ಬ್ರೇಕಿಂಗ್ ನ್ಯೂಸ್
01-02-25 02:32 pm Mangalore Correspondent ಕರಾವಳಿ
ಮಂಗಳೂರು, ಫೆ.1: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಕರ್ನಾಟಕ- ಕೇರಳ ಗಡಿಭಾಗದ ಅಜ್ಜಿನಡ್ಕ ಎಂಬಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾಗ ಆರೋಪಿ ಮುರುಗನ್ ಡಿ ದೇವರ್ ಕಾಲಿಗೆ ಗುಂಡು ಹಾರಿಸಿದ್ದಾರೆ.
ದರೋಡೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮುರುಗನ್ ದೇವರ್ ಮತ್ತು ಯೋಶುವಾ ರಾಜೇಂದ್ರನ್ ಅವರನ್ನು ತಮಿಳುನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಲಾಗಿತ್ತು. ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಫೆ.3ರ ವರೆಗೆ ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದರು. ಇಂದು ಮಧ್ಯಾಹ್ನ ಸ್ಥಳ ಮಹಜರು ಉದ್ದೇಶಕ್ಕಾಗಿ ಕರೆದೊಯ್ದಿದ್ದಾಗ ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ, ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ಫೈರಿಂಗ್ ಮಾಡಿದ್ದು ಕಾಲಿಗೆ ಗುಂಡೇಟು ಬಿದ್ದಿದೆ. ಸದ್ಯ ಗಾಯಾಳು ಆರೋಪಿಯನ್ನು ದೇರಳಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಯಲ್ಲಿ ಪೊಲೀಸ್ ಸಿಬ್ಬಂದಿ ಮಂಜುನಾಥ್ ಎಂಬವರಿಗೆ ಗಾಯವಾಗಿದೆ. ಮಂಜುನಾಥ್ ಮೇಲೆ ಹಲ್ಲೆ ನಡೆಸಿ ಮುರುಗನ್ ಪರಾರಿಯಾಗಲು ಯತ್ನಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ನಾಲ್ಕೇ ದಿನದಲ್ಲಿ ಕಣ್ಣನ್ ಮಣಿಯನ್ನು ಬಂಧಿಸಿ, ಸ್ಥಳ ಮಹಜರು ಕರೆದೊಯ್ದಿದ್ದಾಗಲೂ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದರು. ಇದೀಗ ಎರಡನೇ ಬಾರಿಗೆ ಗುಂಡು ಹಾರಿಸಿದ್ದಾರೆ.
ಅಜ್ಜಿನಡ್ಕದಲ್ಲಿ ರಿವಾಲ್ವರ್ ಎಸೆದು ಹೋಗಿದ್ದರಂತೆ !
ಪೊಲೀಸ್ ಮಾಹಿತಿ ಪ್ರಕಾರ, ಆರೋಪಿಗಳು ದರೋಡೆ ಕೃತ್ಯದ ಮೊದಲು ಅಜ್ಜಿನಡ್ಕ ಎಂಬಲ್ಲಿ ತಮ್ಮ ರಿವಾಲ್ವರನ್ನು ಎಸೆದು ಹೋಗಿದ್ದರು. ರಿವಾಲ್ವರ್ ಪತ್ತೆ ಮಾಡಲು ಪ್ರಮುಖ ಆರೋಪಿ ಮುರುಗನ್ ದೇವರ್ ನನ್ನು ಸ್ಥಳಕ್ಕೆ ಕರೆದೊಯ್ದಿದ್ದರು. ಈ ವೇಳೆ ಉಳ್ಳಾಲ ಠಾಣೆಯ ಪೇದೆ ಮಂಜುನಾಥ್ ಅವರ ಮರ್ಮಾಂಗಕ್ಕೆ ತುಳಿದು ಮುರುಗನ್ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ತಪ್ಪಿಸಲು ಯತ್ನಿಸಿದ ಆರೋಪಿ ಮುರುಗನ್ ಮೇಲೆ ಇನ್ಸ್ ಪೆಕ್ಟರ್ ಬಾಲಕೃಷ್ಣ ಫೈರಿಂಗ್ ಮಾಡಿದ್ದು ಕಾಲಿಗೆ ಗುಂಡೇಟು ಬಿದ್ದಿದೆ. ಸ್ಥಳದಲ್ಲಿ ರಿವಾಲ್ವರ್ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಮೆಟಲ್ ಡಿಟೆಕ್ಟರ್ ತಂಡವನ್ನೂ ಸ್ಥಳಕ್ಕೆ ಕರೆಸಿದ್ದಾರೆ.
Mangalore Kotekar bank robbery case, main accused Murgan D shot to leg while trying to attack on police at Adyanadka while police took him to spot mahajar.
01-02-25 05:12 pm
HK News Desk
ಕಾಂಗ್ರೆಸ್ ನಿಂದ ಬಿಜೆಪಿ ಹೋದವರಿಗೆ ಅಲ್ಲಿ ಯಾವ ಸ್ಥಾ...
31-01-25 10:10 pm
Sriramulu, BJP, B. Y. Vijayendra: ವಿಜಯೇಂದ್ರ ಸ...
31-01-25 08:03 pm
SC directive for patients, Karnataka Health D...
31-01-25 06:07 pm
Cheque bounce, Snehamahi Krishna: ಮುಡಾ ಹಗರಣ ಹ...
31-01-25 02:02 pm
01-02-25 02:10 pm
HK News Desk
Sonia Gandhi, president Murmu: ರಾಷ್ಟ್ರಪತಿ ಬಗ್...
31-01-25 09:10 pm
ಅಮೆರಿಕದಲ್ಲಿ ವಿಮಾನ ದುರಂತ ; ಪ್ರಯಾಣಿಕ ವಿಮಾನಕ್ಕೆ...
31-01-25 12:30 pm
1954ರ ಕುಂಭ ಮೇಳದಲ್ಲಿ ಪ್ರಧಾನಿ ನೆಹರು ಬಂದಿದ್ದಾಗಲೇ...
29-01-25 07:55 pm
Maha Kumbh stampede: ಕುಂಭಮೇಳದಲ್ಲಿ ಕಾಲ್ತುಳಿತ ;...
29-01-25 10:07 am
01-02-25 02:32 pm
Mangalore Correspondent
Mangalore builder Jitendra Kottary, prasanna...
31-01-25 11:05 pm
Mangalore Prasad attavar, RTI Snehamayi Krish...
31-01-25 10:49 pm
Ullal Panchyath, Mangalore; ಉಳ್ಳಾಲ ನಗರಸಭೆ ಸೀಲ...
31-01-25 09:49 pm
Prasad Attavar, RTI Snehamahi Krishna, Muda c...
31-01-25 03:57 pm
31-01-25 10:22 am
HK News Desk
Mangalore court, Rape, Crime: 15 ವರ್ಷದ ಬಾಲಕಿ...
30-01-25 11:37 am
Ankola, Mangalore Car, Cash, Crime: ಅಂಕೋಲಾದಲ್...
29-01-25 04:12 pm
Mangalore News, Crime, Court: 14 ವರ್ಷದ ಬಾಲಕಿಯ...
28-01-25 05:17 pm
Hubballi Murder, Crime: ಹುಬ್ಬಳ್ಳಿಯಲ್ಲಿ ಯುವಕನ...
28-01-25 11:03 am