ಬ್ರೇಕಿಂಗ್ ನ್ಯೂಸ್
18-02-25 12:36 pm Mangalore Correspondent ಕರಾವಳಿ
ಮಂಗಳೂರು, ಫೆ.18: ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು ಎನ್ನುವ ಬಗ್ಗೆ ನಮ್ಮದೇನು ಹಠ ಇಲ್ಲ, ರಿಕ್ವೆಸ್ಟ್ ಮಾತ್ರ. ನಾವು ಹೋಗಿ ಹೈಕಮಾಂಡ್ ಬಳಿ ಪ್ರಾರ್ಥನೆ ಮಾಡೋದು ಮಾತ್ರ. ಅದರ ಬಗ್ಗೆ ತೀರ್ಮಾನವನ್ನು ಹೈಕಮಾಂಡ್ ಮಾಡುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಪಕ್ಷದ ಕಾರ್ಯಕ್ರಮಕ್ಕಾಗಿ ಮಂಗಳೂರಿಗೆ ಆಗಮಿಸಿರುವ ಜಾರಕಿಹೊಳಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಹೈಕಮಾಂಡ್ ಬಳಿ ಹೇಳಲು ನಮ್ಮ ಪಕ್ಷದಲ್ಲಿ ಎಲ್ಲರೂ ಸ್ವತಂತ್ರರಿದ್ದಾರೆ. ಅಂತಿಮವಾಗಿ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದಿದ್ದಾರೆ. ಗೃಹ ಸಚಿವ ಡಾ.ಜಿ. ಪರಮೇಶ್ವರ್ ದೆಹಲಿ ಭೇಟಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ದೆಹಲಿ ಹೈಕಮಾಂಡ್ ಅಂದ್ರೆ ದೇವಸ್ಥಾನ ಇದ್ದ ಹಾಗೇ. ಅಲ್ಲಿಗೆ ಯಾರು ಬೇಕಿದ್ರೂ ಹೋಗಬಹುದು, ಯಾರು ಹೋಗೋದಕ್ಕೂ ನಿರ್ಬಂಧ ಇಲ್ಲ. ನಾನು ದೆಹಲಿ ಹೋದಾಗ ಪಕ್ಷ ಬೆಳೆಯಬೇಕು, ಮತ್ತೆ ಅಧಿಕಾರಕ್ಕೆ ಬರಬೇಕು ಅನ್ನೋದನ್ನ ಹೈಕಮಾಂಡ್ ದೇವಾಲಯದಲ್ಲಿ ಬೇಡಿಕೊಂಡಿದ್ದೇನೆ. ಎಲ್ಲರೂ ಹೋಗಿ ಅದನ್ನೇ ಬೇಡೋದು. ಸಣ್ಣ ಪುಟ್ಟ ವ್ಯತ್ಯಾಸಗಳು ಇದ್ದರೆ ಅದನ್ನ ಸರಿ ಮಾಡೋ ಪ್ರಾರ್ಥನೆ ಕೂಡಾ ಅಲ್ಲಿಯೇ ಆಗುತ್ತೆ ಎಂದರು.
ಸಚಿವ ರಾಜಣ್ಣ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಶೇಖರ್ ಹೈಕಮಾಂಡ್ ಗೆ ದೂರು ನೀಡಿದ್ದಾರೆಂಬ ವಿಚಾರದ ಬಗ್ಗೆ, ಕಾರ್ಯಾಧ್ಯಕ್ಷರು ಇಲ್ಲೇ ಇರುತ್ತಾರೆ, ರಾಜಣ್ಣರನ್ನ ಅವರೇ ಕರೆಸಿ ಚರ್ಚೆ ನಡೆಸಬಹುದಿತ್ತು. ಸಮಸ್ಯೆಗೆ ಇಲ್ಲಿಯೇ ಪರಿಹಾರ ಸಿಗುತ್ತಿತ್ತು. ದೆಹಲಿಗೆ ಹೋಗುವ ಅವಶ್ಯಕತೆ ಇರಲಿಲ್ಲ. ಕಾರ್ಯಾಧ್ಯಕ್ಷರ ಅಧೀನದಲ್ಲೇ ರಾಜಣ್ಣ ಇರುವಂತದ್ದು. ದೆಹಲಿಗೆ ಪತ್ರ ಬರೆಯುವ ಅವಶ್ಯಕತೆ ಇರಲಿಲ್ಲ ಎಂದರು.
ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿ ಎಂಬ ಡಿಕೆಶಿಯೇ ಹೇಳಿಕೆ ಕುರಿತಾಗಿ, ಅವರೇ ಹೇಳಿದ ನಂತ್ರ ಮತ್ತೆ ಚರ್ಚೆ ಮಾಡೋ ಅಗತ್ಯನೇ ಬರೋದಿಲ್ಲ ಎಂದರು. ಗೃಹಲಕ್ಷ್ಮಿ ಹಣ ಬಿಡುಗಡೆಯಾಗದ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಎರಡು ತಿಂಗಳಿನಿಂದ ಆಗಿಲ್ಲ, ಈಗ ಒಟ್ಟಿಗೇ ಬಿಡುಗಡೆ ಆಗುತ್ತೆ. ಈ ಹಿಂದೆಯೂ ಎರಡು ತಿಂಗಳಿಗೊಮ್ಮೆ ಬಿಡುಗಡೆ ಆಗುತ್ತಾ ಬಂದಿದೆ. ಒಟ್ಟಾರೆ ಹಣ ಕೂಡಿಸಿ ಕೊಡುತ್ತಿದ್ದೇವೆ, ಯೋಜನೆ ನಿಲ್ಲಿಸಿಲ್ಲ. ತಾತ್ಕಾಲಿಕ ತಡವಾಗಿದೆ, ಪೂರ್ತಿ ಕೊಡೋ ಪ್ರಯತ್ನ ಮಾಡ್ತೇವೆ ಎಂದರು.
ರಾಜ್ಯದಲ್ಲಿ ದಲಿತ ಸಮಾವೇಶ ನಡೆಸುವ ವಿಚಾರ ಸದ್ಯಕ್ಕೆ ಚರ್ಚೆ ಇಲ್ಲ. ಆ ಬಗ್ಗೆ ಖಚಿತವಾದಾಗ ಹೇಳ್ತೇನೆ. ಅದು ಗೃಹಸಚಿವ ಡಾ ಪರಮೇಶ್ವರ್ ನೇತೃತ್ವದಲ್ಲಿ ನಡೆಯುವ ಸಮಾವೇಶ. ಅವರು ಯಾವಾಗ ಹೇಳ್ತಾರೆ ಆವಾಗ ಸಮಾವೇಶ ನಡೆಯುತ್ತೆ ಎಂದು ಹೇಳಿದರು.
119 ಕೇಜಿ
ಮೊಹಮ್ಮದ್ ಶಬೀರ್
ಅಜಯ್, ಜೀವನ್ ಸಿಂಗ್, ಮನೀಷ್ ಪಾಂಡೆ
2021ರಲ್ಲಿ
We don't have any request to take DK Shivakumar fom KPCC president post says Satish Jarkiholi in Mangalore. High command is a temple for us and leaders keep visiting often.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm