ಬ್ರೇಕಿಂಗ್ ನ್ಯೂಸ್
18-01-25 06:16 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.18 : ರಾಜ್ಯದ ಪ್ರತಿ ತಾಲೂಕು ಆಸ್ಪತ್ರೆಗಳನ್ನೂ ಜಿಲ್ಲಾಸ್ಪತ್ರೆಗಳ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸಲು ರಾಜ್ಯ ಸರ್ಕಾರದಿಂದ ಯೋಜನೆ ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಚ್ಚಿನ ಗ್ರಾಮದಲ್ಲಿ ಇಂದು ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಸಚಿವರು ಮಾತನಾಡಿದರು.
ಸಾರ್ವಜನಿಕರಿಗೆ ತಾಲೂಕು ಆಸ್ಪತ್ರೆಗಳಲ್ಲಿಯೇ ಹೆಚ್ಚಿನ ಚಿಕಿತ್ಸಾ ಸೌಲಭ್ಯಗಳನ್ನ ಒದಗಿಸಬೇಕಾಗಿದೆ. ಜಿಲ್ಲಾಸ್ಪತ್ರೆಗಳಲ್ಲಿ ಸಿಗುವ ಸೌಲಭ್ಯಗಳನ್ನ ತಾಲೂಕಿನಲ್ಲಿಯೇ ನೀಡುವ ಮೂಲಕ ಜನರ ಸಮೀಪಕ್ಕೆ ಆರೋಗ್ಯ ಸೇವೆಗಳನ್ನ ಒದಗಿಸುತ್ತ ಮುಂಬರುವ ಬಜೆಟ್ ನಲ್ಲಿ ಮಹತ್ವದ ಯೋಜನೆ ಘೋಷಣೆಯಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಈ ನಿಟ್ಟಿನಲ್ಲಿ ಪ್ರಸ್ತುತ ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಸಂಖ್ಯೆಯನ್ನ ದ್ವಿಗುಣಗೊಳಿಸಲು ನಿರ್ಧರಿಸಲಾಗಿದೆ. ಇದರಿಂದ ರಾತ್ರಿ ವೇಳೆಯಲ್ಲಿಯೂ ಆಸ್ಪತ್ರೆಗಳಿಗೆ ಬರುವ ಜನರಿಗೆ ತಜ್ಞ ವೈದ್ಯರ ಸೇವೆ ಲಭ್ಯವಾಗಲಿದೆ. ಅಲ್ಲದೇ ತಜ್ಞ ವೈದ್ಯರಿಗೆ ಬೇಕಾಗುವ ಎಲ್ಲ ವೈದ್ಯಕೀಯ ಪರಿಕರಗಳನ್ನು ಸರ್ಕಾರ ತಾಲೂಕು ಆಸ್ಪತ್ರೆಗಳಲ್ಲಿಯೂ ಒದಗಿಸಲಿದೆ. ದಿನದ 24 ಗಂಟೆಯೂ ತಾಲೂಕು ಆಸ್ಪತ್ರೆಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುವಂತೆ ಯೋಜನೆ ರೂಪಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮಚ್ಚಿನ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ನೂತನ ಕಟ್ಟಡವನ್ನ ನಾಲ್ಕು ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, 11 ಕೋಟಿ ವೆಚ್ಚದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರಗಳನ್ನ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ. ಅಲ್ಲದೇ ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಕಟ್ಟಡ ದುರಸ್ತಿ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ವಿಸ್ತ್ರತವಾದ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಶಾಸಕ ಹರೀಶ್ ಪೂಂಜಾಗೆ ಸಚಿವರ ತಿರುಗೇಟು
ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ಶಾಸಕ ಹರೀಶ್ ಪುಂಜಾ ವೇದಿಕೆಯ ಮೇಲಿದ್ದ ಸಚಿವ ದಿನೇಶ್ ಗುಂಡೂರಾವ್ ಎದುರು ಎರಡು ಬೇಡಿಕೆಯನ್ನ ಮುಂದಿಟ್ಟರು. ನಾನೊಬ್ಬ ಆಶಾ ಕಾರ್ಯಕರ್ತೆಯರ ಕುಟುಂಬದಿಂದ ಬಂದವನಾಗಿದ್ದು, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಿಸಬೇಕು. ಹಾಗೂ 70 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಯೋಜನೆಯನ್ನ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.
ಈ ಕುರಿತು ತಮ್ಮ ಭಾಷಣದ ವೇಳೆ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್ ಆಶಾ ಕಾರ್ಯಕರ್ತೆಯರಿಗೆ ಏಪ್ರಿಲ್ ತಿಂಗಳಿನಿಂದ 10 ಸಾವಿರ ಮುಂಗಡವಾಗಿ ನೀಡಲು ಈಗಾಗಲೇ ತೀರ್ಮಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಹೆಚ್ಚಿನ ಸಹಕಾರ ನೀಡಲಾಗಿದೆ. ಆದರೆ ಕೇಂದ್ರ ಸರ್ಕಾರ ಗೌರವಧನ ಹೆಚ್ಚಿಸುವ ಕಾರ್ಯ ಮಾಡಬೇಕು. ನೀವು, ನಿಮ್ಮ ಸಂಸದರು ಕೇಂದ್ರದಲ್ಲಿ ಪ್ರಭಾವ ಬಳಸಿ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ವಿಸುವಂತೆ ಒತ್ತಾಯಿಸಿ ಎಂದು ಶಾಸಕ ಹರೀಶ್ ಪುಂಜಾ ಅವರಿಗೆ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದರು. ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ 5 ಸಾವಿರ ಗೌರವಧನ ನೀಡುತ್ತಿದೆ. ಕೇಂದ್ರ ಸರ್ಕಾರ 3 ಸಾವಿರ ನೀಡುತ್ತಿದ್ದು , ಅದರಲ್ಲೂ ಶೇ 40 ರಷ್ಟು ಪಾಲನ್ನ ರಾಜ್ಯ ಸರ್ಕಾರವೇ ಭರಿಸುತ್ತಿದೆ. ಪ್ರತಿ ಬಾರಿ ರಾಜ್ಯ ಸರ್ಕಾರ ಗೌರವಧನ ಹೆಚ್ಚಳ ಮಾಡಿಕೊಂಡು ಬರುತ್ತಿದೆ. ಆದರೆ ಕೇಂದ್ರ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳವಾಗಿಯೇ ಇಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ವಯೋ ವಂದನ ಯೋಜನೆ ಅನುಷ್ಠಾನ ವಿಚಾರದಲ್ಲಿ ರಾಜ್ಯ ಸರ್ಕಾರ ಮುಕ್ತವಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕೆಲವು ಸ್ಪಷ್ಟನೆ ಕೇಳಿ ನವೆಂಬರ್ ತಿಂಗಳಿನಲ್ಲಿಯೇ ಪತ್ರ ಬರೆಯಲಾಗಿದೆ. ಕೇಂದ್ರದಿಂದ ಇನ್ನೂ ಉತ್ತರ ದೊರೆತಿಲ್ಲ. ಆಯುಷ್ಮಾನ್ ಭಾರತ್ ಯೋಜನೆಯ ಪ್ರಕಾರ ಶೇ 60 ರಷ್ಟು ಕೇಂದ್ರ ಹಾಗೂ ಶೇ 40 ರಷ್ಟು ರಾಜ್ಯ ಸರ್ಕಾರ ಅನುದಾನ ನೀಡಬೇಕು. ಆದರೆ ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರ ಶೇ 75 ರಷ್ಟು ಅನುದಾನದ ಪಾಲನ್ನ ಭರಿಸುತ್ತಿದ್ದು, ಶೇ 25 ರಷ್ಟು ಅನುದಾನ ಮಾತ್ರ ಕೇಂದ್ರ ಸರ್ಕಾರ ನೀಡುತ್ತಿದೆ. ರಾಜ್ಯ ಸರ್ಕಾರ 1 ಕೋಟಿ 20 ಲಕ್ಷ ಕುಟುಂಬಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯನ್ನ ಜೋಡಿಸಿದೆ. ಆದರೆ ಕೇಂದ್ರ ಸರ್ಕಾರ ರಾಜ್ಯದ 65 ಲಕ್ಷ ಕುಟುಂಬಗಳನ್ನ ಮಾತ್ರ ಈ ಯೋಜನೆಗೆ ಪರಿಗಣಿಸಿದೆ. ರಾಜ್ಯ ಸರ್ಕಾರ 1 ಕೋಟಿ 20 ಲಕ್ಷ ಕುಟುಂಬಗಳನ್ನ ಯೋಜನೆಯ ವ್ಯಾಪ್ತಿಗೆ ತಂದಿರುವುದರಿಂದ ಬಹುತೇಕ 70 ವರ್ಷ ಮೇಲ್ಪಟ್ಟವರು ಯೋಜನೆಯ ಲಾಭ ಪಡೆಯಬಹುದಾಗಿದೆ.. ಈ ಎಲ್ಲ ವಿಚಾರಗಳ ಕುರಿತು ಕೇಂದ್ರ ಸರ್ಕಾರದಿಂದ ಸ್ಪಷ್ಟ ಉತ್ತರ ಸಿಕ್ಕ ಬಳಿಕ ವಯೋ ವಂದನ ಯೋಜನೆಯನ್ನ ರಾಜ್ಯ ಅನುಷ್ಠಾನಗೊಳಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.
Mangalore Dinesh Gundu Rao in belthandy, assures of medical development in govt hosiptals.
16-04-25 11:03 pm
Bangalore Correspondent
ಒಂದನೇ ತರಗತಿಗೆ ಪ್ರವೇಶ ; ಈ ವರ್ಷಕ್ಕೆ ಮಾತ್ರ ಮಕ್ಕಳ...
16-04-25 09:07 pm
Bigg Boss Kannada, Rajath arrested: ರೀಲ್ಸ್ ಶೋ...
16-04-25 06:42 pm
CM Siddaramaiah, Lokayukta, Muda: ಸಿಎಂ ಸಿದ್ದರ...
15-04-25 08:44 pm
Kannada Journalist S K Shyamsundar Death: ಹಿರ...
15-04-25 12:51 pm
16-04-25 03:54 pm
HK News Desk
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
16-04-25 10:58 pm
Mangalore Correspondent
Mangalore Traffic diversion, Anti Waqf bill p...
16-04-25 08:22 pm
Asif Apatbandava, Rauf Bengre Honey Trap, Man...
16-04-25 02:02 pm
Panambur Bike Accident, Mangalore: ಪಣಂಬೂರಿನಲ್...
16-04-25 01:29 pm
NIA, Praveen Nettaru: ಪ್ರವೀಣ್ ನೆಟ್ಟಾರು ಕೊಲೆ ಪ...
15-04-25 09:57 pm
15-04-25 10:24 pm
HK News Desk
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm