ಬ್ರೇಕಿಂಗ್ ನ್ಯೂಸ್
01-01-25 10:40 am Mangalore Correspondent ಕರಾವಳಿ
ಉಳ್ಳಾಲ, ಜ 01: ಸಮುದ್ರ ತೀರದ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಸ್ನೇಹಿತರಿಬ್ಬರು ಹರಟೆ ಹೊಡೆಯುತ್ತಿದ್ದು, ಈ ವೇಳೆ ಆಯತಪ್ಪಿ ಬಾವಿಯೊಳಗಡೆ ಬಿದ್ದ ಸ್ಥಳೀಯ ಮೀನುಗಾರರೋರ್ವರು ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ತಿಂಗಳ ಹಿಂದಷ್ಟೆ ಈಜು ಕೊಳದಲ್ಲಿ ಮೂವರು ಯುವತಿಯರು ಮುಳುಗಿ ಸಾವನ್ನಪ್ಪಿದ್ದ ಸೋಮೇಶ್ವರ ಉಚ್ಚಿಲದ ವಾಝ್ಕೊ ರೆಸಾರ್ಟ್ ಮುಂಭಾಗದಲ್ಲಿ ಮಂಗಳವಾರ ಮುಸ್ಸಂಜೆ ಹೊತ್ತಲ್ಲಿ ನಡೆದಿದೆ. ಉಚ್ಚಿಲ ವಾಝ್ಕೊ ರೆಸಾರ್ಟ್ ಬಳಿಯ ನಿವಾಸಿ ಶಶೀಂದ್ರ ಎಂ. ಉಚ್ಚಿಲ್ (74) ಸಾವನ್ನಪ್ಪಿದ ವ್ಯಕ್ತಿ.
ಶಶೀಂದ್ರ ಅವರು ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದು, ಇಂದು ಸಂಜೆ ಸ್ನೇಹಿತನೊಂದಿಗೆ ವಾಝ್ಕೋ ರೆಸಾರ್ಟ್ ಮುಂಭಾಗದ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಕುಳಿತು ಹರಟುತ್ತಿದ್ದರಂತೆ. ಈ ವೇಳೆ ಶಶೀಂದ್ರ ಅವರು ಆಯತಪ್ಪಿ ಬಾವಿಯೊಳಗೆ ಬಿದ್ದಿದ್ದಾರೆ. ನುರಿತ ಈಜುಗಾರರಾದ ಶಶೀಂದ್ರ ಅವರು ತಲೆಕೆಳಗಾಗಿ ಬಾವಿಗೆ ಬಿದ್ದಿದ್ದು, ಬಾವಿಯೊಳಗೆ ಕೇವಲ ಮೂರಡಿಯಷ್ಟು ನೀರಿದ್ದ ಪರಿಣಾಮ ತಲೆಗೆ ಗಂಭೀರ ಏಟು ತಗುಲಿ ಸಾವನ್ನಪ್ಪಿದ್ದಾರೆ. ಬಳಿಕ ಸ್ಥಳೀಯರೇ ಮೃತದೇಹವನ್ನ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.


ಶಶೀಂದ್ರ ಅವರಿಗೆ ಇಬ್ಬರು ಹೆಣ್ಮಕ್ಕಳಿದ್ದು ವಿವಾಹಿತರಾಗಿದ್ದಾರೆ. ಅವರ ಪತ್ನಿ ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆ ಸೇರಿದ್ದು ಬುಧವಾರ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸುವ ತಯಾರಿ ನಡೆದಿತ್ತು.
ಕಳೆದ ನವೆಂಬರ್ ತಿಂಗಳಲ್ಲಿ ವಾಝ್ಕೊ ರೆಸಾರ್ಟ್ ಗೆ ವೀಕೆಂಡ್ ಕಳೆಯಲು ಬಂದಿದ್ದ ಮೈಸೂರಿನ ಮೂವರು ಯುವತಿಯರು ಈಜು ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಇದೀಗ ಅದೇ ರೆಸಾರ್ಟ್ ಮುಂಭಾಗದಲ್ಲೇ ನುರಿತ ಈಜುಗಾರರೋರ್ವರು ಸಣ್ಣ ಬಾವಿಗೆ ಬಿದ್ದು ಸಾವನ್ನಪ್ಪಿದ್ದು ಸ್ಥಳೀಯರಲ್ಲಿ ಯುವತಿಯರ ಪ್ರೇತಾತ್ಮಗಳ ಬಗ್ಗೆ ಆತಂಕ ಮನೆ ಮಾಡುವಂತಾಗಿದೆ.
Uchila man slips falls into old well accidentally, dies on spot in Mangalore. The deceased has been identified as Shashindra.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 02:54 pm
HK News Staffer
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm