ಬ್ರೇಕಿಂಗ್ ನ್ಯೂಸ್
05-01-25 10:16 pm Mangalore Correspondent ಕರಾವಳಿ
ಮಂಗಳೂರು, ಜ 05: ನಾಡಿನ ಹಿರಿಯ ಸಾಹಿತಿ ಡಾ. ನಾ. ಡಿಸೋಜಾ (87) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಫಾದರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸೋಮವಾರ ಸಂಜೆ ಅವರ ಹುಟ್ಟೂರಾದ ಸಾಗರದಲ್ಲಿ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು.
ನಾ.ಡಿಸೋಜ ಅವರ ಪುತ್ರ ನವೀನ್ ಡಿಸೋಜ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ತಂದೆಯ ನಿಧನದ ಸುದ್ದಿಯನ್ನು ಪ್ರಕಟಿಸಿದ್ದಾರೆ.
' ನಮ್ಮ ಪೂಜ್ಯ ತಂದೆ ಖ್ಯಾತ ಸಾಹಿತಿ, ಡಾ. ನಾ ಡಿಸೋಜ ಅವರು ಇಂದು ರಾತ್ರಿ 7.50 ಕ್ಕೆ ಅನಾರೋಗ್ಯದ ಕಾರಣ ಮಂಗಳೂರಿನ ಪಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದೈವಾಧೀನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು' ಎಂದಿದ್ದಾರೆ.
ಡಾ. ನಾ ಡಿಸೋಜಾ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಮಡಿಕೇರಿಯಲ್ಲಿ ನಡೆದ 80 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಬಂಜೆ ಬೆಂಕಿ, ಮುಳುಗಡೆ, ಕಾಡಿನ ಬೆಂಕಿ, ದ್ವೀಪ, ಬಳುವಳಿ, ಬೆಟ್ಟದ ಪುರದ ದಿಟ್ಟ ಮಕ್ಕಳು ಸೇರಿದಂತೆ ಸಾಕಷ್ಟು ಕೃತಿಗಳನ್ನು ಬರೆದಿದ್ದಾರೆ. ಅಜ್ಞಾತ, ಒಂದು ಜಲಪಾತದ ಸುತ್ತ , ಕೈತಾನ್ ಗಾಂಧಿಯ ಸ್ವಾತಂತ್ರ್ಯ ಹೋರಾಟ, ಜೀವಕಳೆ, ಪ್ರೀತಿಯೊಂದೆ ಸಾಲದೇ?, ಬಂಜೆ ಬೆಂಕಿ, ಪ್ರಜ್ಞಾಬಲಿ, ನೆಲೆ, ನಡುವೆ ನಿಂತ ಜನ, ಗಾಂಧಿ ಬಂದರು, ಒಡ್ಡು, ಮಾನವ, ಮುಳುಗಡೆ, ವಿಷಾನಿಲ ಇನ್ನೂ ಅನೇಕ ಕಾದಂಬರಿಗಳನ್ನೊಳಗೊಂಡತೆ ಮಕ್ಳ ಸಾಹಿತ್ಯವನ್ನೂ, ರೇಡಿಯೋ ನಾಟಕಗಳನ್ನೂ ನಾ.ಡಿಸೋಜ ಅವರು ರಚಿಸಿದ್ದಾರೆ.
ಡಾ ನಾ ಡಿಸೋಜಾ ಅವರು ವೃತ್ತಿಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ನೌಕರರಾಗಿ ಸೇವೆ ಸಲ್ಲಿಸಿದ್ದಾರೆ. ಜೊತೆ ಜೊತೆಗೆ ಕನ್ನಡ ಸಾಹಿತ್ಯ ಎಲ್ಲಾ ಪ್ರಕಾರಗಳಲ್ಲೂ ಕೃತಿ ಬರೆಯುತ್ತಾ ಗುರುತಿಸಿಕೊಂಡಿದ್ದಾರೆ
Renowned Kannada writer and intellectual, Norbert D'Souza, popularly known as Dr Na D'Souza, passed away at the age of 87, a private hospital in Mangaluru after a prolonged illness. A celebrated figure in Kannada literature and cinema, Dr D'Souza's demise marks the end of an era, leaving behind a legacy that continues to inspire generations.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm