ಬ್ರೇಕಿಂಗ್ ನ್ಯೂಸ್
26-12-24 11:18 pm Mangalore Correspondent ಕರಾವಳಿ
ಉಳ್ಳಾಲ, ಡಿ.26: ಮಂಜನಾಡಿ ಗ್ರಾಮದ ಖಂಡಿಕ ಎಂಬಲ್ಲಿನ ಮನೆಯಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಸ್ಪೋಟಿಸಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ತಾಯಿ ಮತ್ತು ಮೂರು ಮಕ್ಕಳಲ್ಲಿ ಕೆಲವು ದಿನಗಳ ಹಿಂದಷ್ಟೆ ತಾಯಿ ಸಾವನ್ನಪ್ಪಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿದ್ದ ಹಿರಿಯ ಮಗಳು ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
ಸ್ಫೋಟದಿಂದ ಗಂಭೀರ ಗಾಯಗೊಂಡಿದ್ದ ಝುಲೈಕ ಮೆಅದಿಯಾ(15) ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಾವನ್ನಪ್ಪಿದ್ದಾಳೆ. ಝುಲೈಕ ಮೊಂಟೆಪದವು ಸರ್ಕಾರಿ ಶಾಲೆಯಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಳು. ಡಿಸೆಂಬರ್ 8 ರಂದು ಮಂಜನಾಡಿ ಗ್ರಾಮದ ಖಂಡಿಕ ನಿವಾಸಿ ಮುತ್ತಲಿಬ್ ಅವರ ಮನೆಯಲ್ಲಿ ತಡರಾತ್ರಿ ಗ್ಯಾಸ್ ಸಿಲಿಂಡರ್ ಸ್ಪೋಟ ಸಂಭವಿಸಿತ್ತು.
ಘಟನೆಯಲ್ಲಿ ಕೊಠಡಿಯಲ್ಲಿ ಮಲಗಿದ್ದ ಮುತ್ತಲಿಬ್ ಅವರ ಪತ್ನಿ ಖುಬ್ರಾ, ಮಕ್ಕಳಾದ ಝುಲೈಕ ಮೆಅದಿಯಾ, ಮಾಝಿಯಾ ಮತ್ತು ಮಾಯಿದಾ ಸುಟ್ಟು ಗಂಭೀರ ಗಾಯಗೊಂಡಿದ್ದು ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮುತ್ತಲಿಬ್ ಅವರ ಪತ್ನಿ ಖುಬ್ರಾ ಅವರು ಚಿಕಿತ್ಸೆ ಫಲಕಾರಿಯಾಗದೆ ಡಿ.13ರಂದು ಮೃತಪಟ್ಟಿದ್ದರು. ಇಂದು ಆಕೆಯ ಹಿರಿಯ ಮಗಳು ಝುಲೇಕ ಮೆಅದಿಯ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇನ್ನಿಬ್ಬರು ಮಕ್ಕಳಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.
Mangalore Gas cylinder blast in Manjanady Death toll rises to two as teenager dies. In a tragic development related to the gas cylinder explosion that occurred on December 8 at Khandige in Manjanady village, a critically injured teenage girl has succumbed to her injuries, raising the death toll to two.
27-12-24 11:24 am
Bangalore Correspondent
ಹೊಸ ವರ್ಷಕ್ಕೆ ಮತ್ತೆ ಜನರಿಗೆ ಗ್ಯಾರಂಟಿ ಶಾಕ್ ? ಲೀಟ...
26-12-24 11:39 pm
Bidar Contractor Suicide, Priyank Kharge: ಪ್ರ...
26-12-24 08:03 pm
ಹೆಚ್ಚು ಮೊಬೈಲ್ ನೋಡ್ಬೇಡ ಎಂದು ಬುದ್ಧಿ ಹೇಳಿದ್ದ ತಾಯ...
26-12-24 05:11 pm
Bangalore Case, Advocate Dhahina Bhanu, Fraud...
26-12-24 04:45 pm
27-12-24 10:38 am
Yatish Kumar, Headline Karnataka
Manmohan Singh Death; ಆರ್ಥಿಕ ಕ್ರಾಂತಿಯ ಹರಿಕಾರ...
27-12-24 10:15 am
Dr Manmohan Singh, passes away: ಮಾಜಿ ಪ್ರಧಾನಿ,...
26-12-24 11:15 pm
Ajay Bhalla, Arif Khan: ಗಲಭೆ ಪೀಡಿತ ಮಣಿಪುರಕ್ಕೆ...
25-12-24 04:21 pm
Mohan Bhagwat: ಮೋಹನ್ ಭಾಗವತ್ ಸಂಘವನ್ನು ನಡೆಸುತ್ತ...
24-12-24 09:17 pm
26-12-24 11:18 pm
Mangalore Correspondent
Mangalore Kambala 2024, MP Brijesh Chowta: ಡಿ...
26-12-24 09:39 pm
Anoop Poojary, Udupi: ಹವಾಲ್ದಾರ್ ಅನೂಪ್ ಪೂಜಾರಿ...
26-12-24 07:07 pm
Mangalore, Martyr Anoop Poojary, Mp Brijesh C...
26-12-24 11:57 am
DJ artist Sajanka, Mangalore, New Year Party:...
25-12-24 10:55 pm
26-12-24 07:41 pm
Bangalore Correspondent
Fake Gold Loan, Mangalore Samaja seva sahakar...
25-12-24 02:41 pm
ಸೈಬರ್ ವಂಚಕರ ನಕಲಿ ಷೇರು ಮಾರುಕಟ್ಟೆ ಜಾಲ ; ಕೇರಳದಲ್...
24-12-24 11:05 pm
Bangalore cyber fraud, Crime: ಬೆಂಗಳೂರಿನ ಸಾಫ್ಟ...
22-12-24 07:23 pm
Mangalore Police, Cyber Fraud: ಕಮಿಷನ್ ಆಸೆಗೆ ಬ...
22-12-24 04:44 pm