ಬ್ರೇಕಿಂಗ್ ನ್ಯೂಸ್
27-02-25 07:09 pm Mangalore Correspondent ಕರಾವಳಿ
ಉಳ್ಳಾಲ, ಫೆ.27 : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತನ್ನ ಅಧಿಕಾರವಧಿಯಲ್ಲಿ ನೀಡಿದ್ದ ಭಾಗ್ಯಲಕ್ಷ್ಮಿ, ಉಚಿತ ಬೈಸಿಕಲ್ ಮೊದಲಾದ ಜನಪರ ಯೋಜನೆಗಳನ್ನ ಜನರು ಇಂದಿಗೂ ಮರೆತಿಲ್ಲ. ಬಿಎಸ್ ವೈ ಮಾರ್ಗದರ್ಶನದಲ್ಲೇ ಅವರ ಸುಪುತ್ರ ಬಿ.ವೈ.ವಿಜಯೇಂದ್ರ ನಾಯಕತ್ವದಲ್ಲಿ ಮುಂದಿನ ದಿವಸಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು.
ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನದ ಪ್ರಯುಕ್ತ ರವೀಂದ್ರ ಶೆಟ್ಟಿ ಉಳಿದೊಟ್ಟು ನೇತೃತ್ವದಲ್ಲಿ ಉಳ್ಳಾಲ ತಾಲೂಕಿನ ಇತಿಹಾಸ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇರಳಕಟ್ಟೆಯ ಬೆಳ್ಮ ಸೇವಾಶ್ರಮದ ನಿವಾಸಿಗಳಿಗೆ ಹಣ್ಣು ಹಂಪಲು, ವಸ್ತ್ರ ವಿತರಣೆ, ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅಭಿನಂದನೆ, 82 ವಿವಿಧ ತಳಿಯ ಸಸಿ ನೆಡುವ ಕಾರ್ಯಕ್ರಮ ಗುರುವಾರ ನಡೆಯಿತು. ರೈತ ನಾಯಕರು, ಹುಟ್ಟು ಹೋರಾಟಗಾರರಾದ ಯಡಿಯೂರಪ್ಪನವರು ಬಹಳಷ್ಟು ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಪ್ರತೀ ವರುಷ ಅವರ ಹೆಸರಲ್ಲಿ ಸೋಮನಾಥನಿಗೆ ವಿಶೇಷ ಪೂಜೆ ಸಲ್ಲಿಸಿ ವಿವಿಧ ಸಮಾಜಮುಖಿ ಕಾರ್ಯಗಳನ್ನ ನಡೆಸುತ್ತಾ ಬಂದಿದ್ದೇವೆಂದು ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು.
ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್ ಮಾತನಾಡಿ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷವು ಅಧಿಕಾರಕ್ಕೆ ಬರಲು ಯಡಿಯೂರಪ್ಪರೇ ಕಾರಣ. ಸರ್ವ ಜನಾಂಗವನ್ನು ವಿಶ್ವಾಸಕ್ಕೆ ಪಡೆದ ನಂಬರ್ ಒನ್ ಮುಖ್ಯಮಂತ್ರಿ ಅವರಾಗಿದ್ದಾರೆ. ರಾಜ್ಯದ ಅಭಿವೃದ್ಧಿಯಲ್ಲೂ ಬಿ.ಎಸ್ ಯಡಿಯೂರಪ್ಪ ಅವರ ಪಾತ್ರ ಮಹತ್ವದ್ದಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ 10 ಫಲಾನುಭವಿ ಹೆಣ್ಮಕ್ಕಳನ್ನು ಅಭಿನಂದಿಸಲಾಯಿತು. ಬಿಜೆಪಿ ಮಂಗಳೂರು ಮಂಡಲ ಪ್ರಧಾನ ಕಾರ್ಯದರ್ಶಿ ದಯಾನಂದ ತೊಕ್ಕೊಟ್ಟು, ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರ್, ಮಂಡಲ ಯುವಮೋರ್ಚಾ ಅಧ್ಯಕ್ಷ ಮುರಳಿ ಕೊಣಾಜೆ, ಸೌಮ್ಯ ಆರ್.ಶೆಟ್ಟಿ, ಪ್ರಮುಖರಾದ ರಾಮಚಂದ್ರ, ಕೃಷ್ಣಪ್ಪ, ರೂಪ, ಅನಂತ ಕೃಷ್ಣ ಯಾದವ, ಸತೀಶ್ ದೀಪಮ್ ಮೊದಲಾದವರು ಉಪಸ್ಥಿತರಿದ್ದರು.
Yeddyurappas Legacy Celebrated Initiatives Remembered by the Public on His Birthday sats Ravindra shetty in mangalore
27-02-25 05:50 pm
HK News Desk
Forest Fire, Kanakapura, Bangalore: ಒಣಹುಲ್ಲು...
27-02-25 05:48 pm
ಕುಂಭಮೇಳಕ್ಕೆ ಹೋಗಿರೋದು ತಪ್ಪಾದ್ರೆ ಡಿಕೆಶಿ ಅವರನ್ನು...
27-02-25 03:28 pm
DK Shivakumar, BJP, Amit Shah, congress: ಡಿಕೆ...
27-02-25 01:46 pm
ಸಿಎಂಗೆ ಕ್ಲೀನ್ ಚಿಟ್ ಕೊಟ್ಟರೂ, ಮುಡಾ ಹಗರಣದ ಬಗ್ಗೆ...
26-02-25 10:43 pm
26-02-25 05:38 pm
HK News Desk
Corruption, Amit Shah, MK Stalin: ಕ್ಷೇತ್ರ ಪುನ...
26-02-25 05:11 pm
CBI raid, Gain Bitcoin: 6,600 ಕೋಟಿ ರೂ. ಕ್ರಿಸ್...
26-02-25 12:47 pm
Vijay Wardhan, UPSC story: Success story 35 ಬ...
24-02-25 10:14 pm
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
27-02-25 07:09 pm
Mangalore Correspondent
PUC student Missing, Farangipete: ಪಿಯುಸಿ ವಿದ್...
27-02-25 03:11 pm
Missing, Mangalore, Konaje police: ಕೋಣಾಜೆಯ ಯು...
26-02-25 10:15 pm
Mangaluru-Kabaka Train, Brijesh Chowta: ಮಂಗಳೂ...
26-02-25 03:40 pm
Urwa Police, Mangalore, Selfie, Suspend: ಸೈಬರ...
25-02-25 10:58 pm
26-02-25 10:48 pm
HK News Desk
Sirsi Crime, stabbing: ಶಿವರಾತ್ರಿ ಹಬ್ಬಕ್ಕೆ ಮನೆ...
26-02-25 01:27 pm
Urwa Police, Mangalore Crime, online Fraud: ಕ...
25-02-25 08:10 pm
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm