆ ಭಾಗಿಯಾಗಿದ್ದ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ NIA ಅಧಿಕಾರಿಗಳು ತಿಳಿಸಿದ್ದಾರೆ.

According to PTI report, Sherif was detained upon his arrival from Bahrain at Delhi’s Indira Gandhi International Airport. A lookout circular had been issued against him following evidence of his involvement in Nettaru’s killing.