ಬ್ರೇಕಿಂಗ್ ನ್ಯೂಸ್
07-02-25 10:13 pm Mangalore Correspondent ಕರಾವಳಿ
ಮಂಗಳೂರು, ಫೆ.7: ಕೋವಿಡ್ ಸೋಂಕು ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮದಿಂದಾಗಿ ಜನಸಾಮಾನ್ಯರಲ್ಲಿ ಹೃದಯ, ನರ ಮತ್ತು ಮೆದುಳು ಸಂಬಂಧಿ ಕಾಯಿಲೆಗಳಿಂದ ಹಠಾತ್ ಸಾವುಗಳು ಸಂಭವಿಸುತ್ತಿವೆ ಎಂಬುದಾಗಿ ಸಾರ್ವಜನಿಕರಲ್ಲಿ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಠಾತ್ ಸಾವುಗಳ ಕುರಿತಾಗಿ ಅಧ್ಯಯನ ನಡೆಸಲು ಆರೋಗ್ಯ ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.
ಹಠಾತ್ ಸಾವುಗಳ ಕುರಿತು ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸುವಂತೆ ಸಿಎಂ ಸೂಚಿಸಿದ್ದು, ಸಮಿತಿಯ ವರದಿ ಆಧರಿಸಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಆರೋಗ್ಯ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವಜನರಲ್ಲಿ ಹೃದಯಸ್ತಂಭನ, ಮೆದುಳು ಸಂಬಂಧಿ, ನರ ಸಂಬಂಧಿ ಕಾಯಿಲೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಹಠಾತ್ ಸಾವು ಸಂಭವಿಸುತ್ತಿರುವುದರಿಂದ ಅವಲಂಬಿತ ಕುಟುಂಬಗಳು ಆರ್ಥಿಕ, ಸಾಮಾಜಿಕ ಸಮಸ್ಯೆಗಳಿಗೆ ತುತ್ತಾಗುತ್ತಿದೆ. ಈ ಸಾವುಗಳು ಕೋವಿಡ್ ಸೋಂಕು ಅಥವಾ ಲಸಿಕೆಯ ಅಡ್ಡ ಪರಿಣಾಮದಿಂದ ಕಾರಣಕ್ಕೆ ಉಂಟಾಗುತ್ತಿರಬಹುದೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇಂತಹ ಸಾವುಗಳ ಬಗ್ಗೆ ಅಧ್ಯಯನ ನಡೆಸಿ ಹಠಾತ್ ಸಾವುಗಳನ್ನು ತಡೆಗಟ್ಟುವ ದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಮೇಲ್ ಸಂದೇಶದ ಮೂಲಕ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮರ್ಪಕ ಸಂಶೋಧನೆ ನಡೆಸಲು ತಜ್ಞರ ಸಮಿತಿಯನ್ನು ರಚಿಸಿ, ವರದಿಯನ್ನು ಆಧರಿಸಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
Karnataka will form an expert committee to study the cause of rising cases of sudden deaths among young people.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm