ಬ್ರೇಕಿಂಗ್ ನ್ಯೂಸ್
26-02-25 03:40 pm Mangalore Correspondent ಕರಾವಳಿ
ಮಂಗಳೂರು, ಫೆ.26 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಅವಿರತ ಪ್ರಯತ್ನಕ್ಕೆ ಯಶಸ್ಸು ಲಭಿಸಿದ್ದು, ದಶಕಗಳ ಪ್ರಮುಖ ಬೇಡಿಕೆಯಾಗಿರುವ ಮಂಗಳೂರು- ಕಬಕ ಪ್ಯಾಸೆಂಜರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ ರೈಲ್ವೇ ಮಂಡಳಿ ಅನುಮೋದನೆ ನೀಡಿದೆ. ಇದರಿಂದ ಇನ್ನುಮುಂದೆ ಮಂಗಳೂರು-ಪುತ್ತೂರು- ಸುಬ್ರಹ್ಮಣ್ಯ ನಡುವೆ ಪ್ರತಿದಿನ ಸಂಚರಿಸುವ ಪ್ರಯಾಣಿಕರು ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ಹೋಗುವ ಯಾತ್ರಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.
ಹೊಸ ವೇಳಾಪಟ್ಟಿ ಪ್ರಕಾರ ಮಂಗಳೂರು ಸೆಂಟ್ರಲ್- ಕಬಕ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು(56625) ಮುಂಜಾನೆ 4 ಗಂಟೆಗೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಕಬಕ-ಪುತ್ತೂರಿಗೆ ಮುಂಜಾನೆ 5.18ಕ್ಕೆ ತಲುಪಲಿದೆ. ಅಲ್ಲಿ ಅದು 2 ನಿಮಿಷ ನಿಲುಗಡೆಯಾಗಿ ಬೆಳಗ್ಗೆ 6.30ಕ್ಕೆ ಸುಬ್ರಹ್ಮಣ್ಯ ರಸ್ತೆಗೆ ಬಂದು ತಲುಪಲಿದೆ. ಅದೇ ರೀತಿ ಸುಬ್ರಹ್ಮಣ್ಯ- ಮಂಗಳೂರು(56626) ಪ್ಯಾಸೆಂಜರ್ ರೈಲು ಬೆಳಗ್ಗೆ 7ಕ್ಕೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು 7.48ಕ್ಕೆ ಕಬಕ-ಪುತ್ತೂರು ತಲುಪಲಿದೆ. ಅಲ್ಲಿ 2 ನಿಮಿಷ ನಿಲುಗಡೆಯಾಗಿ 9.30ಕ್ಕೆ ಮಂಗಳೂರು ಸೆಂಟ್ರಲ್‌ಗೆ ತಲುಪಲಿದೆ.
ಇನ್ನೊಂದೆಡೆ, ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು(56627) ಸಂಜೆ 5.45ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಸಂಜೆ 7.03ಕ್ಕೆ ಪುತ್ತೂರಿಗೆ ತಲುಪಲಿದೆ. ಬಳಿಕ ಎರಡು ನಿಮಿಷ ನಿಲುಗಡೆಯಾಗಿ ರಾತ್ರಿ 8.10ಕ್ಕೆ ಸುಬ್ರಹ್ಮಣ್ಯ ರಸ್ತೆಗೆ ತಲುಪಲಿದೆ. ಹಾಗೆಯೇ, ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಪ್ಯಾಸೆಂಜರ್ ರೈಲು(56628) ರಾತ್ರಿ 8.40ಕ್ಕೆ ಸುಬ್ರಹ್ಮಣ್ಯ ನಿಲ್ದಾಣದಿಂದ ಹೊರಟು ರಾತ್ರಿ 9.28ಕ್ಕೆ ಕಬಕ-ಪುತ್ತೂರಿಗೆ ತಲುಪಿ ಅಲ್ಲಿ 2 ನಿಲುಗಡೆಯಾಗಿ ರಾತ್ರಿ 11.10ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ. ನೈಋತ್ಯ ರೈಲ್ವೆ ಹಾಗೂ ದಕ್ಷಿಣ ರೈಲ್ವೇಯು ಅನುಕೂಲತೆ ಪರಿಶೀಲಿಸಿ ಆದಷ್ಟು ಬೇಗ ಈ ರೈಲು ವಿಸ್ತರಣೆ ಸೇವೆಯನ್ನು ಆರಂಭಿಸುವಂತೆ ರೈಲ್ವೆ ಮಂಡಳಿಯು ತನ್ನ ಆದೇಶದಲ್ಲಿ ಸೂಚಿಸಿದೆ.
ಸಂತಸ ವ್ಯಕ್ತಪಡಿಸಿದ ಕ್ಯಾ. ಚೌಟ
ಈ ರೈಲು ವಿಸ್ತರಣೆಗೆ ಮಂಜೂರಾತಿ ಲಭಿಸಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸಂಸದ ಕ್ಯಾ. ಬ್ರಿಜೇಶ್ ಚೌಟ, ಮಂಗಳೂರು ಸೆಂಟ್ರಲ್ -ಕಬಕ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯದ ವರೆಗೆ ವಿಸ್ತರಿಸಿರುವುದಕ್ಕೆ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಹಾಗೂ ರೈಲ್ವೆ ರಾಜ್ಯ ಖ್ಯಾತೆ ಸಚಿವರಾದ ವಿ. ಸೋಮಣ್ಣ ಹಾಗೂ ರೈಲ್ವೆ ಮಂಡಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.
ಮಂಗಳೂರು- ಪುತ್ತೂರು ಪ್ಯಾಸೆಂಜರ್ ರೈಲು ಸೇವೆಯನ್ನು ಯಾತ್ರಾರ್ಥಿಗಳು ಹಾಗೂ ಸ್ಥಳೀಯ ಜನರು- ಗ್ರಾಮೀಣ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸುಬ್ರಹ್ಮಣ್ಯ ರಸ್ತೆ ಸ್ಟೇಷನ್‌ಗೆ ವಿಸ್ತರಿಸಬೇಕೆಂಬುದು ಸುಮಾರು ಎರಡು ದಶಕಗಳ ಬೇಡಿಕೆಯಾಗಿತ್ತು. ಸಂಸದನಾದ ಬಳಿಕ ನಡೆದ ಸಂಸತ್ತಿನ ಮೊದಲ ಅಧಿವೇಶನದಲ್ಲೇ ಈ ರೈಲು ವಿಸ್ತರಣೆ ಬೇಡಿಕೆಯನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿ ರೈಲ್ವೆ ಸಚಿವರ ಗಮನಸೆಳೆದಿದ್ದೆ. ಇತ್ತೀಚೆಗಷ್ಟೇ ರೈಲ್ವೆ ಮಂಡಳಿ ಅಧ್ಯಕ್ಷರನ್ನು ಖುದ್ದು ಭೇಟಿಯಾಗಿ ಈ ಪ್ಯಾಸೆಂಜರ್ ರೈಲನ್ನು ಆದಷ್ಟು ಬೇಗ ಸುಬ್ರಹ್ಮಣ್ಯದ ವರೆಗೆ ವಿಸ್ತರಿಸಬೇಕೆಂದು ಮನವಿ ಸಲ್ಲಿಸಿದ್ದೆ. ಇದೀಗ ಕರಾವಳಿ ರೈಲ್ವೇ ಯಾತ್ರಿಕರಿಗೆ ಅನುಕೂಲವಾಗುವಂತೆ ಮಂಗಳೂರು- ಕಬಕ ಪುತ್ತೂರು ಪ್ಯಾಸೆಂಜರ್ ಟ್ರೈನ್ ಅನ್ನು ಸುಬ್ರಹ್ಮಣ್ಯ ರಸ್ತೆ ವರೆಗೆ ವಿಸ್ತರಿಸಿ ಪರಿಷ್ಕೃತ ವೇಳಾಪಟ್ಟಿಯನ್ನು ಕೂಡ ರೈಲ್ವೇ ಮಂಡಳಿ ಪ್ರಕಟಿಸಿರುವುದು ನಮ್ಮ ಜಿಲ್ಲೆಯ ಜನತೆ ಹಾಗೂ ಸಂಸದನ ನೆಲೆಯಲ್ಲಿ ನಮ್ಮೆಲ್ಲರ ಸಾಂಘಿಕ ಪ್ರಯತ್ನಕ್ಕೆ ಸಂದ ಜಯ ಎಂದು ಕ್ಯಾ. ಚೌಟ ಹೇಳಿದ್ದಾರೆ.
With the relentless efforts of Dakshina Kannada MP Capt Brijesh Chowta, the Railway Board has approved the extension of the Mangaluru-Kabaka Passenger train service to Subrahmanya— a long-standing demand spanning decades.
26-02-25 06:14 pm
Bangalore Correspondent
Minister Ishwara Khandre, Elephant Sanctuary...
25-02-25 10:30 pm
Belagavi Accident, Kumbh Mela: ಬಸ್ ಗೆ ಡಿಕ್ಕಿ...
24-02-25 01:36 pm
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
26-02-25 05:38 pm
HK News Desk
Corruption, Amit Shah, MK Stalin: ಕ್ಷೇತ್ರ ಪುನ...
26-02-25 05:11 pm
CBI raid, Gain Bitcoin: 6,600 ಕೋಟಿ ರೂ. ಕ್ರಿಸ್...
26-02-25 12:47 pm
Vijay Wardhan, UPSC story: Success story 35 ಬ...
24-02-25 10:14 pm
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
26-02-25 03:40 pm
Mangalore Correspondent
Urwa Police, Mangalore, Selfie, Suspend: ಸೈಬರ...
25-02-25 10:58 pm
C-Band Doppler Weather Radar, Mangalore: ಮಂಗಳ...
25-02-25 09:34 pm
Bantwal accident, Mangalore: ಚಾಲಕಿಯ ಧಾವಂತಕ್ಕೆ...
25-02-25 02:34 pm
Puttur doctor, C Section, Mangalore: ಸಿಸೇರಿಯನ...
25-02-25 12:24 pm
26-02-25 01:27 pm
HK News Desk
Urwa Police, Mangalore Crime, online Fraud: ಕ...
25-02-25 08:10 pm
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm