ಬ್ರೇಕಿಂಗ್ ನ್ಯೂಸ್
12-01-25 12:33 pm Mangalore Correspondent ಕರಾವಳಿ
ಮಂಗಳೂರು, ಜ.12 : ದಕ್ಷಿಣ ಕನ್ನಡ ಪ್ರವಾಸದಲ್ಲಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಂಗಳೂರಿನಲ್ಲಿ ಇಂಧನ ಭದ್ರತಾ ಸಮ್ಮಿಟ್ ಆಯೋಜಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಸಲಹೆ ನೀಡಿದ್ದು, ಇದಕ್ಕೆ ತಮ್ಮ ಕಡೆಯಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ.
ಮಂಗಳೂರಿನಲ್ಲಿ ನಡೆಯುತ್ತಿರುವ ಲಿಟ್ ಫೆಸ್ಟ್ ಕಾರ್ಯಕ್ರಮದಲ್ಲಿ ಶನಿವಾರ ಭಾಗವಹಿಸಿದ್ದ ಅವರಿಗೆ, ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿನ ಸಾಮರ್ಥ್ಯವನ್ನು ಬಳಸಿಕೊಳ್ಳಲು ದೊಡ್ಡ ನಗರಗಳನ್ನು ಮೀರಿ ಇಂಧನ ಭದ್ರತಾ ಶೃಂಗಸಭೆಗಳಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಸಾಧ್ಯತೆಯ ಬಗ್ಗೆ ಲೇಖಕಿ ಹರ್ಷ ಭಟ್ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಈ ಭರವಸೆ ನೀಡಿದ್ದಾರೆ.
ಮಂಗಳೂರಿನಂತಹ ನಗರದಲ್ಲಿ ಖಂಡಿತವಾಗಿಯೂ ಇಂಧನ ಭದ್ರತಾ ಸಮಿಟ್ ಮಾಡಬಹುದು. ನನ್ನ ಸ್ನೇಹಿತ ಮತ್ತು ಸಂಸದರಾದ ಕ್ಯಾ. ಚೌಟ ಅವರು ನಿನ್ನೆ ಈ ಭಾಗದ ಎಲ್ಲಾ ತೈಲ ಮಾರಾಟ ಕಂಪನಿಗಳ ಪ್ರಮುಖರನ್ನು ಭೇಟಿ ಮಾಡಿದ್ದಾರೆ. ಒಂದು ವೇಳೆ ನೀವು ಇಲ್ಲಿ ಇಂಧನ ಭದ್ರತಾ ಕಾರ್ಯಕ್ರಮವನ್ನು ಆಯೋಜಿಸಲು ಬಯಸಿದರೆ, ಈ ತೈಲ ಕಂಪನಿಗಳೊಂದಿಗೆ ಮಾತನಾಡಬಹುದು. ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿರುತ್ತದೆ. ಭಾರತ ಇಂಧನ ಸಪ್ತಾಹದ ಜತೆಗೆ ಇಂಥ ಇಂಧನ ಭದ್ರತಾ ಸಮ್ಮೇಳನಗಳನ್ನು ಆಯೋಜಿಸುವುದರಿಂದ ತೈಲೋದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ, ಅನುಕೂಲತೆ ದೊರೆಯಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
“ಇಂಧನ ಸಪ್ತಾಹಕ್ಕೆ ಆಹ್ವಾನ”
ಮೊತ್ತ ಮೊದಲ ಭಾರತ ಇಂಧನ ಸಪ್ತಾಹವನ್ನು ಬೆಂಗಳೂರಿನಲ್ಲಿ ಆಯೋಜಿಸಿದ್ದು ಬಳಿಕ ಗೋವಾದಲ್ಲಿ ನಡೆಸಿದ್ದೆವು. ನಂತರ ಗೋವಾವನ್ನು ಇಂಡಿಯಾ ಎನರ್ಜಿ ವೀಕ್ (ಐಇಡಬ್ಲ್ಯು) ಗಾಗಿ ಶಾಶ್ವತ ಸ್ಥಳವಾಗಿ ಆಯ್ಕೆ ಮಾಡಿ ಅಲ್ಲಿ ಸವಲತ್ತುಗಳನ್ನು ಒದಗಿಸುತ್ತಿದ್ದೇವೆ. ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್ ಲಿಮಿಟೆಡ್ (ಒಎನ್‌ಜಿಸಿ) ಗೋವಾದಲ್ಲಿ 240 ಎಕರೆ ಭೂಮಿಯನ್ನು ಹೊಂದಿದ್ದು, ದೆಹಲಿಯಲ್ಲಿರುವ ಭಾರತ್ ಮಂಗಳಂ ಅಥವಾ ಯಶೋ ಭೂಮಿಯಂತಹ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಿದರೆ ಮುಂದೆ ಜಾಗತಿಕ ಮಟ್ಟದ ಸಂಸ್ಥೆಗಳು ಇಲ್ಲಿ ತಮ್ಮ ಸಮ್ಮೇಳನಗಳನ್ನು ಯಶಸ್ವಿಯಾಗಿ ಆಯೋಜಿಸಲು ಸಾಧ್ಯವಾಗಲಿದೆ ಎಂದರು.
ದೆಹಲಿಯಲ್ಲಿ ಇಂಡಿಯಾ ಎನರ್ಜಿ ವೀಕ್ ಆಯೋಜಿಸಿದ್ದ ವೇಳೆ ಈ ರೀತಿಯ ವಸ್ತುಪ್ರದರ್ಶನವನ್ನು ಯುವಜನತೆ ನೋಡಬೇಕು ಎನ್ನುವ ಸಲಹೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನೀಡಿದ್ದರು. ಹೀಗಾಗಿ, ಮೋದಿ ಅವರ ಸಲಹೆಯಂತೆ ಈ ಬಾರಿಯ ಇಂಡಿಯಾ ಎನರ್ಜಿ ವೀಕ್ ನಲ್ಲಿ ಪ್ರತಿದಿನವೂ ಯುವ ಸಮುದಾಯ ಸೇರಿದಂತೆ ಎಲ್ಲ ಸಾರ್ವಜನಿಕರು ಮುಕ್ತವಾಗಿ ಭಾಗವಹಿಸುವುದಕ್ಕೆ ಅವಕಾಶ ಕಲ್ಪಿಸಲಾಗುವುದು. ಒಂದು ತಿಂಗಳ ಕಾಲ ನಡೆಯುವ ಈ ಇಂಡಿಯಾ ಎನರ್ಜಿ ವೀಕ್ ಶೀಘ್ರದಲ್ಲೇ ಶುರುವಾಗಲಿದೆ ಎಂದು ಸಚಿವರು ತಿಳಿಸಿದರು.
ದೇಶದಲ್ಲಿ ಮೂರು ವರ್ಷಗಳ ಹಿಂದೆಯಷ್ಟೇ ಇಂಡಿಯಾ ಇಂಧನ ಸಪ್ತಾಹ ಪಾರಂಭಿಸಲಾಗಿದೆ. ಆದರೆ, ಪ್ರಸ್ತುತ ಇದು ವಿಶ್ವದಲ್ಲೇ ಅತಿದೊಡ್ಡ ಇಂಧನ ವಸ್ತು ಪ್ರದರ್ಶನವಾಗಿ ಬದಲಾಗಿದೆ. ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ರೀತಿಯ ತಂತ್ರಜ್ಞಾನ, ಸಲಕರಣೆಗಳು ಈ ಇಂಡಿಯಾ ಇಂಧನ ವೀಕ್ ನಲ್ಲಿ ಪ್ರದರ್ಶನಗೊಳ್ಳಲಿದ್ದು, ಸ್ಟಾರ್ಟಪ್ ಮಾಡುವವರಿಗೆ ಹೆಚ್ಚಿನ ಪ್ರೋತ್ಸಾಹ, ಮಾರ್ಗದರ್ಶನ ಪಡೆಯುವುದಕ್ಕೆ ಉತ್ತಮ ವೇದಿಕೆಯಾಗಿದೆ. ಹೀಗಾಗಿ, ಎಲ್ಲ ಯುವಜನರು ಕೂಡ ಈ ಇಂಡಿಯಾ ಎನರ್ಜಿ ವೀಕ್ ಗೆ ಭೇಟಿ ನೀಡಿ ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವ ಹರ್ದೀಪ್ ಸಿಂಗ್ ಪುರಿ ಕರೆ ನೀಡಿದ್ದಾರೆ.
Union Minister of Petroleum and Natural Gas Hardeep Singh Puri said that India has achieved a 19% biofuel blending rate and is set to achieve its target of 20 % ahead of its schedule of October 2025.
11-01-25 10:53 pm
HK News Desk
ಕೊಪ್ಪದ ಮೇಗೂರು ಅರಣ್ಯದಲ್ಲಿ ಶರಣಾಗಿದ್ದ ನಕ್ಸಲರ ಶಸ...
11-01-25 10:27 pm
BBMP Raid, Lokayukta; ಬಿಬಿಎಂಪಿ 50 ಕಡೆಗಳಲ್ಲಿ ಲ...
11-01-25 09:14 pm
CT Ravi,Threat, Lakshmi Hebbalkar; ಬೆಳಗಾವಿ ಅಭ...
11-01-25 02:11 pm
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
09-01-25 12:11 pm
HK News Desk
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
ಹೊಸವರ್ಷದ ಆರಂಭದಲ್ಲೇ ಟಿಬೆಟ್ ಮಂದಿಗೆ ಭಾರಿ ಆಘಾತ ;...
07-01-25 06:32 pm
12-01-25 12:33 pm
Mangalore Correspondent
CM Siddaramaiah, Kambala Mangalore, Naringana...
11-01-25 10:34 pm
Mangalore Lit Fest 2025, Hardeep Singh Puri;...
11-01-25 07:19 pm
DYFI, CM Siddaramaiah, IPS Anupam Agrawal; ಪೊ...
11-01-25 04:57 pm
Lava Kusha Jodukare Kambala, Mangalore; ತೃತೀಯ...
11-01-25 02:25 pm
11-01-25 10:21 pm
Mangalore Correspondent
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm