ಬ್ರೇಕಿಂಗ್ ನ್ಯೂಸ್
11-01-25 04:57 pm Mangaluru Correspondent ಕರಾವಳಿ
ಮಂಗಳೂರು, ಜ.11: ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರಲ್ಲಿ ಭಿತ್ತಿಪತ್ರ ಹಿಡಿದು ಪ್ರತಿಭಟನೆಗೆ ಸಿದ್ಧತೆ ನಡೆಸಿದ ಡಿವೈಎಫ್ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಳ್ಳಾಲ ಕ್ಷೇತ್ರದ ನರಿಂಗಾನದಲ್ಲಿ ಸ್ಪೀಕರ್ ಯುಟಿ ಖಾದರ್ ನೇತೃತ್ವದಲ್ಲಿ ನಡೆಯುವ ಕಂಬಳಕ್ಕೆ ಆಗಮಿಸುತ್ತಿದ್ದು, ವಿಮಾನ ನಿಲ್ದಾಣದಿಂದ ನಗರದ ಕದ್ರಿ- ನಂತೂರು ರಸ್ತೆಯಲ್ಲಿ ಸಾಗುವ ಸಂದರ್ಭದಲ್ಲಿ ಡಿವೈಎಫ್ಐ ಕಾರ್ಯಕರ್ತರು ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದರು. ಇದನ್ನರಿತ ಪೊಲೀಸರು ಮುಖ್ಯಮಂತ್ರಿ ಬರುವ ಮೊದಲೇ ಬಿಕೆ ಇಮ್ತಿಯಾಜ್ ನೇತೃತ್ವದಲ್ಲಿ ಸೇರಿದ್ದ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಕಮ್ಯುನಿಸ್ಟ್ ಮತ್ತು ಡಿವೈಎಫ್ಐ ವತಿಯಿಂದ ಜನಪರ ವಿಚಾರಗಳಲ್ಲಿ ಪ್ರತಿಭಟನೆ ನಡೆಸಿದ್ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿತ್ತು. ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿ ದುರವಸ್ಥೆ ವಿರುದ್ಧ ಪ್ರತಿಭಟನೆ ನಡೆಸಿದ್ದಾಗಲೂ ಮುನೀರ್ ಕಾಟಿಪಳ್ಳ ಸೇರಿದಂತೆ ಕೆಲವರ ವಿರುದ್ಧ ಕೇಸು ದಾಖಲಿಸಲಾಗಿತ್ತು. ಇದನ್ನ ವಿರೋಧಿಸಿ ಕಮ್ಯುನಿಸ್ಟ್ ಮತ್ತು ಇತರ ಸಂಘಟನೆಗಳು ಪೊಲೀಸ್ ಕಮಿಷನರ್ ವಿರುದ್ಧ ಸರಣಿ ಪ್ರತಿಭಟನೆ ನಡೆಸಿದ್ದವು.
ಆದರೆ ಜಿಲ್ಲೆಯವರೇ ಆದ ಸ್ಪೀಕರ್ ಯುಟಿ ಖಾದರ್, ಕಮ್ಯುನಿಸ್ಟರ ಪ್ರತಿಭಟನೆಗೆ ಸೊಪ್ಪು ಹಾಕಿರಲಿಲ್ಲ. ಕಮಿಷನರ್ ಅವರನ್ನು ಸಮರ್ಥನೆಯನ್ನೇ ಮಾಡಿದ್ದರು. ಇದೀಗ ಖಾದರ್ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬರುವಾಗಲೇ ಮತ್ತೆ ಪ್ರತಿಭಟನೆಗೆ ಮುಂದಾಗಿದ್ದು, ಮುಖ್ಯಮಂತ್ರಿ ಗಮನ ಸೆಳೆಯುವ ಯತ್ನ ಮಾಡಿದ್ದಾರೆ. ಅದಕ್ಕೂ ಮೊದಲೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
DYFI activists gherao CM Siddaramaiahs car in Mangalore, demanding suspension of Police Commissioner IPS Anupam Agrawal.
11-01-25 02:11 pm
HK News Desk
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
G Parameshwara: ನಕ್ಸಲರು ತಮ್ಮಲ್ಲಿದ್ದ ಶಸ್ತ್ರಾಸ್...
10-01-25 07:03 pm
NT chairman SN Subrahmanyan: ಇನ್ಫೋಸಿಸ್ ನಾರಾಯಣ...
10-01-25 02:44 pm
Car Accident, Chamarajanagar: ಶಬರಿಮಲೆ ಯಾತ್ರಿಕ...
10-01-25 02:06 pm
09-01-25 12:11 pm
HK News Desk
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
ಹೊಸವರ್ಷದ ಆರಂಭದಲ್ಲೇ ಟಿಬೆಟ್ ಮಂದಿಗೆ ಭಾರಿ ಆಘಾತ ;...
07-01-25 06:32 pm
11-01-25 07:19 pm
Mangaluru Correspondent
DYFI, CM Siddaramaiah, IPS Anupam Agrawal; ಪೊ...
11-01-25 04:57 pm
Lava Kusha Jodukare Kambala, Mangalore; ತೃತೀಯ...
11-01-25 02:25 pm
Mangalore Annamalai, Naxals: ನಕ್ಸಲ್ ಶರಣಾಗತಿ ಬ...
11-01-25 12:44 pm
Mangalore, Missing, Marriage; ಮುಸ್ಲಿಂ ಯುವತಿಯನ...
10-01-25 11:14 pm
10-01-25 11:05 pm
HK News Desk
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm
Drugs, Mangalore Crime: ಗೋವಾದಿಂದ ಮಂಗಳೂರಿಗೆ ಹೈ...
09-01-25 10:32 pm