Kotekar bank robbery, CM Siddaramaiah, Mangalore: ಹಾಡಹಗಲೇ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ; ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ತುರ್ತು ಸಭೆ, ಆರೋಪಿಗಳು ತಪ್ಪಿಸಿಕೊಂಡ ಬಗ್ಗೆ ಗರಂ, ಎಲ್ಲಾ ಟೋಲ್ ಗಳಲ್ಲಿ ಬಿಗು ತಪಾಸಣೆಗೆ ಸೂಚನೆ

17-01-25 05:06 pm       HK News Desk   ಕರಾವಳಿ

ಹಾಡಹಗಲೇ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ನಡೆದಿರುವ ಹಿನ್ನೆಲೆಯಲ್ಲಿ ಮಂಗಳೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ್ದು ಶೀಘ್ರ ಆರೋಪಿಗಳ ಪತ್ತೆ ಮಾಡುವಂತೆ ಖಡಕ್ ಸೂಚನೆ ನೀಡಿದ್ದಾರೆ. 

ಮಂಗಳೂರು, ಜ.17: ಹಾಡಹಗಲೇ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ನಡೆದಿರುವ ಹಿನ್ನೆಲೆಯಲ್ಲಿ ಮಂಗಳೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ್ದು ಶೀಘ್ರ ಆರೋಪಿಗಳ ಪತ್ತೆ ಮಾಡುವಂತೆ ಖಡಕ್ ಸೂಚನೆ ನೀಡಿದ್ದಾರೆ. 

ರಾಜೀವ ಗಾಂಧಿ ಆರೋಗ್ಯ ವಿವಿಯ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಊಟಕ್ಕಾಗಿ ಹೊಟೇಲ್ ತೆರಳಿದ್ದು ಈ ಸಂದರ್ಭದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಾದ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ಎಸ್.ಪಿ ಯತೀಶ್, ಡಿವೈಎಸ್ ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ್ದಾರೆ. 

ಘಟನೆ ಕುರಿತಂತೆ ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಹಾಡಹಗಲೇ ಕೃತ್ಯ ನಡೆಸಿ ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ ? ಎಷ್ಟು ಟೋಲ್ ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್ ಗಳನ್ನು‌ ಏಕೆ ಟೈಟ್ ಮಾಡಲಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದರು. 

ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.‌

ಎಲ್ಲಾ ಟೋಲ್ ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂದಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದು ಮುಖ್ಯಮಂತ್ರಿಗಳು ಇದೇ ವೇಳೆ ಪೊಲೀಸರಿಗೆ ಸೂಚನೆ ನೀಡಿದರು. ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಜೊತೆಗೇ ಇದ್ದರು.

Mangalore Kotekar bank robbery, CM Siddaramaiah orders police to check toll gates during the meeting held with the police department in Mangalore. In a shocking incident, a gang of five masked assailants threatened the staff and customers of the Kotekar Co-operative society at K C Road by brandishing guns  on January 17, Friday and escaped with all gold ornaments and cash from the bank.