ಬ್ರೇಕಿಂಗ್ ನ್ಯೂಸ್
23-01-25 11:03 pm Mangalore Correspondent ಕರಾವಳಿ
ಮಂಗಳೂರು, ಜ.23: ರಾಜ್ಯದಲ್ಲಿ ಕ್ರೈಮ್ ರೇಟ್ ಅತಿಯಾಗಿದ್ದು, ಮಹಿಳೆಯರು, ಹೆಣ್ಮಕ್ಕಳಿಗೆ ರಕ್ಷಣೆ ಇಲ್ಲದಾಗಿದೆ. ಕಾನೂನು ಸುವ್ಯವಸ್ಥೆಯೇ ಕುಸಿದು ಹೋಗಿದೆ. ರಾಜ್ಯ ಸರ್ಕಾರದ ವೈಫಲ್ಯದ ಬಗ್ಗೆ ಮುಂದಿನ ಲೋಕಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದಲ್ಲಿ ಕುಣಿಕೆ ಬಿಗಿಯಾಗಿದ್ದು, ಇಡಿ, ಐಟಿ, ಸಿಬಿಐ ಎಲ್ಲ ಕಡೆಯಿಂದಲೂ ತನಿಖೆ ತೀವ್ರಗೊಂಡಿದೆ. ಆದರೂ ತಾನೇನೂ ತಪ್ಪು ಮಾಡಿಲ್ಲ ಎಂದು ವಾದಿಸುತ್ತಿದ್ದಾರೆ. ಇಡಿಯವರು 154 ಮುಡಾ ಸೈಟ್ ಗಳನ್ನು ಜಪ್ತಿ ಮಾಡಿದರೂ, ಅಲ್ಲೇನೂ ತಪ್ಪೇ ಆಗಿಲ್ಲ ಎಂದು ಕಾಂಗ್ರೆಸ್ ಸಚಿವರು ಹೇಳುತ್ತಿದ್ದಾರೆ. ಲೋಕಾಯುಕ್ತವನ್ನು ತನ್ನ ಕಪಿಮುಷ್ಟಿಯಲ್ಲಿಟ್ಟುಕೊಂಡು ಕುಣಿಸುವ ಕೆಲಸ ಮಾಡುತ್ತಿದ್ದಾರೆ. ಇದೊಂದು ಭಂಡ, ದಗಲ್ಬಾಜಿ ಸರ್ಕಾರವಾಗಿದೆ.
2023-24ರ ಒಂದು ವರ್ಷದಲ್ಲಿ 553 ರೇಪ್ ಕೇಸ್ ಆಗಿದ್ದು, ಈ ಪೈಕಿ 178 ಕೇಸುಗಳು ಬೆಂಗಳೂರಿನಲ್ಲೇ ಆಗಿವೆ. ಹೆಣ್ಮಕ್ಕಳ ಮೇಲಿನ ಕಿರುಕುಳ ನೀಡಿರುವ 6042 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 1321 ಬೆಂಗಳೂರಿನಲ್ಲೇ ಇವೆ. ಹೀಗಾದರೆ ರಾಜ್ಯದ ಸ್ಥಿತಿಯೇನು ಎನ್ನುವುದನ್ನು ಜನತೆಯ ಮುಂದಿಡಬೇಕಾಗಿದೆ ಎಂದು ಹೇಳಿದರು.
ಇದೇ ವೇಳೆ, ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಬಗ್ಗೆ ಉಲ್ಲೇಖಿಸಿದ ಶಾಸಕ ಭರತ್ ಶೆಟ್ಟಿ, ದರೋಡೆಯನ್ನು ಯಾರೋ ದೂರದವರು ಇಲ್ಲಿ ಬಂದು ಮಾಡಲು ಸಾಧ್ಯವಿಲ್ಲ. ಇಲ್ಲಿನ ಸ್ಥಳೀಯರೇ ಕೃತ್ಯ ನಡೆಸಿದ್ದಾರೆ. ರಾಜಕೀಯ ಪಕ್ಷದವರೇ ಈ ಕೃತ್ಯ ಮಾಡಿಸಿದ್ದಾರೆ. ವಿಧಾನಸಭೆ ಅಧ್ಯಕ್ಷರ ಕ್ಷೇತ್ರದಲ್ಲಿ ಕೃತ್ಯ ನಡೆದಿದ್ದು, ರಾಜ್ಯದ ಆಡಳಿತ ಸ್ಥಿತಿಯನ್ನು ತೋರಿಸುತ್ತಿದೆ. ಮುಡಾದಲ್ಲಿ ಕಾಂಗ್ರೆಸ್ ಪುಢಾರಿಗಳು ಆಡಳಿತ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಯಾವುದೇ ಇಲಾಖೆಗೂ, ನಿಗಮಕ್ಕೂ ಅನುದಾನ ಇಲ್ಲ. ಶೂನ್ಯ ಅನುದಾನದಿಂದಾಗಿ ಅಭಿವೃದ್ಧಿ ಕೆಲಸಗಳೇ ಆಗುತ್ತಿಲ್ಲ ಎಂದು ದೂರಿದರು.
ಪಕ್ಷದ ಕಾರ್ಯಕರ್ತನ ಜೊತೆಗೆ ವಾಗ್ವಾದ ಎಂಬ ಕುರಿತ ಆರೋಪದ ಬಗ್ಗೆ ಸ್ಪಷ್ಟನೆ ನೀಡಿದ ಶಾಸಕ ವೇದವ್ಯಾಸ ಕಾಮತ್, ಇದನ್ನೆಲ್ಲ ಮಾಧ್ಯಮಗಳಲ್ಲಿ ಸುದ್ದಿ ಮಾಡುತ್ತಾರೆಯೇ ಎಂಬುದೇ ಚೋದ್ಯವಾಗಿದೆ. ಎಲ್ಲಿಯೋ ಬೆಂಕಿ ಬಿದ್ದಾಗ ಕೆಲವರು ಬೀಡಿ ಹೊತ್ತಿಸಿ ಚಳಿ ಕಾಯಿಸುತ್ತಾರೆ. ಅದೇ ಸ್ಥಿತಿಯಾಗಿದೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಸಂಸದರು, ನಾವೆಲ್ಲ ಒಟ್ಟಿಗಿದ್ದೇವೆ. ಗಟ್ಟಿಯಾಗಿದ್ದೇವೆ ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪ್ರೇಮಾನಂದ ಶೆಟ್ಟಿ ಇದ್ದರು.
No safety for women in Karnataka Mp Brijesh Chowta slams congress gov after attack on saloon in Mangalore.
17-01-26 05:53 pm
HK News Desk
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm