ಬ್ರೇಕಿಂಗ್ ನ್ಯೂಸ್
24-12-24 01:31 pm Mangalore Correspondent ಕರಾವಳಿ
ಮಂಗಳೂರು, ಡಿ.24 : ಪ್ರತೀ ವರ್ಷ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಡಿ.25ರಂದು ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಬೆಂಗಳೂರಿನ ಅದಮ್ಯ ಚೇತನ ಫೌಂಡೇಶನ್ನಿನ ಅಧ್ಯಕ್ಷರು ಹಾಗು ಸಹ ಸಂಸ್ಥಾಪಕರೂ ಆಗಿರುವ ಡಾ. ತೇಜಸ್ವಿನಿ ಅನಂತಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ವರ್ಷ ಒಟ್ಟು 3,000 ಕುಟುಂಬಗಳಿಗೆ 6 ಕೋಟಿ ರೂಪಾಯಿಗೂ ಮಿಕ್ಕಿ ನೆರವನ್ನು ವಿತರಿಸಲಾಗುತ್ತಿದೆ. ಇದರಿಂದ ಸುಮಾರು ಹದಿನೈದು ಸಾವಿರ ಮಂದಿಗೆ ಪ್ರಯೋಜನವಾಗಲಿದೆ. ಫಲಾನುಭವಿಗಳ ಆಯ್ಕೆಯಲ್ಲಿ ಒಂದು ನಿಗದಿತ ಮಾನದಂಡವನ್ನು ಅನುಸರಿಸಲಾಗಿದೆ. ಅರ್ಜಿಗಳನ್ನು ಪರಿಶೀಲಿಸಿ, ಅವಶ್ಯ ಹಿಮ್ಮಾಹಿತಿಗಳನ್ನು ಪಡೆದು ಫಲಾನುಭವಿಗಳ ಆಯ್ಕೆ ಮಾಡಲಾಗಿದೆ. ಸಮಾಜದಲ್ಲಿ ಪರಿವರ್ತನೆ ತರಬಲ್ಲಂತಹ, ಸಾಮೂಹಿಕ ಹಿತದ ಕಾರ್ಯಕ್ರಮಗಳನ್ನು ಕೈಗೊಂಡ ಸಂಘ ಸಂಸ್ಥೆಗಳನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ ಎಂದು ಎಂ.ಆರ್.ಜಿ. ಗ್ರೂಪ್ ಚೇರ್ಮನ್ ಡಾ. ಕೆ.ಪ್ರಕಾಶ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಎಂ.ಆರ್.ಜಿ. ಗ್ರೂಪ್ ಆಡಳಿತ ನಿರ್ದೇಶಕರಾದ ಗೌರವ್ ಪಿ. ಶೆಟ್ಟಿ ಉಪಸ್ಥಿತರಿರಲಿದ್ದಾರೆ.
ಪ್ರತೀ ವರ್ಷದಂತೆ ಫಲಾನುಭವಿಗಳನ್ನು ಕರೆತರಲು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಸ್ವಯಂಸೇವಕರ ತಂಡಗಳಿವೆ. ನೆರವು ವಿತರಣೆ ನಡೆಯುವ ಸ್ಥಳದಲ್ಲಿ 25 ಕೌಂಟರ್ ಗಳನ್ನು ತೆರೆಯಲಾಗುತ್ತದೆ. ಈಗಾಗಲೇ ವಿತರಣೆ ಮಾಡಿರುವ ಟೋಕನ್ ಗಳನ್ನು ತೋರಿಸಿ ಕೌಂಟರ್ ಗಳಲ್ಲಿ ನೆರವಿನ ಚೆಕ್ ಪಡೆಯಬಹುದು. ಎಲ್ಲಿಯೂ ಅವ್ಯವಸ್ಥೆಗಳಿಗೆ ಆಸ್ಪದ ಇಲ್ಲದಂತೆ ನೋಡಿಕೊಳ್ಳಲಾಗುತ್ತದೆ. ಮಾನಸಿಕ ವಿಕಲತೆ, ಹುಟ್ಟಿನಿಂದ ಬರುವ ದೀರ್ಘ ಕಾಲೀನ ಚಿಕಿತ್ಸೆ ಅವಶ್ಯವಿರುವ ಕಾಯಿಲೆ ಪೀಡಿತರಿಗೆ, ಅಂಗವೈಕಲ್ಯ, ಕ್ಯಾನ್ಸರ್ ಮುಂತಾದ ಖಾಯಿಲೆಗಳಿಂದ ಬಾಧಿತರಾಗಿರುವವರಿಗೆ ಚಿಕಿತ್ಸೆಗಾಗಿ ಆದ್ಯತೆಯ ಮೇಲೆ ನೆರವು ನೀಡುವುದನ್ನು ಪರಿಗಣಿಸಲಾಗಿದೆ. ಶಿಕ್ಷಣ ಮುಂದುವರಿಸಲು ಕಷ್ಟ ಪಡುತ್ತಿರುವವರಿಗೆ, ಕ್ರೀಡಾ ಕ್ಷೇತ್ರದ ಸಾಧಕರಿಗೆ, ಉತ್ತಮ ಶೈಕ್ಷಣಿಕ ಸಾಧನೆ ಮಾಡಿದವರಿಗೆ ಉತ್ತೇಜನ ನೀಡುವುದಕ್ಕಾಗಿ ಅವರನ್ನು “ನೆರವು” ನೀಡಲು ಆಯ್ಕೆ ಮಾಡಲಾಗಿದೆ“ ಎಂದರು.
ಹಿಂದಿನ ವರ್ಷಗಳಲ್ಲಿ ಸಂಘ ಸಂಸ್ಥೆಗಳಿಗೆ ನೀಡಲಾದ ನೆರವು ಆಯಾ ಪರಿಸರದಲ್ಲಿ ಧನಾತ್ಮಕ ಪರಿಣಾಮ ಬೀರಿದೆ. ಸಾರ್ವಜನಿಕ ಆಸ್ತಿಗಳ ನಿರ್ಮಾಣ ಆಗಿದೆ. ಅವಕಾಶವಂಚಿತರು ’ನೆರವು’ ಪಡೆದುಕೊಂಡು ಸ್ವಾವಲಂಬಿಯಾದ ಉದಾಹರಣೆಗಳಿವೆ. ಸಾಮಾಜಿಕ ಜವಾಬ್ದಾರಿಯ ನೆಲೆಯಲ್ಲಿ ನಾವು ಕೈಗೊಂಡ ಈ ಸೇವಾ ರೂಪದ ಕಾರ್ಯಕ್ರಮ ಸಾರ್ವಜನಿಕ ಮನ್ನಣೆ ಪಡೆದಿರುವುದು ಆಯೋಜಕರಾದ ನಮಗೆ ಸಾರ್ಥಕ್ಯ ಭಾವನೆಯನ್ನು ಮೂಡಿಸಿದೆ. ಅನುಭೂತಿ ಮತ್ತು ಬದ್ಧತೆಯಿಂದ ಕೈಗೊಂಡ “ನೆರವು” ಕಾರ್ಯಕ್ರಮ ಅನುಷ್ಠಾನದಲ್ಲಿ ನಮ್ಮ ತಂಡ ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡಿದೆ. ಶಿಕ್ಷಣ ಉಪಕ್ರಮದಡಿ ನೆರವು ಪಡೆದವರಲ್ಲಿ ಕೆಲವರು ಈಗ ಉದ್ಯೋಗಸ್ಥರಾಗಿ, ತಾವು ಇತರರಿಗೆ ಸಹಾಯ ಮಾಡುವ ಸ್ಥಿತಿಗೆ ತಲುಪಿರುವುದು ಈ ಯೋಜನೆ ತಂದ ಮಾನವೀಯ ಬದಲಾವಣೆಯಾಗಿದೆ“ ಎಂದು ಹೇಳಿದರು.
ಮೊದಲ ವರ್ಷ ವಿತರಣೆ ಮಾಡಲಾದ ಮೊತ್ತ 1.25 ಕೋಟಿ ರೂಪಾಯಿ. ವರ್ಷದಿಂದ ವರ್ಷಕ್ಕೆ ಈ ಮೊತ್ತ ಏರುತ್ತಾ ಹೋಗಿದೆ. ಅರ್ಜಿಗಳ ಸಂಖ್ಯೆಯೂ ಹೆಚ್ಚುತ್ತಿದೆ, ಸಹಜವಾಗಿ ಮೊತ್ತವೂ ಹೆಚ್ಚಾಗಿದೆ. ಯೋಜನೆಯ ವ್ಯಾಪ್ತಿ ದಕ್ಷಿಣ ಕನ್ನಡ, ಉಡುಪಿ ಮತ್ತು ಗಡಿನಾಡು ಕಾಸರಗೋಡು ಜಿಲ್ಲೆಗಳಾಗಿದ್ದು (ಮಾನವೀಯ ನೆಲೆಯಲ್ಲಿ ಗಡಿಯನ್ನು ದಾಟಿಯೂ ನೆರವು ನೀಡಲಾಗಿದೆ) ಪ್ರತೀ ವ್ಯಕ್ತಿಗೆ ಅವರವರ ಅವಶ್ಯಕತೆಯನ್ನು ಪರಿಗಣಿಸಿ ಕನಿಷ್ಠ 10,000 ರೂ.ಗಳಿಂದ ಗರಿಷ್ಠ 1,00,000 ರೂ.ಗಳ ವರೆಗೆ ನೀಡಲಾಗಿದೆ. ಆರೋಗ್ಯ ರಕ್ಷಣೆ, ಚಿಕಿತ್ಸೆಗೆ ಆದ್ಯತೆ ನೀಡಲಾಗಿದೆ. ಸಂಘ ಸಂಸ್ಥೆಗಳಾದರೆ ಕನಿಷ್ಠ 1,00,000 ರೂ.ಗಳಿಂದ ಗರಿಷ್ಠ 10,00,000 ರೂ.ಗಳ ವರೆಗೆ ನೆರವು ನೀಡಲಾಗಿದೆ ಎಂದು ಪ್ರಕಾಶ್ ಶೆಟ್ಟಿ ಮಾಹಿತಿ ನೀಡಿದರು.
Under the initiative “Neravu,” philanthropist K. Prakash Shetty, chairman of MRG Group, will provide over Rs 6 crore in financial aid to 3,000 families for medical, educational, and other needs.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 12:51 pm
Mangalore Correspondent
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm