ಬ್ರೇಕಿಂಗ್ ನ್ಯೂಸ್
25-02-25 12:24 pm Mangalore Correspondent ಕರಾವಳಿ
ಪುತ್ತೂರು, ಫೆ.25: ಸಿಸೇರಿಯನ್ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆಯ ಹೊಟ್ಟೆಯಲ್ಲೇ ಬಟ್ಟೆ ಉಳಿದುಕೊಂಡ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಉನ್ನತ ಮಟ್ಟದ ತನಿಖೆಗೆ ಆದೇಶ ಮಾಡಿದ್ದಾರೆ. ಇದರಂತೆ, ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ ನೇತೃತ್ವದಲ್ಲಿ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
ಸಿಸೇರಿಯನ್ ಮಾಡಿದ್ದ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಭೇಟಿಯಿತ್ತು ಅಲ್ಲಿನ ವೈದ್ಯರು ಮತ್ತು ಸಿಬಂದಿಯಿಂದ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ. ಮಹಿಳೆಗೆ ಶಸ್ತ್ರಚಿಕಿತ್ಸೆ ಮಾಡಿದ್ದ ಪ್ರಸೂತಿ ತಜ್ಞರು, ಅರಿವಳಿಕೆ ತಜ್ಞರು, ಸಿಸೇರಿಯನ್ ಸಂದರ್ಭ ಕರ್ತವ್ಯ ನಿರ್ವಹಿಸಿದ ತಂಡದ ಸದಸ್ಯರನ್ನು ವಿಚಾರಣೆಗೊಳಪಡಿಸಿ ಹೇಳಿಕೆ ಪಡೆದಿದ್ದಾರೆ. ಅಲ್ಲದೆ, ಮೂರು ತಿಂಗಳ ನಂತರ ಮಹಿಳೆಗೆ ಶಸ್ತ್ರಚಿಕಿತ್ಸೆ ಮಾಡಿ ಹೊಟ್ಟೆಯೊಳಗಿದ್ದ ಬಟ್ಟೆಯನ್ನು ತೆಗೆದಿದ್ದ ಪುತ್ತೂರಿನ ಮತ್ತೊಂದು ಖಾಸಗಿ ಆಸ್ಪತ್ರೆಗೂ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ. ಇದಲ್ಲದೆ, ಬಂಗಾರಡ್ಕದಲ್ಲಿರುವ ಮಹಿಳೆಯ ಮನೆಗೂ ಭೇಟಿಯಿತ್ತು ಅವರ ಹೇಳಿಕೆಯನ್ನೂ ಪಡೆದಿದ್ದಾರೆ.
ರಾಜ್ಯದ ಮುಖ್ಯ ಕಾರ್ಯದರ್ಶಿ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಉನ್ನತ ಮಟ್ಟದ ತನಿಖಾ ತಂಡವನ್ನು ರಚಿಸಿದ್ದಾರೆ. ತಂಡದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ, ಆರ್ ಸಿಎಚ್ ಅಧಿಕಾರಿ ಡಾ.ರಾಜೇಶ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ದೀಪಾ, ಪುತ್ತೂರು ತಾಲೂಕು ಆರೋಗ್ಯ ಅಧಿಕಾರಿ ಡಾ.ದೀಪಕ್ ರೈ ಮತ್ತು ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯರಾದ ಡಾ.ಯದುರಾಜ್ ಇದ್ದಾರೆ. ಮಾಧ್ಯಮ ವರದಿ ಗಮನಿಸಿ ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿ ತನಿಖೆಗೆ ಆದೇಶಿಸಿದ್ದಾರೆ. ಜಿಲ್ಲಾಧಿಕಾರಿಯವರ ಸೂಚನೆ ಮೇರೆಗೆ ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡಿದ್ದೇವೆ. ತನಿಖಾ ವರದಿಯನ್ನು ಸರಕಾರಕ್ಕೆ ಸಲ್ಲಿಸಲಿದ್ದೇವೆ ಎಂದು ಆರೋಗ್ಯಾಧಿಕಾರಿ ಡಾ.ಎಚ್ ಆರ್ ತಿಮ್ಮಯ್ಯ ತಿಳಿಸಿದ್ದಾರೆ.
ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ 2024ರ ನ.27ರಂದು ಈ ಘಟನೆ ನಡೆದಿದ್ದು ಬಾಣಂತಿ ಮಹಿಳೆ 3 ತಿಂಗಳ ನರಕಯಾತನೆ ಅನುಭವಿಸಿದ ಬಳಿಕ ಮತ್ತೊಂದು ಶಸ್ತ್ರಚಿಕಿತ್ಸೆ ನಡೆಸಿ ಹೊಟ್ಟೆಯೊಳಗಿದ್ದ ಬಟ್ಟೆಯನ್ನು ಹೊರ ತೆಗೆಯಲಾಗಿತ್ತು. ಸಂತ್ರಸ್ತ ಮಹಿಳೆಯ ಪತಿ ಗಗನ್ ದೀಪ್ ಪುತ್ತೂರಿನ ಖಾಸಗಿ ಆಸ್ಪತ್ರೆ ವೈದ್ಯರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.
ಸಂತ್ರಸ್ತ ಮಹಿಳೆಯ ಪತಿ ಗಗನ್ ದೀಪ್ ನೀಡಿರುವ ದೂರು ಆಧರಿಸಿ ಪುತ್ತೂರು ನಗರ ಠಾಣೆ ಪೊಲೀಸರು ಜಿಲ್ಲಾ ಮೆಡಿಕಲ್ ಬೋರ್ಡ್ ಗೆ ವರದಿ ಸಲ್ಲಿಸಿದ್ದಾರೆ. ಇನ್ಸ್ ಸ್ಪೆಕ್ಚರ್ ಜಾನ್ ಡಿಸೋಜ ಪ್ರತಿಕ್ರಿಯಿಸಿ, ಸುಪ್ರೀಂ ಕೋರ್ಟ್ ನಿರ್ದೇಶನ ಪ್ರಕಾರ ಕರ್ತವ್ಯ ನಿರತ ವೈದ್ಯರ ವಿರುದ್ಧ ದೂರು ಬಂದಾಗ ಮೆಡಿಕಲ್ ಬೋರ್ಡ್ ಗಮನಕ್ಕೆ ತರಬೇಕಾಗುತ್ತದೆ. ಅವರು ಪರಿಶೀಲಿಸಿ ನೀಡುವ ವರದಿ ಆಧಾರದಲ್ಲಿ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.
A six-member team of officials and doctors will inquire into alleged negligence of a private doctor from Puttur leaving a surgical mop inside the body of a woman following a caesarean section, said Dakshina Kannada District Health and Family Welfare Officer H.R. Thimmaiah.
20-07-25 08:35 pm
Bangalore Correspondent
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
20-07-25 10:35 pm
Mangalore Correspondent
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm