ಬ್ರೇಕಿಂಗ್ ನ್ಯೂಸ್
14-01-25 02:27 pm Mangalore Correspondent ಕರಾವಳಿ
ಮಂಗಳೂರು, ಜ.14 : ಸವಣೂರು, ಸುಬ್ರಹ್ಮಣ್ಯ, ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನೆಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಡಬ ತಾಲೂಕು ತಹಸೀಲ್ದಾರ್ ಗೆ ಸೂಚನೆ ನೀಡಿದ್ದಾರೆ.
ಕಡಬ ತಾಲೂಕು ಕಚೇರಿಯಲ್ಲಿ ಜನವರಿ 13ರಂದು ನಡೆದ ಸಾರ್ವಜನಿಕರ ಭೇಟಿ ವೇಳೆ ಮಾತನಾಡಿದ ಸಂಸದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕುಸುಮ್ ಯೋಜನೆಯಡಿ ದೇಶದೆಲ್ಲೆಡೆ ಸೋಲಾರ್ ಪಾರ್ಕ್‌ಗಳನ್ನು ಸ್ಥಾಪಿಸಿ ಗ್ರೀನ್ ಎನರ್ಜಿಗೆ ಒತ್ತು ನೀಡುವಂತೆ ಕರೆ ನೀಡಿದ್ದಾರೆ. ಇದಕ್ಕೆ ಪೂರಕವಾಗಿ ಇದೀಗ ಸವಣೂರು, ಸುಬ್ರಹ್ಮಣ್ಯ, ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸಲು ಜಾಗ ಗುರುತಿಸುವಂತೆ ಸಚಿವಾಲಯದಿಂದ ಮೆಸ್ಕಾಂಗೆ ಪತ್ರ ಬಂದಿದೆ. ಹೀಗಾಗಿ, ಒಂದು ವಾರದೊಳಗೆ ಕಡಬ ತಾಲೂಕು ವ್ಯಾಪ್ತಿಯಲ್ಲಿ ಪಿಎಂ ಕುಸುಮ್ ಸೋಲಾರ್ ಪಾರ್ಕ್ ಸ್ಥಾಪನೆಗೆ ಸೂಕ್ತ ಸ್ಥಳಾವಕಾಶದ ಬಗ್ಗೆ ಪರಿಶೀಲಿಸಿ ಅದರ ಸಾಧಕ- ಬಾಧಕಗಳ ಬಗ್ಗೆ ವರದಿ ನೀಡುವಂತೆ ಸಂಸದರು ತಹಶೀಲ್ದಾರರಿಗೆ ಸೂಚಿಸಿದ್ದಾರೆ.
ಕೋಡಿಂಬಾಳ ರೈಲು ಅಭಿವೃದ್ಧಿಯ ಭರವಸೆ
ಸಂಸದರು ತಾಲೂಕಿನ ಜನತೆಯ ಕುಂದು ಕೊರತೆಗಳ ಬಗ್ಗೆ ಅಹವಾಲು ಸ್ವೀಕರಿಸಿದ ವೇಳೆ, ಕಡಬಕ ತಾಲೂಕಿನ ಕೋಡಿಂಬಾಳದ ರೈಲು ನಿಲ್ದಾಣವನ್ನು ಅಭಿವೃದ್ಧಿ ಪಡಿಸಿದರೆ ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸ್ಥಳೀಯರು ಮನವಿ ನೀಡಿದ್ದಾರೆ. ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಂಸದರು, ಸಂಬಂಧಪಟ್ಟವರ ಜತೆಗೆ ಚರ್ಚಿಸಿ ರೈಲು ನಿಲ್ದಾಣದ ಉನ್ನತೀಕರಣಕ್ಕೆ ಶ್ರಮಿಸುವುದಾಗಿ ಆಶ್ವಾಸನೆ ನೀಡಿದ್ದಾರೆ.
ಸಂಸದರ ಅಹವಾಲು ಸ್ವೀಕರಿಸುವ ಸಂದರ್ಭದಲ್ಲಿ ಮಿನಿ ವಿಧಾನ ಸೌಧದಲ್ಲಿ ಜನಜಂಗುಲಿ ನೆರೆದಿತ್ತು. ಸಣ್ಣಪುಟ್ಟ ಕೆಲಸ ಕಾರ್ಯಗಳಿಗೆ ಜನರನ್ನು ಅಲೆದಾಡಿಸದಂತೆ ಇದೇ ಸಂಧರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಬಿ.ಜೆ.ಪಿ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ಬಿ.ಜೆ.ಪಿ ಪ್ರಮುಖರಾದ ಪುಲಸ್ತ್ಯ ರೈ, ಪ್ರಕಾಶ್ ಎನ್.ಕೆ, ಮಧುಸೂದನ್ ಕೊಂಬಾರು, ರವಿಪ್ರಸಾದ್ ಶೆಟ್ಟಿ ನೆಲ್ಯಾಡಿ, ಸುರೇಶ್ ದೆಂತಾರು, ರಮೇಶ ಕಲ್ಪುರೆ, ಅಶೋಕ್ ನೆಕ್ಕರೆ, ವಾಡ್ಯಪ್ಪ ಗೌಡ, ಸದಾಶಿವ ಶೆಟ್ಟಿ ಮಾರಂಗ, ಲಕ್ಷೀಶ ಪೆಲತ್ತಾರು ಸೇರಿದಂತೆ ಹಲವು ಮಂದಿ ಬಿ.ಜೆ.ಪಿ ಪ್ರಮುಖರು, ಹಲವು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
Mangalore Dakshina Kannada MP Capt Brijesh Chowta directed Kadaba tahsildar to identify land for solar park in Kadaba taluk within a week.
14-01-25 03:36 pm
HK News Desk
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ; ಬಿಹಾರ ಮೂಲದ ಆರೋಪ...
13-01-25 10:48 am
14-01-25 07:18 pm
HK News Desk
Mahakumbh 2025: ಮಹಾ ಕುಂಭ ಮೇಳದಲ್ಲಿ ಭಾರತ ದರ್ಶನ...
13-01-25 10:49 pm
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
14-01-25 08:36 pm
Mangalore Correspondent
\MP Brijesh Chowta, Kadaba, Solar Park: ಕಡಬ ತ...
14-01-25 02:27 pm
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
Bangalore Cow Incident: ಹಸುವಿನ ಕೆಚ್ಚಲು ಕೊಯ್ದ...
13-01-25 10:48 am
14-01-25 10:40 pm
HK News Desk
Mangalore crime, Diesel thieves: ಸುರತ್ಕಲ್ ; ಟ...
14-01-25 04:47 pm
Mangalore, Tannirbhavi beach, crime: ತಣ್ಣೀರುಬ...
13-01-25 03:30 pm
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm