ಬ್ರೇಕಿಂಗ್ ನ್ಯೂಸ್
25-01-25 07:00 pm Mangalore Correspondent ಕರಾವಳಿ
ಮಂಗಳೂರು, ಜ 25: ವೃದ್ಧ ದಂಪತಿ ಕೊಲೆ ಮಾಡಿ ಮನೆಯಲ್ಲಿದ್ದ ಚಿನ್ನ, ನಗದು ಕದ್ದೊಯ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ಮತ್ತು 10 ವರ್ಷಗಳ ಸಜೆ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಗದಗ ಜಿಲ್ಲೆಯ ಬಿ.ಸಿ.ಕೇರಿ ನಿವಾಸಿ ರಾಜು ಕಲ್ಲವಡ್ದರ್ ಶಿಕ್ಷೆಗೊಳಗಾದ ಅಪರಾಧಿ. ಈತ ಬೆಳ್ತಂಗಡಿಯ ನೆರಿಯಾ ಗ್ರಾಮದ ಬಾಂಜಾರು ಮಲೆ ಎಂಬಲ್ಲಿ ಡ್ಯಾಂ ನಿರ್ಮಾಣಕ್ಕೆ ಕೂಲಿ ಕೆಲಸ ಮಾಡುತ್ತಿದ್ದ. 2016ರ ನವೆಂಬರ್ 10ರಂದು ರಾತ್ರಿ 11ರಿಂದ ಬೆಳಗಿನ ಜಾವ 3ರ ಮಧ್ಯೆ ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಕಲೇರಿಕಲ್ ಎಂಬಲ್ಲಿ ವಾಸವಿದ್ದ ವೃದ್ಧ ದಂಪತಿ ವರ್ಕಿ ಕೆ.ವಿ.(85) ಮತ್ತು ಎಲಿಕುಟ್ಟಿ (80) ಎಂಬವರ ಮನೆಗೆ ಬಂದಿದ್ದ.
ಬಳಿಕ ಮೂಗನಂತೆ ನಟಿಸಿ, ಕುಡಿಯಲು ನೀರು ಕೇಳಿದ್ದಾನೆ. ಆ ಮೇಲೆ ದಾರಿ ತೋರಿಸಬೇಕು ಎಂದು ನೆಪವೊಡ್ಡಿದ್ದಾನೆ. ಅದರಂತೆ ವರ್ಕಿ ಕೆ.ವಿ. ಅವರು ರಾಜುವಿಗೆ ಕತ್ತಲೆಯಲ್ಲಿ ಟಾರ್ಚ್‌ಲೈಟ್ ಮೂಲಕ ದಾರಿ ತೋರಿಸುತ್ತಾ ಮುಂದೆ ಹೋಗಿದ್ದಾರೆ. ಈ ವೇಳೆ ಮನೆಯಿಂದ ಸುಮಾರು 70 ಮೀ. ದೂರದಲ್ಲಿ ಆತ ವರ್ಕಿಯವರಿಗೆ ಉರುಗೋಲಿನಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದಾನೆ. ಬಳಿಕ ಉಟ್ಟಿದ್ದ ಲುಂಗಿಯಿಂದಲೇ ಅವರ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದ.
ನಂತರ ಮನೆಯೊಳಗೆ ಪ್ರವೇಶಿಸಿ ಸೊತ್ತುಗಳನ್ನು ಜಾಲಾಡಿದ್ದಾನೆ. ಇದರಿಂದ ಎಚ್ಚರಗೊಂಡ ಎಲಿಕುಟ್ಟಿಯವರಿಗೂ ಆರೋಪಿಯು ಮರದ ದೊಣ್ಣೆಯಿಂದ ಹಲ್ಲೆ ನಡೆಸಿ, ಬಟ್ಟೆಯಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ. ಬಳಿಕ ಮನೆಯ ಗೋದ್ರೇಜ್, ಕಪಾಟುಗಳ ಬಾಗಿಲು ಮುರಿದು 25 ತೊಲ ಚಿನ್ನ ಹಾಗೂ ನಗದು ಸೇರಿದಂತೆ ಅಂದಾಜು 4,50,000 ರೂ.ಗಳನ್ನು ಕದ್ದೊಯ್ದಿದ್ದ.
ಈ ಪ್ರಕರಣವನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ಅಂದಿನ ಪೊಲೀಸ್ ಉಪಾಧೀಕ್ಷಕ ರಾಹುಲ್ ಕುಮಾರ್ ಆರೋಪಿ ಬಂಧಿಸಿ ದೋಚಿದ ಸೊತ್ತುಗಳನ್ನು ವಶಪಡಿಸಿಕೊಂಡು ಭಾಗಶಃ ತನಿಖೆ ಪೂರೈಸಿದ್ದರು. ಪ್ರಕರಣದ ಮುಂದುವರಿದ ತನಿಖೆಯನ್ನು ಅಂದಿನ ಪೊಲೀಸ್ ಉಪಾಧೀಕ್ಷಕ ಭಾಸ್ಕರ್ ರೈ ಎನ್.ಜಿ. ನಡೆಸಿ ಒಟ್ಟು 51 ಸಾಕ್ಷಿದಾರರನ್ನು ವಿಚಾರಣೆ ಮಾಡಿದ್ದರು. ಬಳಿಕ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 302, 392 ಅಡಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
2018ರ ನವೆಂಬರ್ 13ರಂದು ಪ್ರಕರಣದ ವಿಚಾರಣೆ ಆರಂಭಗೊಂಡಿತ್ತು. ಅಭಿಯೋಜನೆಯ ಪರ ಒಟ್ಟು 38 ಸಾಕ್ಷಿದಾರರನ್ನು ವಿಚಾರಣೆ ಮಾಡಲಾಗಿತ್ತು. ಹಿಂದಿನ ಸರ್ಕಾರಿ ಅಭಿಯೋಜಕ ಶೇಖರ ಶೆಟ್ಟಿ ಕೆಲವು ಸಾಕ್ಷಿದಾರರನ್ನು ವಿಚಾರಣೆ ಮಾಡಿದ್ದರು. 2021ರಿಂದ ಉಳಿದ ಸಾಕ್ಷಿದಾರರನ್ನು ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ ನಾಯಕ್ ವಿಚಾರಣೆ ಮಾಡಿ, ವಾದ ಮಂಡಿಸಿದ್ದಾರೆ.
ವಿಚಾರಣೆ ಮುಗಿಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯದ ನ್ಯಾಯಾಧೀಶೆ ಪ್ರೀತಿ ಕೆ.ಪಿ. ಪ್ರಕರಣದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ, ಆರೋಪಿತ ತಪ್ಪಿತಸ್ಥನೆಂದು ತೀರ್ಪು ನೀಡಿದ್ದಾರೆ. ಅದರಂತೆ ಆರೋಪಿಗೆ ಭಾ.ದಂ.ಸಂ ಕಲಂ 392ಕ್ಕೆ 10 ವರ್ಷಗಳ ಕಾಲ ಕಠಿಣ ಸಜೆ ಹಾಗೂ 10 ಸಾವಿರ ರೂ. ದಂಡ ವಿಧಿಸಲಾಗಿದೆ. ಒಂದು ವೇಳೆ, ದಂಡ ಪಾವತಿಸಲು ವಿಫಲನಾದರೆ 3 ತಿಂಗಳ ಕಠಿಣ ಸಜೆಯನ್ನು ಅನುಭವಿಸಬೇಕು. ಭಾ.ದಂ.ಸಂ ಕಲಂ 302ರಡಿ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ಹಾಗೂ ದಂಡ ಪಾವತಿಸಲು ವಿಫಲನಾದಲ್ಲಿ 3 ತಿಂಗಳ ಕಠಿಣ ಸಜೆಯನ್ನು ವಿಧಿಸಿ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ.
ಈ ಎರಡು ಶಿಕ್ಷೆಗಳನ್ನು ಒಂದರ ನಂತರ ಒಂದರಂತೆ ಅನುಭವಿಸಲು ಆದೇಶಿಸಲಾಗಿದೆ. ಅಪರಾಧಿ ದಸ್ತಗಿರಿಯಾದ ಕಾಲದಿಂದ ಈವರೆಗೂ ನ್ಯಾಯಾಂಗ ಬಂಧನದಲ್ಲಿರುವ ಅವಧಿಯನ್ನು ಕಡಿತಗೊಳಿಸಿ, ಉಳಿದ ಅವಧಿಗೆ ಕಠಿಣ ಸಜೆ ಅನುಭವಿಸಲು ಆದೇಶ ಹೊರಡಿಸಲಾಗಿದೆ.
2016 murder of aged couple in Belthangady, accused gets life imprisonment by Mangalore court. Accused native of Gadag who was working as labourer in Belthangady murdered couple and stole their cash and gold in 2016.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm