ಬ್ರೇಕಿಂಗ್ ನ್ಯೂಸ್
27-02-25 10:09 pm Mangalore Correspondent ಕರಾವಳಿ
ಮಂಗಳೂರು, ಫೆ.27: ಕರ್ನಾಟಕ ರಾಜ್ಯದಲ್ಲಿ 1-7-2022 ರಿಂದ 31-7-2024 ರ ಅವಧಿಯಲ್ಲಿ ನಿವೃತ್ತರಾದ ಸರಕಾರಿ ಅಧಿಕಾರಿ/ನೌಕರ ವರ್ಗದ 26,700 ಮಂದಿ ನಿವೃತ್ತರಿಗೆ 7ನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನಿವೃತ್ತಿ ಆರ್ಥಿಕ ಸೌಲಭ್ಯ ನೀಡಲು ಆಗ್ರಹಿಸಿ ಫೆ.28 ರಿಂದ ಬೆಂಗಳೂರಿನಲ್ಲಿ ಅನಿರ್ಧಿಷ್ಟಾವಧಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ಜಿಲ್ಲಾ ಪ್ರಧಾನ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ ಹೇಳಿದರು.
ನಗರದ ದ.ಕ. ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿಗಳು 10 ದಿನಗಳ ಒಳಗಡೆ ನಮ್ಮನ್ನು ಚರ್ಚೆಗೆ ಆಹ್ವಾನಿಸದಿದ್ದಲ್ಲಿ ಹೋರಾಟಗಾರರಾದ ಅಣ್ಣಾ ಹಜಾರೆ ಮತ್ತು ಡಾ.ಸಂತೋಷ ಹೆಗಡೆ ನೇತೃತ್ವದಲ್ಲಿ ಬೆಂಗಳೂರು ಚಲೋ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆಯನ್ನು ಅನಿರ್ಧಿಷ್ಟ ಅವಧಿಗೆ ನಡೆಸಲಿದ್ದೇವೆ ಎಂದರು.
ಸರಕಾರಿ ನೌಕರರಿಗೆ ವೇತನ ಭತ್ಯೆ ಹಾಗೂ ಪಿಂಚಣಿ ಪರಿಷ್ಕರಿಸಲು ಡಾ.ಸುಧಾಕರ ರಾವ್ ನೇತೃತ್ವದಲ್ಲಿ 7ನೇ ವೇತನ ಆಯೋಗವನ್ನು ರಚಿಸಲಾಗಿತ್ತು. ಇದರ ಆಧಾರದಲ್ಲಿ 01-08-2024ರಿಂದ ವೇತನ ಭತ್ಯೆಗಳ ಆರ್ಥಿಕ ಸೌಲಭ್ಯಗಳನ್ನು ಮಂಜೂರು ಮಾಡಲು ರಾಜ್ಯ ಸರಕಾರ ಆದೇಶ ಮಾಡಿತ್ತು. ಈ ಆದೇಶ 1-07-2022ರಿಂದಲೇ ಜಾರಿಗೊಳಿಸಬೇಕಿದ್ದು, 01-08-2024 ರಿಂದ ಅನ್ವಯ ಆಗುವಂತೆ ಜಾರಿಗೊಳಿಸಿದ್ದಾರೆ. ಇದರಿಂದ 1-7-2022 ರಿಂದ 31-7-2024 ರ ಅವಧಿಯಲ್ಲಿ 25 ತಿಂಗಳು ಸೇವೆ ಸಲ್ಲಿಸಿ ನಿವೃತ್ತರಾದ ನೌಕರರಿಗೆ 7ನೇ ವೇತನ ಆಯೋಗದ ಅನುಷ್ಟಾನದಲ್ಲಿ ಆರ್ಥಿಕ ನಷ್ಟವಾಗಿದೆ. 7ನೇ ವೇತನ ಆಯೋಗದ ವರದಿಯಂತೆ ಪರಿಷ್ಕೃತ ವೇತನದ ಮೇಲೆ ನಿವೃತ್ತಿ ಆರ್ಥಿಕ ಸೌಲಭ್ಯಗಳಾದ ಡಿ.ಸಿ.ಆರ್.ಜಿ., ಕಮ್ಯುಟೇಶನ್ ಹಾಗೂ ಗಳಿಕೆ ರಜೆ ನಗದೀಕರಣಗಳ ಸೌಲಭ್ಯಗಳ ಲೆಕ್ಕಾಚಾರದ ವ್ಯತ್ಯಾಸದ ಮೊತ್ತವನ್ನು ಮಾತ್ರ ಒಂದೇ ಸಲ ಪಾವತಿಯಂತೆ ಕೊಡಬೇಕು. ಕಳೆದ 5 ತಿಂಗಳುಗಳಿಂದ ಈ ಕುರಿತು ನಿರಂತರವಾಗಿ ನಾನಾ ವಿಧಗಳಲ್ಲಿ ಹೋರಾಟವನ್ನು ಮಾಡಿದ್ದೇವೆ ಎಂದರು.
ವಿಭಿನ್ನ ರೀತಿಯ ಬೆಂಗಳೂರು ಚಲೋ
ಮುಖ್ಯಮಂತ್ರಿಗಳು ಬೇಡಿಕೆ ಈಡೇರಿಕೆ ಕುರಿತು ಚರ್ಚೆಗೆ ಆಹ್ವಾನಿಸದಿದ್ದಲ್ಲಿ ಫೆ.28ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರಮುಖ ಮಠಾಧೀಶರು, ಸಾಮಾಜಿಕ ಹೋರಾಟಗಾರರಾದ ಬಿ.ಡಿ. ಹಿರೇಮಠ,, ಎಸ್.ಆರ್. ಹಿರೇಮಠ ಮುಂತಾದವರ ಬೆಂಬಲದೊಂದಿಗೆ ಬೆಂಗಳೂರು ಚಲೋ ರಾಜ್ಯ ಮಟ್ಟದ ಅನಿರ್ಧಿಷ್ಟಾವಧಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ದಕ ಜಿಲ್ಲೆಯಿಂದ 600ಕ್ಕೂ ಅಧಿಕ ಮಂದಿ ತಮ್ಮ ಕುಟುಂಬದ ಜೊತೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಿರಿಲ್ ರಾಬರ್ಟ್ ಡಿಸೋಜ ಮಾಹಿತಿ ನೀಡಿದರು.
ಈ ಸಂದರ್ಭ ನಿವೃತ್ತ ಸರಕಾರಿ ನೌಕರರಾದ ಸ್ಟ್ಯಾನಿ ತಾವ್ರೋ, ಮೋಹನ ಬಂಗೇರ ತೊಕೊಟ್ಟು, ನಾರಾಯಣ ತಲಪಾಡಿ, ಉಮೇಶ್ ಕುಮಾರ್, ರಾಜಗೋಪಾಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಿವೃತ್ತ ಸರಕಾರಿ ನೌಕರರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು. ಇದರ ಜತೆಯಲ್ಲಿ ವೇತನ ಆಯೋಗ ಶಿಫಾರಸು ಮಾಡಿದಂತೆ ನಿವೃತ್ತ ನೌಕರರಿಗೆ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆ ಜಾರಿಗೆ ಬರುವ ತನಕ ಮಾಸಿಕ 500 ವೈದ್ಯಕೀಯ ಭತ್ತೆ ನೀಡುವುದು, 70ರಿಂದ 80 ವರ್ಷ ಪೂರ್ತಿಗೊಳಿಸಿದ ನಿವೃತ್ತರಿಗೆ ಶೇ.10ರಷ್ಟು ಹೆಚ್ಚುವರಿ ಪಿಂಚಣಿಗೆ ಆದೇಶ ನೀಡಬೇಕು ಎಂದು ದ.ಕ.ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ಎನ್. ಸೀತಾರಾಮ್ ಆಗ್ರಹಿಸಿದ್ದಾರೆ.
"Massive Turnout in Bangalore for Indefinite Protest Demanding 7th Pay Commission Benefits for Retired Government Employees"
20-07-25 08:35 pm
Bangalore Correspondent
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
20-07-25 03:06 pm
Mangaluru Correspondent
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm