ಬ್ರೇಕಿಂಗ್ ನ್ಯೂಸ್
11-01-25 02:25 pm Mangaluru Correspondent ಕರಾವಳಿ
ಉಳ್ಳಾಲ, ಜ.11: ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಮೋರ್ಲ-ಬೋಳದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ತೃತೀಯ ವರ್ಷದ ನರಿಂಗಾನ ಲವ-ಕುಶ ಜೋಡುಕರೆ ಕಂಬಳಕ್ಕೆ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶನಿವಾರ ಬೆಳಗ್ಗೆ ಕಂಬಳದ ಕರೆಯನ್ನು ಉದ್ಘಾಟಿಸುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಆಶೀರ್ವಚನ ನೀಡಿದ ಸ್ವಾಮೀಜಿಗಳು ನಮ್ಮ ಬದುಕಿನ ಏಳು-ಬೀಳುಗಳು, ಕಂಬಳದ ಕರೆಯಲ್ಲಿ ಓಡುವ ಕೋಣಗಳ ಓಟಕ್ಕೆ ಸಾಮ್ಯತೆ ಹೊಂದಿದೆ. ಇಡೀ ಜಗತ್ತಲ್ಲಿ ಯದ್ಧದ ಕಾರ್ಮೋಡ ಕವಿದಿದ್ದು, ಶಾಂತಿ, ಸಾಮರಸ್ಯದ ಅಗತ್ಯತೆ ಇದೆ. ಸಮಾಜದಲ್ಲಿ ಎಲ್ಲರೂ ಒಟ್ಟಾಗಿ ಸಹಬಾಳ್ವೆ ನಡೆಸುವುದೆ ನಮ್ಮ ಉದ್ದೇಶವಾಗಬೇಕು. ಆ ನಿಟ್ಟಿನಲ್ಲಿ ಕಂಬಳವು ಜಾತಿ, ಧರ್ಮಗಳ ನಡುವೆ ಪರಸ್ಪರ ಸಾಮರಸ್ಯ, ಐಕ್ಯ ಬೆಸೆಯುವ ಕ್ರೀಡೆಯಾಗಿ ಬೆಳೆಯಲಿ ಎಂದು ಹಾರೈಸಿದರು.
ನರಿಂಗಾನ ಕಂಬಳ ಸಮಿತಿ ಅಧ್ಯಕ್ಷರಾದ ಯು.ಟಿ.ಖಾದರ್ ಮಾತನಾಡಿ ಕಂಬಳಕ್ಕೆ ನಮ್ಮ ನಾಡಿನಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ಅಭಿಮಾನಿಗಳಿದ್ದಾರೆ. ಕಳೆದ ಮೂರು ವರ್ಷದಿಂದ ವೆಂಕಪ್ಪ ಕಾಜವರ ನೇತೃತ್ವದಲ್ಲಿ ಸರ್ವರೂ ಒಗ್ಗೂಡಿ ಮಾಡುವ ಕಂಬಳವು ಇಡೀ ಊರಿಗೆ ಉತ್ಸವದಂತಾಗಿದೆ ಎಂದರು.
ನರಿಂಗಾನ ಕಂಬಳ ಸಮಿತಿ ಗೌರವಾಧ್ಯಕ್ಷರಾದ ಹಿರಿಯ ಕಂಬಳ ಪ್ರೇಮಿ ವೆಂಕಪ್ಪ ಕಾಜವ ಮಿತ್ತಕೋಡಿ, ಪ್ರಧಾನ ಕಾರ್ಯದರ್ಶಿ ನವಾಝ್ ನರಿಂಗಾನ, ಬೋಳ ಸಂತ ಲಾರೆನ್ಸ್ ಚರ್ಚ್ ಧರ್ಮಗುರುಗಳಾದ ರೆ.ಫಾ.ಪೆಡ್ರಿಕ್ ಕೊರೆಯ, ಗಡಿಕಾರರಾದ ದೋಣಿಂಜೆ ಗುತ್ತು ಪ್ರಮೋದ್ ಕುಮಾರ್ ರೈ, ಸಜಿಪ ನಡು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಮೊಕ್ತೇಸರರಾದ ಮುಳಿಂಜ ವೆಂಕಟೇಶ್ ಭಟ್, ಬೋಳಿಯಾರ್ ಗುತ್ತು ಗಡಿಪ್ರಧಾನರಾದ ಗುಣಕರ ಆಳ್ವ ಯಾನೆ ರಾಮ ರೈ, ಕಣಂತೂರು ಕ್ಷೇತ್ರದ ಆಡಳಿತ ಮೊಕ್ತೇಸರ ದೇವಿಪ್ರಸಾದ್ ಪೊಯ್ಯತ್ತಾಯ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಮತಾ ಡಿ.ಎಸ್ ಗಟ್ಟಿ, ಮುಡಾ ಅಧ್ಯಕ್ಷರಾದ ಸದಾಶಿವ ಉಳ್ಳಾಲ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪ್ರಕಾಶ್ ಕುಂಪಲ, ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ನರಿಂಗಾನ ಕಂಬಳ ಸಮಿತಿ ಕಾರ್ಯಾಧ್ಯಕ್ಷ ಮಿತ್ತಕೋಡಿ ಪ್ರಶಾಂತ್ ಕಾಜವ, ಮಾಧ್ಯಮ ಸಂಚಾಲಕ ಸತೀಶ್ ಕುಮಾರ್ ಪುಂಡಿಕಾಯಿ ಮೊದಲಾದವರು ಉಪಸ್ಥಿತರಿದ್ದರು.
Two day Lava Kusha Jodukare Kambala at Naringana inaugurated in Mangalore. CM Siddaramaiah will also participate in the Tulunadu traditional event.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am