ಬ್ರೇಕಿಂಗ್ ನ್ಯೂಸ್
01-01-25 07:01 pm Mangalore Correspondent ಕರಾವಳಿ
ಉಳ್ಳಾಲ, ಜ.1: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕ, ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ (ರಿ.) ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ, ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಪಾವೂರು ಹರೇಕಳ ಇವರ ಸಂಯುಕ್ತ ಆಶ್ರಯದಲ್ಲಿ ಉಳ್ಳಾಲ ತಾಲೂಕಿನ ಪ್ರಥಮ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನವನ್ನು ಜನವರಿ 3 ರಂದು ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಮ್ಮೇಳನ ಅಧ್ಯಕ್ಷರಾಗಿ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಹರೇಕಳದ ಕುಮಾರಿ ಫಾತಿಮತ್ ರಫೀದ ಇವರನ್ನು ಆರಿಸಲಾಗಿದೆ ಎಂದು ಉಳ್ಳಾಲ ತಾಲೂಕು ಕಸಾಪ ಅಧ್ಯಕ್ಷ ಧನಂಜಯ ಕುಂಬ್ಳೆ ತಿಳಿಸಿದರು.
ತೊಕ್ಕೊಟ್ಟಿನ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿದರು. ಜನವರಿ 3 ರಂದು ಬೆಳಗ್ಗೆ 9.30ಕ್ಕೆ ಹರೇಕಳ ಗ್ರಾಮ ಪಂಚಾಯತ್ ಆವರಣದಿಂದ ಜಾನಪದ ದಿಬ್ಬಣ ಹೊರಡಲಿದ್ದು, ಹರೇಕಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಗುಲಾಬಿ ದಿಬ್ಬಣ ಉದ್ಘಾಟಿಸಲಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ದಿಬ್ಬಣದಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಪ್ರಧಾನ ಅಭ್ಯಾಗತರಾಗಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಮುಖ್ಯ ಅತಿಥಿಗಳಾಗಿ ಚಲನಚಿತ್ರ ನಟಿ ಸೌಜನ್ಯ ಹೆಗ್ಡೆ, ಮಂಗಳೂರು ದಕ್ಷಿಣ ವಲಯ ಶಿಕ್ಷಣಾಧಿಕಾರಿ ಹೆಚ್.ಆರ್.ಈಶ್ವರ್, ಕೆ.ಎನ್. ಆಳ್ವ, ಪ್ರೊ. ಭಾಸ್ಕರ್ ರೈ ಕುಕ್ಕುವಳ್ಳಿ, ಕಡೆಂಜ ಸೋಮಶೇಖರ್ ಚೌಟ, ಡಾ. ಧನಂಜಯ ಕುಂಬ್ಳೆ, ಚಂದ್ರಹಾಸ ಶೆಟ್ಟಿ ದೇರಳಕಟ್ಟೆ, ಸುರೇಶ್ ಅಸೈಗೋಳಿ, ಉಷಾಲತಾ, ಸಮ್ಮೇಳನ ಸಂಚಾಲಕ ತ್ಯಾಗಮ್ ಹರೇಕಳ ಮೊದಲಾದವರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಕಲೆ, ಸಾಹಿತ್ಯ, ಕ್ರೀಡೆ, ಯಕ್ಷಗಾನ, ಸಾಂಸ್ಕೃತಿಕ ಮುಂತಾದ ಕ್ಷೇತ್ರದಲ್ಲಿ ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುವುದು.
ಸಮ್ಮೇಳನದಲ್ಲಿ ತೋನ್ಸೆ ಪುಷ್ಕಳ ಕುಮಾರ್ ನೇತೃತ್ವದಲ್ಲಿ ವಿದ್ಯಾರ್ಥಿ ಕಾವ್ಯ ವಾಚನ, ಗೀತ ಗಾಯನ ಗೋಷ್ಠಿ, ಡಾ.ಭಾಸ್ಕರ್ ರೈ ಕುಕ್ಕುವಳ್ಳಿ ಅಧ್ಯಕ್ಷತೆಯಲ್ಲಿ ನಮ್ಮ ಅಬ್ಬಕ್ಕ ನಾನು ಕಂಡಂತೆ ಎಂಬ ಸಂವಾದ ಗೋಷ್ಠಿ ನಡೆಯಲಿದೆ. ಅಪರಾಹ್ನ ಶಿಕ್ಷಣ ಮತ್ತು ಮಾಧ್ಯಮ ಕುರಿತ ಚಿಂತನಾಗೋಷ್ಠಿ ನಡೆಯಲಿದ್ದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ ಹರೀಶ್ ರೈ, ಉಳ್ಳಾಲ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ್ ಎನ್ ಕೊಣಾಜೆ ಇವರೊಂದಿಗೆ ವಿದ್ಯಾರ್ಥಿಗಳು ಸಂವಾದ ನಡೆಸಲಿದ್ದಾರೆ.
ಸಂಜೆ 3 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಉಳ್ಳಾಲ ಕಸಾಪ ಅಧ್ಯಕ್ಷ ಡಾ.ಧನಂಜಯ ಕುಂಬ್ಳೆ ಸಮಾರೋಪ ಭಾಷಣ ಮಾಡಲಿದ್ದಾರೆ. ಅತಿಥಿಗಳಾಗಿ ರವೀಂದ್ರ ರೈ ಕಲ್ಲಿಮಾರ್, ವಿಜಯಲಕ್ಷ್ಮಿ ಪ್ರಸಾದ್ ರೈ ಕಲ್ಲಿಮಾರ್, ಅಬ್ದುಲ್ ಮಜೀದ್, ರಾಧಾಕೃಷ್ಣ ರೈ, ಧನಪಾಲ್ ಶೆಟ್ಟಿಗಾರ್ ಮೊದಲಾದವರು ಭಾಗವಹಿಸಲಿದ್ದಾರೆ. ಸಮ್ಮೇಳನದಲ್ಲಿ ಉಳ್ಳಾಲ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕವಿಗಳಾಗಿ, ಪ್ರಬಂಧ ಮಂಡಕರಾಗಿ ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ ಎಂದರು. ಪತ್ರಿಕಾಗೋಷ್ಟಿಯಲ್ಲಿ ಸಮ್ಮೇಳನದ ಸಂಚಾಲಕ, ಶಿಕ್ಷಕರಾದ ತ್ಯಾಗಂ ಹರೇಕಳ, ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ಉಳ್ಳಾಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯದರ್ಶಿ ರವೀಂದ್ರ ರೈ ಕಲ್ಲಿಮಾರ್, ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂಘಟನಾ ಕಾರ್ಯದರ್ಶಿ ಚಂದ್ರಹಾಸ್ ಶೆಟ್ಟಿ ಉಪಸ್ಥಿತರಿದ್ದರು.
Mangalore Ullal Student Literary Conference, Ramakrishna High School student Kumari Fatima Rafi elected as the President.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm