ಬ್ರೇಕಿಂಗ್ ನ್ಯೂಸ್
27-01-25 10:57 pm Mangalore Correspondent ಕರಾವಳಿ
ಮಂಗಳೂರು, ಜ.27: ಪ್ರಕರಣ ಒಂದರಲ್ಲಿ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದ ಸ್ಕೂಟರ್ ಅನ್ನು ಬಿಡುಗಡೆ ಮಾಡಲು ಕೋರ್ಟ್ ಆದೇಶ ಆಗಿದ್ದರೂ ಬಿಡುಗಡೆ ಮಾಡಬೇಕಿದ್ದರೆ 5 ಸಾವಿರ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಹಮ್ಮದ್ ಶರೀಫ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ವ್ಯಕ್ತಿಯೊಬ್ಬರಿಗೆ ಸ್ಕೂಟರ್ ಬಿಟ್ಟು ಕೊಡಬೇಕಿದ್ದರೆ 5 ಸಾವಿರ ರೂ. ಕೊಡಬೇಕೆಂದು ಮಹಮ್ಮದ್ ಶರೀಫ್ ಹೇಳಿದ್ದು, ಅವರು ಹಣ ಕಡಿಮೆ ಮಾಡುವಂತೆ ಕೇಳಿಕೊಂಡಾಗ ಠಾಣೆಯ ಬರಹಗಾರ್ತಿ ನಾಗರತ್ನ ಎಚ್.ಸಿ ಅವರನ್ನು ಭೇಟಿ ಮಾಡಲು ತಿಳಿಸಿದ್ದರು. ಅದರಂತೆ, ನಾಗರತ್ನ ಬಳಿ ಹೋದಾಗ ಬೈದು 3 ಸಾವಿರ ಲಂಚ ನೀಡುವಂತೆ ಹೇಳಿದ್ದಾರೆ. ಕಾನೂನು ಪ್ರಕಾರ ಮಾಡಬೇಕಿದ್ದ ಸರ್ಕಾರಿ ಕೆಲಸಕ್ಕೆ ಲಂಚ ನೀಡಲು ಒಪ್ಪದ ಫಿರ್ಯಾದಿ ವ್ಯಕ್ತಿ ನೇರವಾಗಿ ಲೋಕಾಯುಕ್ತ ಗಮನಕ್ಕೆ ತಂದಿದ್ದಾರೆ.
ಲೋಕಾಯುಕ್ತ ಠಾಣೆಯಲ್ಲಿ ಮಹಮ್ಮದ್ ಶರೀಫ್ ಹಾಗೂ ನಾಗರತ್ನ ವಿರುದ್ಧ ಪ್ರಕರಣ ದಾಖಲಿಸಿದ ಅಧಿಕಾರಿಗಳು ಜ.27ರಂದು ಟ್ರಾಪ್ ಮಾಡಿದ್ದು, ಮಹಮ್ಮದ್ ಶರೀಫ್ ಹಾಗೂ ಸಿಬಂದಿ ಪ್ರವೀಣ್ ನಾಯ್ಕ ಮೂರು ಸಾವಿರ ರೂ. ಲಂಚದ ಹಣ ಸ್ವೀಕರಿಸುವಾಗಲೇ ಬಲೆಗೆ ಬಿದ್ದಿದ್ದಾರೆ. ಆರೋಪಿತ ಅಧಿಕಾರಿ ಮತ್ತು ಸಿಬಂದಿಯನ್ನು ಲೋಕಾಯುಕ್ತ ತಂಡ ವಶಕ್ಕೆ ಪಡೆದು ತನಿಖೆ ಕೈಗೊಂಡಿದೆ. ಲೋಕಾಯುಕ್ತ ಪ್ರಭಾರ ಎಸ್ಪಿ ಡಾ.ನಂದಿನಿ ಬಿ.ಎನ್, ಡಿವೈಎಸ್ಪಿ ಡಾ.ಗಾನ ಪಿ.ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ, ಚಂದ್ರಶೇಖರ್ ಕೆ.ಎನ್, ಉಡುಪಿ ಪೊಲೀಸ್ ಠಾಣೆಯ ನಿರೀಕ್ಷಕ ಮಂಜುನಾಥ ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿದ್ದರು.
Mangalore North police station traffic inspector Muhammad Sharief caught by lokayukta for taking bribe for releasing a two wheeler even after court order.
17-01-26 05:53 pm
HK News Desk
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm