ಬ್ರೇಕಿಂಗ್ ನ್ಯೂಸ್
24-01-25 09:02 pm Mangalore Correspondent ಕರಾವಳಿ
ಮಂಗಳೂರು, ಜ.24: ಮಂಗಳೂರು ನಗರದಲ್ಲಿ ಯುನಿಸೆಕ್ಸ್ ಸೆಲೂನ್ ಹೆಸರಲ್ಲಿ ಅಕ್ರಮ ಚಟುವಟಿಕೆ, ಅನೈತಿಕ ದಂಧೆ ನಡೆಯುತ್ತಿದ್ದು, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದು ಪರಿಷತ್ ಮತ್ತು ದುರ್ಗಾವಾಹಿನಿ ಘಟಕದ ಸದಸ್ಯರು ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಆಯುಕ್ತರು, ಮೇಯರ್ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರಿಗೆ ಮನವಿ ಕೊಟ್ಟು ಆಗ್ರಹ ಮಾಡಿದ್ದಾರೆ.
ಯುನಿಸೆಕ್ಸ್ ಸೆಲೂನ್ ಹೆಸರಲ್ಲಿ ಅನೈತಿಕ ದಂಧೆ ನಡೆಯುತ್ತಿದ್ದು ಇದಕ್ಕೆ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಕೇಳಿಬರುತ್ತಿದೆ. ಸಮಾಜದ ಸ್ವಾಸ್ಥ್ಯ ರಕ್ಷಣೆಗಾಗಿ ಇಂತಹ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ಅಂತಹ ಯುನಿಸೆಕ್ಸ್ ಸೆಲೂನ್ ಗಳ ಪರವಾನಿಗೆ ರದ್ದುಪಡಿಸಬೇಕೆಂದು ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ್, ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ, ಜಿಲ್ಲಾ ಸಂಯೋಜಕ್ ನವೀನ್ ಮೂಡುಶೆಡ್ಡೆ, ಜಿಲ್ಲಾ ಸಂಯೋಜಕಿ ಶ್ವೇತಾ ಅದ್ಯಪಾಡಿ ಆಗ್ರಹ ಮಾಡಿದ್ದಾರೆ.
ಇದೇ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿರುವ ಶಾಸಕ ವೇದವ್ಯಾಸ ಕಾಮತ್, ಅಕ್ರಮವಾಗಿ ನಡೆಯುತ್ತಿರುವ ಯುನಿಸೆಕ್ಸ್ ಸೆಲೂನ್ ಗಳ ಲೈಸನ್ಸ್ ರದ್ದುಪಡಿಸಬೇಕು. ಕಾಂಗ್ರೆಸ್ ಸರ್ಕಾರದಲ್ಲಿ ಇಂತಹ ಅಕ್ರಮ ದಂಧೆಗಳಿಗೆ ಅವಕಾಶ ನೀಡುತ್ತಿರುವುದು ಮತ್ತೊಂದು ರೀತಿಯ ಭ್ರಷ್ಟಾಚಾರಕ್ಕೆ ಕಾರಣವಾಗುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತಕ್ಕೂ ಕಠಿಣ ಕ್ರಮಕ್ಕೆ ಆಗ್ರಹ ಮಾಡುತ್ತೇನೆ ಎಂದು ಹೇಳಿದ್ದಾರೆ.
Mangalore Vhp demands closure of illegal spa and saloon in Mangalore, visits MLA vedavyas Kamath to take action after attack on saloon at bejai over illegal activities.
04-04-25 12:00 pm
Bangalore Correspondent
MLC Vishwanath, Siddaramaiah: ಫ್ರೀ ಬಸ್ ಕೊಟ್ಟ...
04-04-25 10:28 am
Mandya Mysuru Bangalore Accident, KSRTC, Car:...
03-04-25 09:44 pm
Hubballi student suicide attempt: ಯುವತಿಯ ಖಾಸಗ...
02-04-25 10:48 pm
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
04-04-25 12:44 pm
HK News Desk
Mangalore MP Brijesh Chowta: ನಿವೃತ್ತ ಸೈನಿಕರ ಅ...
03-04-25 11:10 pm
Waqf Bill, Amit Shah; ಸುದೀರ್ಘ ಚರ್ಚೆ ಬಳಿಕ ಸಂಸತ...
03-04-25 01:04 pm
ವಕ್ಫ್ ತಿದ್ದುಪಡಿ ವಿಧೇಯಕ ಸಂಸತ್ತಿನಲ್ಲಿ ಮಂಡನೆ ; ವ...
02-04-25 07:35 pm
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
04-04-25 01:39 pm
Mangalore Correspondent
Mangalore Police, Inspector Balakrishna: ಪ್ರಕ...
03-04-25 10:14 pm
Mangalore Court, Lawyers Protest, Judge: ಜಡ್ಜ...
03-04-25 04:04 pm
Belthangady, Head Constable Praveen, Cm Medal...
03-04-25 03:09 pm
Sdpi Protest Mangalore: ವಕ್ಫ್ ತಿದ್ದುಪಡಿ ಮಸೂದೆ...
02-04-25 11:02 pm
04-04-25 03:03 pm
Mangalore Correspondent
Kalaburagi Murder, Three killed: ಕೌಟುಂಬಿಕ ಕಲಹ...
03-04-25 05:01 pm
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm