ಬ್ರೇಕಿಂಗ್ ನ್ಯೂಸ್
17-01-25 12:59 pm Mangaluru Correspondent ಕರಾವಳಿ
ಮಂಗಳೂರು, ಜ.17: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು ಪ್ರವಾಸ ಎರಡು ಗಂಟೆ ವಿಳಂಬವಾಗಿದೆ. ಹೀಗಾಗಿ ಸಿಎಂ ಕಾರ್ಯಕ್ರಮಕ್ಕಾಗಿ ಕಾದು ಕುಳಿತ ಅಧಿಕಾರಿಗಳು, ಮಾಧ್ಯಮದವರು, ಜನಸಾಮಾನ್ಯರು ಕಾದು ಕಾದು ಹೈರಾಣಾಗಿದ್ದಾರೆ.
ಮಂಗಳೂರಿನಲ್ಲಿ ಬೆಳಗ್ಗೆ 11 ಗಂಟೆಗೆ ಮೇರಿಹಿಲ್ ನಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ಪ್ರಾದೇಶಿಕ ಕೇಂದ್ರ ಸ್ಥಾಪನೆಗೆ ಶಿಲಾನ್ಯಾಸ ನೆರವೇರಿಸಬೇಕಿತ್ತು. ಇದಕ್ಕಾಗಿ ರಾಜೀವ ಗಾಂಧಿ ಯೂನಿವರ್ಸಿಟಿ ಒಳಪಟ್ಟ ಮಂಗಳೂರಿನ ಹಲವು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳನ್ನು ಕರೆಸಲಾಗಿತ್ತು. ನೂರಾರು ವಿದ್ಯಾರ್ಥಿಗಳು ಸ್ಥಳದಲ್ಲಿ ಸೇರಿದ್ದು ಹಾಕಿರುವ ಶಾಮಿಯಾನ, ಕುರ್ಚಿ ಸಾಕಾಗದೆ ಹೊರಗಡೆಯೂ ನಿಂತಿದ್ದಾರೆ. ಇದಲ್ಲದೆ, ನರ್ಸಿಂಗ್ ಕಾಲೇಜುಗಳ ಉಪನ್ಯಾಸಕರು, ಯುನಿವರ್ಸಿಟಿ ಅಧಿಕಾರಿಗಳು ಕೂಡ ಸ್ಥಳದಲ್ಲಿದ್ದು ಮುಖ್ಯಮಂತ್ರಿ ಬರುವಿಕೆಯನ್ನು ಕಾಯುತ್ತಿದ್ದಾರೆ. ಇದಲ್ಲದೆ, ಈ ಕಾರ್ಯಕ್ರಮಕ್ಕಾಗಿ ವಾರ್ತಾ ಇಲಾಖೆಯಿಂದ ಮಾಧ್ಯಮದವರನ್ನೂ 11 ಗಂಟೆಗೆ ಸ್ಥಳಕ್ಕೆ ಕರೆದೊಯ್ಯಲಾಗಿತ್ತು.





ನರ್ಸಿಂಗ್ ವಿದ್ಯಾರ್ಥಿಗಳನ್ನು ಬೆಳಗ್ಗೆ 9 ಗಂಟೆಗೇ ಕರೆಸಲಾಗಿತ್ತು. ಉಡುಪಿಯಿಂದ ಆಗಮಿಸಿರುವ ವಿದ್ಯಾರ್ಥಿಗಳಿಗೆ ಕನಿಷ್ಠ ಉಪಾಹಾರ ವ್ಯವಸ್ಥೆಯನ್ನೂ ಮಾಡಿಲ್ಲ. ಕೆಲವು ವಿದ್ಯಾರ್ಥಿಗಳು, ಉಪನ್ಯಾಸಕರು ಹೊರಗಡೆ ಹೊಟೇಲ್ ಹೋಗಿ ಬಾಯಾರಿಕೆ ಕುಡಿಯುತ್ತಿದ್ದರು. ಅಧಿಕಾರಿಗಳ ಮಾಹಿತಿ ಪ್ರಕಾರ, ಸಿಎಂ ಸಿದ್ದರಾಮಯ್ಯ ಅವರು 12 ಗಂಟೆ ವೇಳೆಗೆ ಬೆಂಗಳೂರಿನಿಂದ ಹೊರಟಿದ್ದು 12.45 ರ ವೇಳೆಗೆ ಮಂಗಳೂರು ಏರ್ಪೋರ್ಟ್ ತಲುಪಬಹುದು. ಮೇರಿಹಿಲ್ ಕಾರ್ಯಕ್ರಮ ಸ್ಥಳಕ್ಕೆ ತಲುಪುವಾಗ 1.20 ಗಂಟೆ ಆಗಬಹುದು ಎನ್ನುತ್ತಿದ್ದಾರೆ. ಸ್ಥಳದಲ್ಲಿ ಸೇರಿದ ಜನರಿಗೆ ಬೋರ್ ಆಗುವುದನ್ನು ತಪ್ಪಿಸಲು ವಿದ್ಯಾರ್ಥಿಗಳನ್ನು ವೇದಿಕೆಗೆ ಕರೆಸಿ ಹಾಡುಗಳನ್ನು ಹಾಡಿಸುವ ಸ್ಥಿತಿಯಾಗಿದೆ. ವೇದಿಕೆ ಖಾಲಿ ಇದ್ದರೂ ಸ್ಪೀಕರ್ ಯುಟಿ ಖಾದರ್, ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಭಾಷಣ ಮಾಡಿ ಟೈಮ್ ಫಿಲ್ಲಿಂಗ್ ಮಾಡಿದ್ದಾರೆ.

ಇದೇ ವೇಳೆ, ಇತ್ತ ಮಂಗಳೂರು ಪುರಭವನದಲ್ಲಿ ಬಹು ಸಂಸ್ಕೃತಿ ಉತ್ಸವ ಹಮ್ಮಿಕೊಳ್ಳಲಾಗಿದೆ. ತುಳು, ಬ್ಯಾರಿ, ಕೊಂಕಣಿ, ಕೊಡವ, ಯಕ್ಷಗಾನ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಜಂಟಿ ಸಹಭಾಗಿತ್ವದಲ್ಲಿ ಉತ್ಸವ ಹಮ್ಮಿಕೊಂಡಿದ್ದು 12 ಗಂಟೆ ವೇಳೆಗೆ ಸಿದ್ದರಾಮಯ್ಯ ಉದ್ಘಾಟನೆ ಮಾಡಬೇಕಿತ್ತು. ಕಾರ್ಯಕ್ರಮ ಸ್ಥಳದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಸ್ಕೃತಿ ಉತ್ಸವಕ್ಕಾಗಿ ಆಗಮಿಸಿದ ಸಾರ್ವಜನಿಕರು, ಶಾಲೆ- ಕಾಲೇಜು ವಿದ್ಯಾರ್ಥಿಗಳು ಸೇರಿದ್ದಾರೆ. ಎರಡು ಕಡೆಯೂ ಮುಖ್ಯಮಂತ್ರಿ ಬರುವಿಕೆಗಾಗಿ ನೂರಾರು ಜನರು ಕಾಯುತ್ತಿದ್ದಾರೆ.
ಕೊನೆಗೂ ಸ್ಥಳಕ್ಕೆ ತಲುಪಿದ ಸಿಎಂ ಸಿದ್ದರಾಮಯ್ಯ ;
ಅಂತೂ ಮೇರಿಹಿಲ್ ನಲ್ಲಿ ನಡೆದ ಕಾರ್ಯಕ್ರಮ ಸ್ಥಳಕ್ಕೆ ಮಧ್ಯಾಹ್ನ 1 ಗಂಟೆ 5 ನಿಮಿಷಕ್ಕೆ ಸಿಎಂ ಸಿದ್ದರಾಮಯ್ಯ ತಲುಪಿದ್ದಾರೆ. ರಾಜೀವ ಗಾಂಧಿ ವಿವಿಯ ಪ್ರಾದೇಶಿಕ ಕೇಂದ್ರಕ್ಕೆ ಸಿದ್ದರಾಮಯ್ಯ ಎರಡನೇ ಬಾರಿ ಶಿಲಾನ್ಯಾಸ ನೆರವೇರಿಸಿದ್ದಾರೆ. ಈ ಹಿಂದೆ 2020ರಲ್ಲಿ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಇದೇ ಜಾಗದಲ್ಲಿ ರಾಜೀವ ಗಾಂಧಿ ವಿವಿಯ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಮಾಡಿದ್ದರು.
CM Siddaramaiah arrives two hours late to lay foundation stone for RGUHS regional headquarters in Mangalore. Chief Minister Siddaramaiah was to lay the foundation stone for the Mangalore regional headquarters of the Rajiv Gandhi University of Health Sciences (RGUHS), Bangalore, on January 17. The new center located in Maryhill.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm