ಬ್ರೇಕಿಂಗ್ ನ್ಯೂಸ್
15-02-25 11:01 pm Mangalore Correspondent ಕರಾವಳಿ
ಉಳ್ಳಾಲ, ಫೆ.15: ಹಿಂದೂ ಸಮಾಜದ ಐಕ್ಯತೆ, ಲೋಕ ಕಲ್ಯಾಣಾರ್ಥವಾಗಿ ಮಂಗಳೂರು ವಿಶ್ವ ಹಿಂದೂ ಪರಿಷತ್ ವತಿಯಿಂದ "ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ" ಬೃಹತ್ ಪಾದಯಾತ್ರೆಯನ್ನು ಇದೇ ಮಾರ್ಚ್ 9ರ ಆದಿತ್ಯವಾರ ಬೆಳಗ್ಗೆ 6 ಗಂಟೆಗೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಿಂದ ಕುತ್ತಾರು ಕೊರಗಜ್ಜನ ಆದಿಕ್ಷೇತ್ರಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ವಿಹಿಂಪ ಜಿಲ್ಲಾ ಸಂಪರ್ಕ ಪ್ರಮುಖ್ ಪ್ರವೀಣ್ ಕುತ್ತಾರು ಹೇಳಿದರು.
ಕುತ್ತಾರು ಕೊರಗಜ್ಜನ ಆದಿ ಕ್ಷೇತ್ರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಕಳೆದ ನಾಲ್ಕು ವರ್ಷಗಳ ಹಿಂದೆ ಜಿಲ್ಲೆಯಾದ್ಯಂತ ಹಿಂದೂ ಧರ್ಮೀಯರ ನಂಬಿಕೆಯ ಕೊರಗಜ್ಜ ಸೇರಿದಂತೆ ಇತರ ಕಾರಣಿಕ ಕ್ಷೇತ್ರಗಳ ಕಾಣಿಕೆ ಹುಂಡಿಗಳಿಗೆ ಕಿಡಿಗೇಡಿಗಳು ಕಾಂಡೋಮ್ ಗಳನ್ನ ಹಾಕಿ ಅಪವಿತ್ರಗೊಳಿಸಿ ವಿಕೃತಿ ಮೆರೆದಿದ್ದರು. ವಿಕೃತಿ ಮೆರೆದಿದ್ದ ಕಿಡಿಗೇಡಿಗಳಿಗೆ ಕೊರಗಜ್ಜ ದೈವವೇ ಶಿಕ್ಷೆ ನೀಡುವಂತೆ ಸಂಕಲ್ಪ ನಡೆಸಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಸಹಸ್ರಾರು ಸಂಖ್ಯೆಯ ಭಕ್ತರು ಮಂಗಳೂರಿನ ಕದ್ರಿ ಮಂಜುನಾಥ ಕ್ಷೇತ್ರದಿಂದ ಕೊರಗಜ್ಜನ ಆದಿ ಕ್ಷೇತ್ರಕ್ಕೆ ಪಾದಯಾತ್ರೆ ನಡೆಸಿದ್ದರು. ಪಾದಯಾತ್ರೆ ನಡೆಸಿದ ಹತ್ತೇ ದಿವಸಗಳಲ್ಲಿ ಪವಾಡವೆಂಬಂತೆ ಹಿಂದೂ ಧಾರ್ಮಿಕ ಕ್ಷೇತ್ರಗಳನ್ನ ಮಲಿನಗೊಳಿಸಿದ್ದ ಕಿಡಿಗೇಡಿಗಳು ಸಿಕ್ಕಿ ಬಿದ್ದು ಜೈಲು ಪಾಲಾಗಿದ್ದರು. ದೈವ, ದೇವರುಗಳಿಗೆ ಅಪಚಾರ ಎಸಗಿದ್ದ ಕಿಡಿಗೇಡಿಗಳಲ್ಲಿ ಕೆಲವರು ಸತ್ತರೆ, ಮತ್ತೆ ಕೆಲವರು ಅನಾರೋಗ್ಯ ಪೀಡಿತರಾಗಿದ್ದಾರೆ.
ಈ ಬಾರಿ ಕೊರಗಜ್ಜನ ಆದಿ ಕ್ಷೇತ್ರಕ್ಕೆ ಐದನೇ ವರ್ಷದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಪಾದಯಾತ್ರೆ ಸಾಗಿ ಬರುವ ರಸ್ತೆಯ ನಿಗದಿತ ಪ್ರದೇಶಗಳಲ್ಲಿ ಭಕ್ತಾದಿಗಳಿಗೆ ಮಜ್ಜಿಗೆ, ತಂಪು ಪಾನೀಯ, ಲಘು ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಪಾದಯಾತ್ರೆ ನಡೆಸಿ ದನಿದ ಭಕ್ತಾದಿಗಳೆಲ್ಲರಿಗೂ ಕುತ್ತಾರು ಕೊರಗಜ್ಜನ ಕ್ಷೇತ್ರದ ಬಳಿ ಬಿಸಿ ಗಂಜಿ ಊಟದ ವ್ಯವಸ್ಥೆ ಮಾಡಲಾಗಿದೆ.
ಕೊರಗಜ್ಜನ ಕ್ಷೇತ್ರದ ಬಳಿ ನಡೆಯಲಿರುವ ಪಾದಯಾತ್ರೆ ಸಮಾರೋಪದ ಧಾರ್ಮಿಕ ಸಭೆಯಲ್ಲಿ ಖ್ಯಾತ ಅಂಕಣಕಾರ, ಚಿಂತಕ ಚಕ್ರವರ್ತಿ ಸೂಲಿಬೆಲೆಯವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಬೃಹತ್ ಪಾದಯಾತ್ರೆಯಲ್ಲಿ 25,000ಕ್ಕೂ ಮಿಕ್ಕಿದ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆ ಇದೆ. ಧಾರ್ಮಿಕ ಸಭೆಯ ಬಳಿಕ ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಹಾಗೂ ತಂಡದಿಂದ "ಶ್ರೀ ಸ್ವಾಮಿ ಕೊರಗಜ್ಜ" ಯಕ್ಷಗಾನ ತಾಳಮದ್ದಳೆ ನಡೆಯಲಿದೆ ಎಂದರು.
ಕುತ್ತಾರು ಕೊರಗಜ್ಜನ ಆದಿ ಕ್ಷೇತ್ರದ ಟ್ರಸ್ಟಿ ದೇವಿಪ್ರಸಾದ್ ಶೆಟ್ಟಿ, ವಿಶ್ವ ಹಿಂದು ಪರಿಷತ್ ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
5th year padayatra to koragajja adisthala kuthar in Mangalore. Chakravarti Sulibele will also be a part of this event.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm