ಬ್ರೇಕಿಂಗ್ ನ್ಯೂಸ್
15-12-20 03:52 pm Mangalore Correspondent ಕರಾವಳಿ
ಮಂಗಳೂರು, ಡಿ.15 : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಬ್ಯಾರಿ ಭವನ ನಿರ್ಮಾಣಕ್ಕಾಗಿ ಪೆರ್ಮನ್ನೂರು ಗ್ರಾಮದ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ಅಂದಾಜು 3 ಕೋಟಿ ಮೌಲ್ಯದ 25 ಸೆಂಟ್ ಜಮೀನು ಸರಕಾರದಿಂದ ಮಂಜೂರಾಗಿದೆ. ಜನಪ್ರತಿನಿಧಿಗಳು ಹಾಗೂ ಬ್ಯಾರಿ ಸಮುದಾಯದ ಪ್ರಮುಖರನ್ನು ಕರೆದು ಶೀಘ್ರದಲ್ಲೇ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ತಿಳಿಸಿದ್ದಾರೆ.
ಅಕಾಡೆಮಿಯ ಹಿಂದಿನ ಅವಧಿಯಲ್ಲಿ ಬ್ಯಾರಿ ಭವನಕ್ಕಾಗಿ ನೀರುಮಾರ್ಗದ ಬೈತುರ್ಲಿ ಗ್ರಾಮದಲ್ಲಿ 0.25 ಸೆಂಟ್ಸ್ ಜಾಗವನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಖರೀದಿ ಮಾಡಲಾಗಿತ್ತು. ಅಲ್ಲಿ ಬ್ಯಾರಿ ಭವನ ನಿರ್ಮಾಣಕ್ಕೆ ನೀಲನಕ್ಷೆ ತಯಾರಾಗಿತ್ತು. ಆದರೆ, ಈ ನಿವೇಶನದ ಆಸುಪಾಸಿನಲ್ಲಿ ಬ್ಯಾರಿ ಭಾಷಿಕರ ಜನಸಂಖ್ಯೆ ತೀರಾ ವಿರಳವಾಗಿದ್ದು, ಭವನ ನಿರ್ಮಾಣಕ್ಕೆ ಸೂಕ್ತ ಜಾಗ ಅಲ್ಲ ಎಂದು ಮನಗಂಡ ಪ್ರಸಕ್ತ ಸಾಲಿನ ಬ್ಯಾರಿ ಸಾಹಿತ್ಯ ಅಕಾಡೆಮಿ, ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದೆ. ಅಲ್ಲದೆ, ತುಳು, ಕೊಂಕಣಿ ಸೇರಿದಂತೆ ಇತರ ಅಕಾಡೆಮಿಗಳಿಗೆ ಸರಕಾರದಿಂದ ಉಚಿತವಾಗಿ ಜಮೀನು ನೀಡಿದಂತೆ ಬ್ಯಾರಿ ಅಕಾಡೆಮಿಗೂ ನೀಡಬೇಕೆಂದು ಮನವಿ ಮಾಡಲಾಗಿತ್ತು. ಅದರಂತೆ ಅತೀ ಹೆಚ್ಚು ಬ್ಯಾರಿ ಭಾಷಿಕರನ್ನು ಒಳಗೊಂಡ ತೊಕ್ಕೊಟ್ಟು ಪರಿಸರದಲ್ಲಿಯೇ ನಿವೇಶನವನ್ನು ಉಚಿತವಾಗಿ ಒದಗಿಸಲಾಗಿದೆ. ಈ ಮೂಲಕ ‘ಸರ್ವರಿಗೆ ಸಮಪಾಲು, ಸರ್ವರಿಗೆ ಸಮಬಾಳು’ ಎಂಬ ನೀತಿಯಂತೆ ಮುಖ್ಯಮಂತ್ರಿ ನಡೆದುಕೊಂಡಿದ್ದಾರೆ. ಇದಕ್ಕಾಗಿ ಮುಖ್ಯಮಂತ್ರಿಗಳು ಸೇರಿದಂತೆ ಕರ್ನಾಟಕ ಸರಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ರಹೀಂ ಉಚ್ಚಿಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಂಗಳೂರಿನ ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಂಜೂರಾಗಿರುವ ನಿವೇಶನವನ್ನು ಮರಳಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಲಾಗುವುದು. ಅಕಾಡೆಮಿಯಿಂದ ಮೂಡಾಕ್ಕೆ ಪಾವತಿಯಾದ ಮೊತ್ತವನ್ನು ಮೂಡಾದಿಂದ ಮರಳಿ ಪಡೆದು ಅಕಾಡೆಮಿಯ ವಿವಿಧ ಕಾರ್ಯಗಳಿಗೆ ವಿನಿಯೋಗಿಸಲಾಗುವುದು. ಇದಲ್ಲದೆ, ಕರ್ನಾಟಕ ಸರಕಾರದ ಮಾಜಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸಿ.ಟಿ. ರವಿಯವರ ಸಹಕಾರದಿಂದ ಮುಖ್ಯಮಂತ್ರಿಗಳು ಬ್ಯಾರಿ ಭವನಕ್ಕೆ ಈಗಾಗಲೇ ರೂ.6 ಕೋಟಿ ಮಂಜೂರು ಮಾಡಿದ್ದು ಈ ಪೈಕಿ ರೂ.3 ಕೋಟಿಯನ್ನು ಬಿಡುಗಡೆ ಮಾಡಿದ್ದಾರೆ. ಇದರಿಂದ ತೊಕ್ಕೊಟ್ಟಿನಲ್ಲಿ ಬ್ಯಾರಿ ಭವನದ ನಿರ್ಮಾಣ ಕಾರ್ಯ ಶೀಘ್ರದಲ್ಲಿಯೇ ಪ್ರಾರಂಭವಾಗಲಿದ್ದು ಸುಮಾರು 6 ರಿಂದ 12 ತಿಂಗಳ ಒಳಗೆ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿದೆ ಎಂದು ರಹೀಂ ಉಚ್ಚಿಲ್ ತಿಳಿಸಿದ್ದಾರೆ.
ಬ್ಯಾರಿ ಭವನದಲ್ಲಿ ವಿಶಾಲ ಸಭಾಂಗಣ, ಮಿನಿಹಾಲ್, ಅಕಾಡೆಮಿಯ ಕಚೇರಿ, ಸಾರ್ವಜನಿಕ ಗ್ರಂಥಾಲಯ, ವಸ್ತು ಸಂಗ್ರಹಾಲಯವನ್ನು ಹೊಂದಿರುತ್ತದೆ. ಈ ಭವನವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನಕ್ಕೆ ಬರುವುದರಿಂದ ಭಾಷೆ, ಕಲೆ, ಸಾಹಿತ್ಯ, ಸಂಸ್ಕೃತಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು. ಬ್ಯಾರಿ ಭಾಷಿಕರ ಕನಸು ನನಸು ಮಾಡಿದ ಕರ್ನಾಟಕ ಸರಕಾರಕ್ಕೆ ವಿಶ್ವದಾದ್ಯಂತ ಇರುವ ಬ್ಯಾರಿ ಭಾಷಿಕರ ಪರವಾಗಿ ಕೃತಜ್ಞತೆ ಸಲ್ಲಿಸುತ್ತಿದ್ದೇವೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ತಿಳಿಸಿದ್ದಾರೆ.
The Government has released Rs 3 crores for the purchase of land to build Beary Bhavan in Thokottu stated Beary Academy President Rahim Uchil.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm