ಬ್ರೇಕಿಂಗ್ ನ್ಯೂಸ್
23-02-25 03:20 pm Mangalore Correspondent ಕರಾವಳಿ
ಮಂಗಳೂರು, ಫೆ.23: ಪಿಕಪ್ ವಾಹನದ ಧಾವಂತಕ್ಕೆ ಹಿಂಬದಿಗೆ ಡಿಕ್ಕಿಯಾಗಿದ್ದರಿಂದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮೂವರು ಪಾದಚಾರಿಗಳ ಮೇಲೆ ಹರಿದಿದ್ದು ಓರ್ವ ಯುವಕ ಸಾವನ್ನಪ್ಪಿದ ಘಟನೆ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಸಿಂಧನೂರಿನ ದೀಪು ಗೌಡ(45) ಸಾವನ್ನಪ್ಪಿದ ವ್ಯಕ್ತಿ. ಘಟನೆಯಲ್ಲಿ ಕೊಪ್ಪಳ ಜಿಲ್ಲೆಯ ಕರಟಗಿಯ ಪ್ರದೀಪ್ ಕೊಲ್ಕಾರ್(35), ಮಂಗಳೂರಿನ ಕೋಡಿಕೆರೆ ನಿವಾಸಿ ನಾಗರಾಜ್(37) ಗಂಭೀರ ಗಾಯಗೊಂಡಿದ್ದಾರೆ. ಕುಳಾಯಿ ಹೆದ್ದಾರಿ ಬದಿಯ ಶಂಕರ ಭವನ ಹೋಟೆಲ್ ನಲ್ಲಿ ಮೂವರು ಊಟ ಮುಗಿಸಿಕೊಂಡು ರಾಹೆ 66 ದಾಟುತ್ತಿದ್ದಾಗ ಕಾರು ಜವರಾಯನಂತೆ ಬಂದೆರಗಿದೆ.

ಉಡುಪಿ ಕಡೆಯಿಂದ ಬಂದ KA-19-AA-0746 ನಂಬರ್‌ನ ಪಿಕಪ್ ವಾಹನ ಮುಂದಿನಿಂದ ಸಾಗುತ್ತಿದ್ದ ಕಾರಿನ ಹಿಂಭಾಗಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಇದರಿಂದ ಕಾರು ರಸ್ತೆಯ ಎಡ ಬದಿಗೆ ತಳ್ಳಲ್ಪಟ್ಟು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ದೀಪು ಗೌಡ, ಪ್ರದೀಪ್ ಮತ್ತು ನಾಗರಾಜ್ ಎಂಬವರಿಗೆ ಡಿಕ್ಕಿಯಾಗಿದೆ. ಈ ವೇಳೆ, ಪ್ರದೀಪ್ ಮತ್ತು ನಾಗರಾಜ್ ರಸ್ತೆಗೆ ಎಸೆಯಲ್ಪಟ್ಟರೆ, ದೀಪು ಗೌಡ ಅವರನ್ನು ಕಾರು ತಳ್ಳಿಕೊಂಡು ಸಾಗಿದೆ. ದೀಪು ಗೌಡ ತಲೆಗೆ ಮತ್ತು ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಪ್ರದೀಪ್ ಮತ್ತು ನಾಗರಾಜ್ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಬಗ್ಗೆ ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore accident at surathkal, Pickup van rams over pedestrians, two injured, 45 year old killed. The deceased dhas been identified as Deepu Gowda native of Raichur.
13-07-26 10:32 am
HK News Staffer
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 11:51 am
HK News Staffer
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm